Friday, July 1, 2022

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ಆರೋಪ- ಕ್ರಮಕ್ಕೆ SDPI ಆಗ್ರಹ

ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿನಾ ಕಾರಣ ಪ್ರಯಾಣಿಕರ ಮೇಲೆ ನಿರಂತರವಾಗಿ ಕಿರುಕುಳ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೆತ್ತಿಕೊಳ್ಳುವಂತೆ ಎಸ್‌ಡಿಪಿಐ ನಿಯೋಗ ಒತ್ತಾಯಿಸಿದೆ.

ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿ ಮತ್ತು ಕಸ್ಟಮ್ಸ್, ಎಮಿಗ್ರೇಷನ್ ,ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ ದುರಹಂಕಾರ ತೋರಿಸುವುದು

ಮತ್ತು ಸರ್ವಾಧಿಕಾರಿಗಳಂತೆ ವರ್ತಿಸುವುದು ಅಷ್ಟೇ ಅಲ್ಲದೆ ಕ್ಷುಲ್ಲಕ ಕಾರಣಗಳನ್ನು ನೀಡಿ ವಿದೇಶಿ ಪ್ರವಾಸ ಕೈಗೊಳ್ಳುವ ಅನಿವಾಸಿಗಳ ಪ್ರಯಾಣವನ್ನು ಮೊಟಕುಗೊಳಿಸಿ ಹಿಂದಿರುಗಿಸುವುದು ನಡೆಯುತ್ತಿದೆ.

ಅಲ್ಲದೆ ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕಸ್ಟಮ್ಸ್ ಹೆಸರಲ್ಲಿ ದುಬಾರಿ ದಂಡ ವಿಧಿಸುವುದು ಸೇರಿದಂತೆ ಹಲವು ರೀತಿಯ ಕಿರುಕುಳವನ್ನು ನೀಡುವ ಬಗ್ಗೆ ನೂರಾರು ಸಂಖ್ಯೆಯ ಪ್ರಯಾಣಿಕರು ಎಸ್‌ಡಿಪಿಐ ಪಕ್ಷದ ನಾಯಕರ ಮತ್ತು ಕಾರ್ಯಕರ್ತರ ಬಳಿ ತಮ್ಮ ಸಮಸ್ಯೆಯನ್ನು ವಿವರಿಸಿದ್ದಾರೆ,

ಇದನ್ನು ಗಂಭೀರವಾಗಿ ಪರಿಗಣಿಸಿದ ಪಕ್ಷವು ಈಗಾಗಲೇ ವಿಮಾನ ನಿಲ್ದಾಣದ ಹಲವಾರು ಇಲಾಖೆಗಳ ಅಧಿಕಾರಿಗಳನ್ನು ಭೇಟಿಯಾಗಿ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.

ಅದರ ಮುಂದುವರಿದ ಭಾಗವಾಗಿ ಇಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರನ್ನು ಭೇಟಿಯಾಗಿ ಈ ವಿಚಾರವನ್ನು ಅವರ ಗಮನಕ್ಕೆ ತಂದರು. ವರದಿ ತರಿಸಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಹಿನ್ನೆಲೆ ಸಕರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ‘ಪ್ರಯಾಣಿಕರಿಗೆ ನಿರಾಳವಾಗಿ ಪ್ರಯಾಣಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿಮಾನ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡಿ ಸೂಕ್ತ ವ್ಯವಸ್ಥೆ ಕಲ್ಪಿಸಲಿದೆ’ ಎಂದು ನಿಯೋಗಕ್ಕೆ ಭರವಸೆ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಮುನೀಬ್ ಬೆಂಗರೆ, ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಶಾಕಿರ್ ಅಳಕೆಮಜಲು, ಉಳ್ಳಾಲ ಕ್ಷೇತ್ರದ ಅದ್ಯಕ್ಷ ಇರ್ಶಾದ್ ಅಜ್ಜಿನಡ್ಕ, ಕ್ಷೇತ್ರ ಕಾರ್ಯದರ್ಶಿ ಝಾಹಿದ್ ಮಲಾರ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...