Connect with us

    LATEST NEWS

    ಪ್ಯಾರಿಸ್ ಒಲಿಂಪಿಕ್ಸ್: ಈಜುಕೊಳದ ಬಳಿ ಕುಸಿದು ಬಿದ್ದ ಸ್ಪರ್ಧಿ

    Published

    on

    ಮಂಗಳೂರು/ ಫ್ರಾನ್ಸ್ : ಸ್ಲೊವಾಕಿಯಾದ ಈಜುಗಾರ್ತಿ 21 ವರ್ಷದ ತಮಾರಾ ಪೊಟೊಕಾ ಅವರು ಮಹಿಳೆಯರ 200 ಮೀ. ಇಂಡಿವಿಜುವಲ್ ಮೆಡ್ಲ್ ಸ್ಪರ್ಧೆಯ ಅರ್ಹತಾ ಹೀಟ್ ನಂತರ ಶುಕ್ರವಾರ(ಆ.2) ಈಜುಕೊಳದ ಬಳಿ ಕುಸಿದು ಬಿದ್ದರು. ಬಳಿಕ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಸ್ಟ್ರೆಚರ್ ನಲ್ಲಿ ಕರೆದೊಯ್ಯಲಾಯಿತು.


    ಸ್ಪರ್ಧೆ ಮುಗಿಸಿ ಕೊಳದಿಂದ ಹೊರಬಂದ ಕೆಲವೇ ಕ್ಷಣಗಳಲ್ಲಿ ತಮಾರಾ ಕುಸಿದು ಬಿದ್ದರು. ತಕ್ಷಣ ವೈದ್ಯಕೀಯ ಸಿಬ್ಬಂದಿ ಅವರ ಬಳಿ ಆಗಮಿಸಿತು.

    ಇದನ್ನೂ ಓದಿ : ಮರಕ್ಕೆ ಡಿ*ಕ್ಕಿ ಹೊಡೆದ ಕಾರು; ಮೂವರು ವಿದ್ಯಾರ್ಥಿಗಳು ಸಾ*ವು
    ಸ್ಲೋವಾಕಿಯಾ ರಾಜಧಾನಿ ಬ್ರಾಟಿಸ್ಲಾವಾದಲ್ಲಿ ನೆಲೆಸಿರುವ ತಮಾರಾಗೆ ಇದು ಮೊದಲ ಒಲಿಂಪಿಕ್ಸ್. ಹೀಟ್ ನಲ್ಲಿ ಅವರು 2 ನಿಮಿಷ 14. 20 ಸೆ. ಗಳಲ್ಲಿ ಗುರಿ ಮುಟ್ಟುವ ಮೂಲಕ ಏಳನೇ ಸ್ಥಾನ ಪಡೆದು, ಸ್ಪರ್ಧೆಯಿಂದ ಹೊರಬಿದ್ದರು.

    LATEST NEWS

    ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತ; ಸೆಮಿಫೈನಲ್ ಗೆ ಲಗ್ಗೆ

    Published

    on

    ಮಂಗಳೂರು/ ಚೀನಾ: ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ – ಪಾಕಿಸ್ತಾನ  ನಡುವೆ ಹೈವೋಲ್ಟೇಜ್ ಪಂದ್ಯ ಇಂದು(ಸೆ.14) ನಡೆಯಿತು. ಪಂದ್ಯದಲ್ಲಿ ಹರ್ಮನ್ಪ್ರೀತ್ ನಾಯಕತ್ವದ ಭಾರತ ಹಾಕಿ ತಂಡ, ಪಾಕಿಸ್ತಾನ ತಂಡವನ್ನು 2-1 ಗೋಲುಗಳಿಂದ ಮಣಿಸಿ ಸತತ ಐದನೇ ಜಯ ದಾಖಲಿಸಿತು. ಇದರೊಂದಿಗೆ ಭಾರತ ಹಾಕಿ ತಂಡ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.

    ಚೀನಾದಲ್ಲಿ ನಡೆಯುತ್ತಿರುವ ಟೂರ್ನಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಿದ್ದ ಟೀಂ ಇಂಡಿಯಾ ಮತ್ತೊಮ್ಮೆ ಅಮೋಘ ಪ್ರದರ್ಶನ  ನೀಡಿದೆ. ಟೂರ್ನಿಯಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋಲದೆ, ಸೋಲಿಲ್ಲದ ಸರದಾರನಾಗಿ ಮಿಂಚಿದೆ.

    ಹಳದಿ ಕಾರ್ಡ್​ ಪಡೆದ ಮೂವರು :

    ಭಾರತ ಮತ್ತು ಪಾಕಿಸ್ತಾನ ನಡುವೆ ಸ್ಪರ್ಧೆ ಇದ್ದರೆ ಫೈಟ್ ನಡೆಯುವುದು ಮಾಮೂಲಿ. ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಈ ಪಂದ್ಯದಲ್ಲೂ ಹಾಗೆಯೇ ನಡೆದಿದೆ. ಪಂದ್ಯದ ವೇಳೆ ಉಭಯ ತಂಡಗಳ ಆಟಗಾರರ ನಡುವೆ ತೀವ್ರ ವಾಗ್ವಾದ ನಡೆಯಿತು.

    ಇದನ್ನೂ ಓದಿ : ಜ್ಯೂಸ್‌ನಲ್ಲಿ ಮೂತ್ರ ಮಿಕ್ಸ್‌..! ಅಂಗಡಿ ಮಾಲೀಕ ಪೊಲೀಸ್ ವಶಕ್ಕೆ..!

    ಆಟಗಾರರು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಹೋದರು. ಹೀಗಾಗಿ ಕಠಿಣ ಕ್ರಮ ಕೈಗೊಂಡ ಅಂಪೈರ್‌ ಮೂವರು ಆಟಗಾರರಿಗೆ ಹಳದಿ ಕಾರ್ಡ್ ನೀಡಿದರು. ಹೀಗಾಗಿ ಪಾಕಿಸ್ತಾನದ ಇಬ್ಬರು ಆಟಗಾರರು ಪಂದ್ಯದಿಂದ ಹೊರಬಿದ್ದರೆ, ಭಾರತದ ಒಬ್ಬ ಆಟಗಾರ ಅಮಾನತು ಶಿಕ್ಷೆ ಅನುಭವಿಸಬೇಕಾಯಿತು.

    Continue Reading

    BANTWAL

    ಯಕ್ಷಸಿರಿ ಪ್ರಶಸ್ತಿಗೆ ದಿವಾಕರ್ ದಾಸ್ ಕಾವಳಕಟ್ಟೆ ಆಯ್ಕೆ

    Published

    on

    ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದರು ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

    ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಶನಿವಾರ(ಸೆ.14) ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನವೆಂಬರ್ ತಿಂಗಳಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದರು.

    ದಿವಾಕರ್ ದಾಸ್ ಕಾವಳಕಟ್ಟೆ ಇವರ ಬಗ್ಗೆ:

    ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಶ್ರುತಿ ಆರ್ಟ್ಸ್ ಸಂಸ್ಥೆಯ ಸಂಸ್ಥಾಪಕ, ಯಕ್ಷಗಾನ ಕಲಾವಿದ, ಸಂಘಟಕ ದಿವಾಕರ ದಾಸ್ ಕಾವಳಕಟ್ಟೆ. ಯಕ್ಷ ಕಲೆಯನ್ನು ಅತ್ಯಂತ ಒಲವಿನಿಂದ ಮೈಗೂಡಿಸಿಕೊಂಡು ಬೆಳೆಸುತ್ತ ಬೆಳೆದವರು.

    ಕಳೆದ 30 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಕಲಾವಿದನಾಗಿ, ತರಬೇತುದಾರನಾಗಿ, ಯಕ್ಷಗಾನ ಸಂಘಟಕನಾಗಿ, ತಲಕಲ, ಕಾಂತಾವರ, ಸುರತ್ಕಲ್, ಮಂಗಳಾದೇವಿ ಮೇಳಗಳಲ್ಲಿ 14 ವರ್ಷ ಸ್ತ್ರೀ ವೇಷದಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 1999ರಲ್ಲಿ ಕಾವಳಕಟ್ಟೆಯಲ್ಲಿ ಶೃತಿ ಆರ್ಟ್ಸ್ ಕಲಾ ಸಂಸ್ಥೆ ಸ್ಥಾಪಿಸಿ ಕಲಾ ಪ್ರದರ್ಶನಗಳಿಗೆ ಬೇಕಾದ ವೇಷಭೂಷಣ ತಯಾರಿಸಿ, ಕರ್ನಾಟಕ ರಾಜ್ಯದ ಬಹುತೇಕ ಪ್ರಸಾದನ ಸಂಸ್ಥೆ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಿಗೆ ಹಾಗೂ ಕಲಾ ತಂಡಗಳಿಗೆ ವೇಷಭೂಷಣ ಒದಗಿಸಿರುವ ಇವರು ವಿದ್ಯಾರ್ಥಿಗಳಿಗೆ, ಯಕ್ಷಗಾನ ಆಸಕ್ತರಿಗೆ ನಾಟ್ಯ ಮತ್ತು ಅರ್ಥಗಾರಿಕೆಯ ತರಬೇತಿ ನೀಡಿದ್ದಾರೆ. ಅಲ್ಲದೇ ತೆಂಕುತಿಟ್ಟಿನ ಹೆಚ್ಚಿನ ಯಕ್ಷಗಾನ ಮೇಳಗಳಿಗೆ ವೇಷಭೂಷಣವನ್ನು ತಯಾರಿಸಿ ಕೊಡುತ್ತಿದ್ದಾರೆ.

    ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರನ್ನು ಒಟ್ಟು ಸೇರಿಸಿ ಅಲ್ಲಲ್ಲಿ ಯಕ್ಷಗಾನ, ತಾಳಮದ್ದಳೆ ಕೂಟಗಳನ್ನು ಸಂಘಟಿಸುತ್ತಿರುವ ಇವರು ಬೆಳಗಾವಿಯಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಯಕ್ಷಗಾನ ತಂಡದೊಂದಿಗೆ ಭಾಗವಹಿಸಿ ಕಲಾ ಪ್ರದರ್ಶನ, ಹಂಪಿ ಉತ್ಸವದಲ್ಲಿ ಯಕ್ಷಗಾನ ಪ್ರದರ್ಶನ, ವಿಶ್ವ ಯುವಜನ ಮೇಳದಲ್ಲಿ ಯಕ್ಷಗಾನ ಪ್ರದರ್ಶನ, ರಾಜ್ಯ ಮಟ್ಟದ ಯುವಜನ ಮೇಳಗಳಲ್ಲಿ ಯಕ್ಷಗಾನ ಪ್ರದರ್ಶನ, ಆಫ್ರೀಕಾ ಶೃಂಗಸಭೆ, ದೆಹಲಿಯಲ್ಲಿ ಯಕ್ಷಗಾನ ನೃತ್ಯ ರೂಪಕ, ಮೈಸೂರು ದಸರಾ ಉತ್ಸವಗಳಲ್ಲಿ ಯಕ್ಷಗಾನ ಕಾರ್ಯಕ್ರಮಗಳನ್ನು ಪ್ರದರ್ಶಿಸಿದ್ದಾರೆ. 2014ರಲ್ಲಿ ಸರಕಾರದ ಉದ್ಯೋಗ ಖಾತರಿ ಯೋಜನೆಯ ಜಾಗೃತಿ ಯಕ್ಷಗಾನ ಪ್ರದರ್ಶನ ನೀಡಿರುವ ಇವರು ಕೆದ್ದಳಿಕೆ ಸರಕಾರಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಶಾಲೆಯನ್ನು ರಾಜ್ಯದಲ್ಲೇ ಮಾದರಿಯಾಗಿ ರೂಪಿಸುವಲ್ಲಿ ಪ್ರಯತ್ನಿಸಿದ್ದಾರೆ.

    ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರಾಜ್ಯ ಮಟ್ಟದ ಸುವರ್ಣ ಕರ್ನಾಟಕ ಸಾಧನಾಶ್ರೀ ಪ್ರಶಸ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುವರ್ಣ ಕರ್ನಾಟಕ ಜಯಂತಿ ಪ್ರಶಸ್ತಿ, ಕೆದ್ದಳಿಕೆ ಶಾಲೆಯ ಎಸ್.ಡಿ.ಎಂ.ಸಿ.ಗೆ ರಾಜ್ಯ ಮಟ್ಟದ ಉತ್ತಮ ಅಧ್ಯಕ್ಷ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಗೌರವ, ಉತ್ತಮ ಸ್ತ್ರೀ ವೇಷಧಾರಿ ಪ್ರಶಸ್ತಿ ಸೇರಿ ಸುಮಾರು 60ಕ್ಕೂ ಹೆಚ್ಚಿನ ಪ್ರಶಸ್ತಿಗಳು ಲಬಿಸಿವೆ.

    Continue Reading

    LATEST NEWS

    ಜ್ಯೂಸ್‌ನಲ್ಲಿ ಮೂತ್ರ ಮಿಕ್ಸ್‌..! ಅಂಗಡಿ ಮಾಲೀಕ ಪೊಲೀಸ್ ವಶಕ್ಕೆ..!

    Published

    on

    ಉತ್ತರ ಪ್ರದೇಶ : ಜ್ಯೂಸ್‌ಗೆ ಮೂತ್ರ ಬೆರೆಸಿ ಗ್ರಾಹಕರಿಗೆ ನೀಡುತ್ತಿದ್ದ ಜ್ಯೂಸ್ ಅಂಗಡಿ ಮಾಲೀಕ ಹಾಗೂ ಆತನ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಜ್ಯೂಸ್ ಕುಡಿದ ಜನರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ.


    ಬಿಸಿಲಿನ ತಾಪಕ್ಕೆ ಜ್ಯೂಸ್ ಕುಡಿದು ಬಾಯಾರಿಕೆ ತೀರಿಸಿಕೊಳ್ಳುತ್ತಿದ್ದ ಜನರಿಗೆ ಜ್ಯೂಸ್ ಅಂಗಡಿಯವ ಮೂತ್ರ ಕುಡಿಸಿದ ಘಟನೆ ಇದು. ಇದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದ್ದು, ಸದ್ಯ ಅಂಗಡಿ ಮಾಲೀಕ ಪೊಲೀಸರ ಅತಿಥಿಯಾಗಿದ್ದಾನೆ. ಜ್ಯೂಸ್ ಕುಡಿದ ಜನರಿಗೆ ಅದರ ರುಚಿ ಹಾಗೂ ವಾಸನೆಯಿಂದ ಅನುಮಾನ ಬಂದಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜ್ಯೂಸ್ ಅಂಗಡಿಯಲ್ಲಿ ಪರಿಶೀಲನೆ ನಡೆಸಿದಾಗ ಸೀಲ್ ಮಾಡಿದ ಕ್ಯಾನ್‌ನಲ್ಲಿ ಮೂತ್ರ ತುಂಬಿಸಿಟ್ಟಿದ್ದು ಕಂಡು ಬಂದಿದೆ.


    ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ್ದ ಜನರು ಅಂಗಡಿ ಮಾಲೀಕ ಸಮೀರ್ ಎಂಬಾತನ್ನು ಹಿಡಿದು ಸರಿಯಾಗಿ ಗೂಸ ನೀಡಿದ್ದಾರೆ. ಬಳಿಕ ಅಂಗಡಿಯನ್ನು ಸೀಝ್‌ ಮಾಡಿದ ಪೊಲೀಸರು ಕ್ಯಾನ್‌ನಲ್ಲಿದ್ದ ಮೂತ್ರವನ್ನು ಪರೀಕ್ಷೆಗೆ ಲ್ಯಾಬ್‌ಗೆ ಕಳುಹಿಸಿದ್ದಾರೆ. ಜ್ಯೂಸ್ ಅಂಗಡಿಯಲ್ಲಿ ಮೂತ್ರ ಸ್ಟಾಕ್ ಇಟ್ಟ ಬಗ್ಗೆ ಅಂಗಡಿ ಮಾಲೀಕ ಪೊಲೀಸರಿಗೆ ಯಾವುದೇ ಸಮಜಾಯಿಶಿ ನೀಡಿಲ್ಲ. ಹೀಗಾಗಿ ಈತ ಜ್ಯೂಸ್ ಜೊತೆಯಲ್ಲಿ ಜನರಿಗೆ ಮೂತ್ರ ಮಿಕ್ಸ್ ಮಾಡಿ ಕೊಡ್ತಾ ಇದ್ದ ಅನ್ನೋದು ಖಾತ್ರಿಯಾಗಿದೆ.

    Continue Reading

    LATEST NEWS

    Trending