ತಿರುವನಂತಪುರಂ: ಸೆಕ್ಸ್‌ಗಾಗಿ ಹಾಗೂ ಹಣಕ್ಕಾಗಿ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳುವ ದಂಧೆಯನ್ನು ಕೇರಳ ಪೊಲೀಸರು ಬೇಧಿಸಿದ್ದು, ಪ್ರಕರಣ ಸಂಬಂಧ 7 ಜನರನ್ನು ಬಂಧಿಸಿದ್ದಾರೆ. ಉಳಿದವರ ಮೇಲೆ ತೀವ್ರ ನಿಗಾ ಇಡಲಾಗಿದೆ.
ಸಾಂದರ್ಭಿಕ ಚಿತ್ರ
ಈ ಬಗ್ಗೆ ಮಹಿಳೆಯೊಬ್ಬರು ಪೊಲೀಸ್‌ಗೆ ದೂರು ನೀಡಿದ್ದಾರೆ. ಇದರ ಜಾಡು ಬೆನ್ನತ್ತಿದ್ದಾಗ ಈ ಪ್ರಕರಣ ಬಯಲಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಾದ ಟೆಲಿಗ್ರಾಂ, ಮೆಸೆಂಜರ್ ಗುಂಪುಗಳನ್ನು ರಚನೆ ಮಾಡಿಕೊಂಡಿದ್ದಾರೆ.
ಕೇರಳದ ಮೂರು ಜಿಲ್ಲೆಯ 1 ಸಾವಿರಕ್ಕೂ ಅಧಿಕ ಜನರು ಈ ಗುಂಪುಗಳ ಸದಸ್ಯರಾಗಿದ್ದಾರೆ. ಹಣಕ್ಕಾಗಿ ತಮ್ಮ ಹೆಂಡತಿಯರನ್ನು ಪರ ಪುರುಷರ ಜೊತೆ ವಿನಿಮಯ ಮಾಡಿಕೊಳ್ಳುತ್ತಿದ್ದರು.
ಈ ಗುಂಪುಗಳಲ್ಲಿ ಸಿರಿವಂತ ಕುಟುಂಬದವರೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಮೂವರು ಗಂಡಸರ ಜೊತೆ ಒಬ್ಬ ಮಹಿಳೆಯನ್ನೂ ಹಂಚಿಕೊಂಡ ಬಗ್ಗೆಯೂ ಉದಾಹರಣೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಗುಂಪುಗಳ ಮೇಲೆ ತೀವ್ರ ನಿಗಾ ಇರಿಸಿದ್ದು, ಇವರು ಬೇರೆ ಗುಂಪುಗಳ ಜೊತೆ ಸಂಪರ್ಕ ಹೊಂದಿದ್ದಾರಾ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಮೂಲಗಳು ತಿಳಿಸಿವೆ.
ಉಳ್ಳಾಲ : ಕೋಟೆಕಾರು ವ್ಯವಸಾಯ ಸಹಕಾರಿ ಸಂಘ ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ಶುಕ್ರವಾರ(ಜ.17) ನಡೆದ ಕೋಟ್ಯಂತರ ರೂ. ಮೌಲ್ಯದ ನಗ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಅಮ್ಮನಕೋವಿಲ್‌ನ ಮುರುಗಂಡಿ ತೇವರ್ (36), ಮುಂಬೈ ಗೋಪಿನಾಥ್ ಚೌಕ ನಿವಾಸಿ ಯೋಸುವಾ ರಾಜೇಂದ್ರನ್ (35) , ಮುಂಬೈ ಚೆಂಬೂರ್‌ನ ತಿಲಕ್‌ನಗರದ ಕಣ್ಣನ್ ಮಣಿ (36) ಬಂಧಿತ ಆರೋಪಿಗಳು ಎಂದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಸಹಕಾರಿ ಸಂಘದಿಂದ ದರೋಡೆ ಮಾಡಿ ಕೇರಳ ಮೂಲಕ ತಮಿಳುನಾಡಿಗೆ ಆರೋಪಿಗಳು ಪರಾರಿಯಾಗಿದ್ದರು. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ದರೋಡೆಗೆ ಬಳಸಿದ ಕಾರು, ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು/ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪಂತ್, ಈ ಬಾರಿ ತಂಡ ಚೊಚ್ಚಲ ಟ್ರೋಫಿ ಜಯಿಸಲು ಸಂಪೂರ್ಣ ಸಾಮರ್ಥ್ಯ ಬಳಸಿ ಆಡುವುದಾಗಿ ಹೇಳಿದ್ದಾರೆ.
‘ನಾನು ತಂಡಕ್ಕಾಗಿ ನನ್ನ 200 ಪ್ರತಿಶತವನ್ನು ನೀಡುತ್ತೇನೆ. ಅದು ನಿಮಗೆ ನನ್ನ ಬದ್ಧತೆಯಾಗಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ನನ್ನ ಸಾಮರ್ಥ್ಯ ಮೀರಿ ಪ್ರಯತ್ನಿಸುತ್ತೇನೆ. ನಾನು ನಿಜವಾಗಿಯೂ ಉತ್ಸುಕನಾಗಿದ್ದೇನೆ. ಹೊಸ ಆರಂಭ ಮತ್ತು ಹೊಸ ಶಕ್ತಿಗಾಗಿ ಎದುರು ನೋಡುತ್ತಿದ್ದೇನೆ’ ಎಂದು ಪಂತ್ ಹೊಸ ನಾಯಕನಾಗಿ ನೇಮಕಗೊಂಡ ನಂತರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ನಾವು ಹೊಸ ಭರವಸೆ, ಆಕಾಂಕ್ಷೆ, ಹೊಸ ಆತ್ಮವಿಶ್ವಾಸದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸುತ್ತೇವೆ. ನಮ್ಮ ಹೊಸ ನಾಯಕ ರಿಷಭ್ ಪಂತ್ ಅವರನ್ನು ನಿಮಗೆಲ್ಲರಿಗೂ ಪರಿಚಯಿಸಲು ನಾನು ಬಯಸುತ್ತೇನೆ’ ಎಂದು ತಂಡದ ಮಾಲೀಕ ಸಂಜೀವ್ ಗೋಯೆಂಕಾ ಹೇಳಿದ್ದಾರೆ.
ಕಳೆದ ವರ್ಷ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಅವರನ್ನು 27 ಕೋಟಿ ರೂ. ನೀಡಿ ಲಖನೌ ತಂಡ ಖರೀದಿಸಿತ್ತು.
ಮಂಗಳೂರು : 144 ವರ್ಷಗಳ ಬಳಿಕ ನಡೆಯುವ ಮಹಾ ಕುಂಭಮೇಳದಲ್ಲಿ ಅಖಿಲ ಭಾರತೀಯ ಸಂತಸಮಿತಿ ಕರ್ನಾಟಕ ಘಟಕದಿಂದ ಕಾರ್ಯಕರ್ತರು 2025 ಜನವರಿ 25 ರಿಂದ 30 ರವರೆಗೆ ಭಾಗವಹಿಸುವುದಾಗಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ವಿಶ್ವದ ಅತೀ ದೊಡ್ಡ ಉತ್ಸವವೇ ಮಹಾ ಕುಂಭಮೇಳ, ನಾನಾ ಯತಿ ಶ್ರೇಷ್ಠರು ಭಾಗವಹಿಸುವ ಕುಂಭಮೇಳದಲ್ಲಿ ವ್ಯತ್ಯಾಸ್ತ ಹೈದವ ಸಂಘಟನೆಗಳಿಂದ ಚರ್ಚೆ ಬೈಠಕ್ ನಡೆಯುವುದು. ಜನವರಿ 21,22 ದಿನಾಂಕದಲ್ಲಿ ಅಖಿಲ ಭಾರತೀಯ ಸಂತ ಸಮಿತಿಯ ಬೈಠಕ್ ನಡೆಯಲಿದೆ. ಅಖಿಲ ಭಾರತ ಸಂತ ಸಮಿತಿ ಹಾಗೂ ಗಂಗಾ ಮಹಾಸಭೆಯ ಸಂಯುಕ್ತತೆಯಲ್ಲಿ ವಾಸ್ತವ್ಯ ಉಪಹಾರದ ವ್ಯವಸ್ಥೆಯು ಸಂಘಟನೆಯಿಂದ ಮಾಡಲಾಗಿದೆ.
ರಾಜ್ಯಾಧ್ಯಕ್ಷರಾದ ಮಂಗಳೂರು ಓಂ ಶ್ರೀ ಮಠದ ಸ್ವಾಮಿ ಹಾಗೂ ಮಾತಾಶ್ರೀ ಓಂ ಶ್ರೀ ಶಿವ ಜ್ಞಾನಮಹಿ ಸರಸ್ವತಿ ಸಮೇತ ಮಹಾಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ, ಸಮಿತಿ ಮುಖ್ಯ ಕಾರ್ಯದರ್ಶಿ ಕೊಡಗು ಅರಸೀಗುಪ್ಪೆ ಶ್ರೀ ಮಂಜುನಾಥ ಕ್ಷೇತ್ರದ ಸ್ವಾಮಿ ಶ್ರೀ ರಾಜೇಶ್ ನಾಥ್ ಗುರೂಜಿ, ಸಂಘಟನಾ ಕಾರ್ಯದರ್ಶಿ ಕೊಡಗು ಬೆಂಗಳೂರು ವಿರಕ್ತಮಠದ ಶ್ರೀ ನಿಶ್ಚಲ ನಿರಂಜನ ದೇಶೀ ಕೇಂದ್ರ ಸ್ವಾಮೀಜಿ, ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಅರಸೀಕೆರೆ ರುದ್ರಾಕ್ಷ ಫೌಂಡೇಶನ್ ಶ್ರೀ ಜಯಪ್ರಕಾಶ್ ಗುರೂಜಿ, ಕಾರ್ಯದರ್ಶಿಗಳಾದ ಕಡೂರು ಅಯ್ಯಪ್ಪ ಸ್ವಾಮಿ ಕ್ಷೇತ್ರದ ಶ್ರೀ ಭದ್ರಾರಾಜ್ ಸ್ವಾಮೀಜಿ, ಫೌಂಡರ್ ಶ್ರೀ ಮಹಾ ತಪಸ್ವಿ ಸೇವಾ ಪ್ರತಿಷ್ಠಾನ ಹರಿಹರ ಪರಂಪೂಜ್ಯ ಅವಧೂತ ಕವಿ ಗುರುರಾಜ ಗುರೂಜಿ ಹಾಗೂ ಸಮಿತಿಯ ಸಂಯೋಜಕ ಸಮಿತಿ ಅಧ್ಯಕ್ಷ ಅಡ್ವಕೇಟ್ ವೀರೇಶ್ ಅಜ್ಜಣ್ಣನವರ್ ಹರಿಹರ ಜೊತೆಯಲ್ಲಿ ಸ್ವಾಮೀಜಿಯವರ ಶಿಷ್ಯರು ಭಾಗವಹಿಸಲಿದ್ದಾರೆ.