Connect with us

DAKSHINA KANNADA

ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಮಾಜ ಸೇವೆ ಎಲ್ಲರಿಗೂ ಮಾದರಿ : ನಳಿನ್ ಕುಮಾರ್

Published

on

ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ.

ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ಸಹಾಯ ಹಸ್ತ ನೀಡುತ್ತಿರುವುದು ಶ್ಲಾಘನೀಯ ಕೆಲಸ ಎಂದರು.

ಬಂಟ್ಸ್ ಹಾಸ್ಟೇಲ್ ಕರಂಗಲ್ಪಾಡಿ ಮಾರ್ಕೆಟ್ ಬಳಿಯ ಹಾಪ್ ಕಾಮ್ಸ್ ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಮಂಗಳೂರು ಘಟಕ ವೃತ್ತಿಪರ ಯಕ್ಷಗಾನ ಕಲಾವಿದರಿಗೆ ನೀಡಿದ ಆಹಾರ ದಿನಸಿ ಸಾಮಾಗ್ರಿ ಕಿಟ್ ಗಳನ್ನು ಬಿಜೆಪಿ ರಾಜ್ಯಾಧ್ಯಾಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ವಿತರಿಸಿ ಮಾತನಾಡಿದರು.

ಕಲಾವಿದರಲ್ಲಿ ವೃತ್ತಿ ವೈಷಮ್ಯ ಇರುವುದು ಸಹಜ. ಆದರೆ ತೆಂಕು ತಿಟ್ಟಿನ ಪ್ರಸಿದ್ದ ಭಾಗವತ ಪಟ್ಲ ಸತೀಶ್ ಶೆಟ್ಟಿ ಕಲಾವಿದರಾಗಿದ್ದು ಕೊಂಡು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿದ್ದಾರೆ. ಇದು ಭಗವಂತನ‌ ಕೆಲಸ. ಸರಕಾರ ಮಾಡುವ ಕಾರ್ಯವನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ಮಾಡುತ್ತಿದೆ ಎಂದು ಟ್ರಸ್ಟ್ ನ ಸೇವಾ ಕಾರ್ಯವನ್ನು ಶ್ಲಾಘಿಸಿದರು.

ಕಳೆದ ವರ್ಷವೂ ಯಕ್ಷಗಾನ ಕಲಾವಿದರಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ಅಹಾರ ಸಾಮಾಗ್ರಿ ಕಿಟ್ ಗಳನ್ನು ವಿತರಿಸಿತ್ತು. ಈ ಬಾರಿಯೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿ ಆರು ಜಿಲ್ಲೆಗಳಲ್ಲಿರುವ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಕಲಾವಿದರಿಗೆ ಕಿಟ್ ವಿತರಣೆಯಾಗಲಿದೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಪ್ರಸ್ತಾವಿಕವಾಗಿ ಮಾತನಾಡಿದರು.

ಸಮಾರಂಭದಲ್ಲಿ ಹವ್ಯಾಸಿ ಘಟಕದ ಗೌರಾವಾಧ್ಯಕ್ಷ ಡಾ. ಪ್ರಭಾಕರ ಜೋಷಿ, ಕಾಪೋರೇಟರರುಗಳಾದ ಮನೋಹರ್ ಶೆಟ್ಟಿ, ರಾಧಾಕೃಷ್ಣ, ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಘಟಕದ ಅಧ್ಯಕ್ಷ ಪ್ರದೀಪ್ ಆಳ್ವ ಕದ್ರಿ, ಪಧಾದಿಕಾರಿಗಳಾದ ರವಿ ಶೆಟ್ಟಿ ಅಶೋಕನಗರ, ಕೃಷ್ಣ ಶೆಟ್ಟಿ ತಾರೇಮಾರ್, ತಾರಾನಾಥ ಶೆಟ್ಟಿ ಬೋಳಾರ, ಸಂತೋಷ್ ರೈ ನೆಲ್ಯಾಡಿ ಗೋಪಿನಾಥ ಶೆಟ್ಟಿ ಉಪಸ್ಥಿತರಿದ್ದರು. ಪ್ರದೀಪ್ ಆಳ್ವ ವಂದಿಸಿದರು. ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending