Connect with us

BANTWAL

ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನ ಸೇವಾ ಶುಲ್ಕ ದುಪ್ಪಟ್ಟು ಏರಿಕೆ-ಭಕ್ತರ ಆಕ್ರೋಶ

Published

on

ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ದೈವ ಕ್ಷೇತ್ರ ಬಂಟ್ವಾಳ ತಾಲೂಕಿನ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಸೇವಾ ಶುಲ್ಕವನ್ನು ರಾಜ್ಯ ಮುಜರಾಯಿ‌ ಇಲಾಖೆ ಏಕಾಏಕಿ ದುಪ್ಪಟ್ಟು ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ದೈವ ಕ್ಷೇತ್ರ ಬಂಟ್ವಾಳ ತಾಲೂಕಿನ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಸೇವಾ ಶುಲ್ಕವನ್ನು ರಾಜ್ಯ ಮುಜರಾಯಿ‌ ಇಲಾಖೆ ಏಕಾಏಕಿ ದುಪ್ಪಟ್ಟು ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು ಸಾವಿರ ವರ್ಷಗಳ ಇತಿಹಾಸವಿರುವ ಪಣೋಲಿಬೈಲು‌ ಕ್ಷೇತ್ರಕ್ಕೆ ಊರು ಹಾಗೂ ಪರವೂರುಗಳಿಂದ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಬಂದು ಹರಕೆ ಸಲ್ಲಿಸುತ್ತಾರೆ.

ದೈವಕ್ಕೆ ಕೊಡುವ ಅಗೆಲು ಸೇವೆ ಮತ್ತು ಕೋಲ ಸೇವೆ ಈ ಕ್ಷೇತ್ರದ ಪ್ರಮುಖ ಸೇವೆಗಳಾಗಿದ್ದು, ಈ ಎರಡೂ ಸೇವೆಗಳ ಶುಲ್ಕವನ್ನು ಮುಜರಾಯಿ ಇಲಾಖೆ ಏರಿಕೆ ಮಾಡಿದೆ.

ಅಗೆಲು ಸೇವೆಯ ರಶೀದಿ ಬೆಲೆಯನ್ನು ಈ ಹಿಂದೆ ಇದ್ದ 25 ರೂ. 50 ರೂ. ಏರಿಸಲಾಗಿದ್ದು, ದೈವದ ಕೋಲದ ಸೇವೆಗೆ ಇದ್ದ 3000 ರೂ. ಬದಲಾಗಿ 5000 ರೂ.ಗೆ ಏರಿಸಲಾಗಿದೆ.

ಅಲ್ಲದೆ ಉಚಿತವಾಗಿ ನಡೆಯುತ್ತಿದ್ದ ವಾಹನ ಪೂಜೆಗೆ 75 ರೂ.ಗಳ ದರ ನಿಗದಿಪಡಿಸಲಾಗಿದೆ.

ಪಣೋಲಿಬೈಲು ಕ್ಷೇತ್ರದಲ್ಲಿ ಭಕ್ತರು ತಮಗೆ ಇಷ್ಟ ಬಂದ ಸೇವೆ ಮಾಡಿ, ಅವರಿಗೆ ಇಷ್ಟ ಬಂದ ಹರಕೆಯನ್ನು ನೀಡಿಕೊಂಡು ಬರುತ್ತಿದ್ದುದು ಅಲ್ಲಿನ ವಿಶೇಷತೆಯಾಗಿದೆ.

ಅಲ್ಲದೆ ಕ್ಷೇತ್ರದ ಯಾವುದೇ ಬದಲಾವಣೆಗಳನ್ನು ಮಾಡಬೇಕಿದ್ದರೂ, ಕ್ಷೇತ್ರಕ್ಕೆ ಸಂಬಂಧಪಟ್ಟ ನಾಲ್ಕ ಮಾಗಣೆಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳು ಸಂಪ್ರದಾಯವನ್ನು ಪಾಲಿಸಲಾಗುತ್ತಿತ್ತು.

ಆದರೆ ಈ ಬಾರಿ ಜನರಿಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ದರ ಹೆಚ್ವಿಸಿರುವುದು ಭಕ್ತರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ‌ ಕಾರಣವಾಗಿದೆ.

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending