Tuesday, January 31, 2023

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.

ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.

ಕಾರಿನ ಇಂಜಿನ್ ನಲ್ಲಿ ದಟ್ಟವಾದ ಹೊಗೆ ಬರಲಾರಂಭಿಸಿ ನೋಡ – ನೋಡುತ್ತಿದ್ದಂತೆ ಪರಿಸರವೆಲ್ಲ ಹೊಗೆಯಿಂದ ಆವೃತವಾಗಿತ್ತು.

ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿಗೆ ಕಾರಣ ಏನೆಂದು ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕಿಟ್ ಬೆಂಕಿಗೆ ಕಾರಣವೆಂದು ಶಂಕಿಸಲಾಗಿದೆ.  ಸ್ಥಳಕ್ಕೆ  ACP ಗೀತಾ ಕುಲಕರ್ಣಿ, ಕದ್ರಿ ಠಾಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...

ಮಂಗಳೂರು : ಫಾರಿನ್ ಕರೆನ್ಸಿ ಕೊಡುವ ನೆಪದಲ್ಲಿ 4 ಲಕ್ಷ ಎಗರಿಸಿ  ಪರಾರಿ..!

ಮಂಗಳೂರು : ವಿದೇಶಿ ಕರೆನ್ಸಿ ಕೊಡುವ ನೆಪದಲ್ಲಿ ನಾಲ್ಕು ಲಕ್ಷ ಹಣವನ್ನು ಲಪಟಾಯಿಸಿ ವಂಚಕ ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.ಸೌದಿ ಅರೇಬಿಯಾದ ಕರೆನ್ಸಿ ಕೊಡುವುದಾಗಿ ನಂಬಿಸಿ 4 ಲಕ್ಷ ರೂ. ಪಡೆದುಕೊಂಡು...

ಮಂಗಳೂರು: ಪಾಳುಬಾವಿಗೆ ಬಿದ್ದ 4 ಬೃಹತ್ ಹೆಬ್ಬಾವುಗಳ ರಕ್ಷಣೆ..!

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು...