Home ಉಡುಪಿ ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು ತಡರಾತ್ರಿ ಮಲ್ಪೆ ಅಭಿವೃದ್ಧಿ ಸಮಿತಿಯ ನಿರ್ವಾಹಕ ಸಹಿತ,

ಏಳು ಮಂದಿ ಪಾರ್ಟಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಕುಂದಾಪುರ ಸಹಾಯಕ ಆಯುಕ್ತ ರಾಜು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಬಗ್ಗೆ ಖಚಿತ ಮೂಲಗಳು ತಿಳಿಸಿವೆ.

ಈ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಕರಾವಳಿ ಕಾವಲು ಪಡೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಮಲ್ಪೆ ಅಭಿವೃದ್ಧಿ ಸಮಿತಿಯ ನಿರ್ವಾಹಕ ಸುದೇಶ್ ಶೆಟ್ಟಿ ಸೇರಿದಂತೆ ಏಳು ಮಂದಿಯನ್ನು ವಿಚಾರಣೆ ನಡೆಸಿದ್ದು,

ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ವರದಿ ಸಲ್ಲಿಸಿದ್ದರು.

ಈ ಬಗ್ಗೆ ಹೆಚ್ಚಿನ ತನಿಖೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೇ 10 ರಂದು ಕುಂದಾಪುರ ಎಸಿಗೆ ಆದೇಶ ನೀಡಿದ್ದರು.

ಅದರಂತೆ ತನಿಖೆ ನಡೆಸಿದ ಎಸಿ, ವಾರದ ಹಿಂದೆ ಈ ಕುರಿತು ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಅದರಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಶಿಫಾರಸ್ಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!