Saturday, November 27, 2021

ಭೀಕರ ಬಸ್ಸು ಅಪಘಾತಕ್ಕೆ ಬಲಿಯಾದ 21ರ ಕಾಲೇಜು ವಿದ್ಯಾರ್ಥಿನಿ ಪವಿತ್ರಾ.!

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಿಂದ ಬೆಳಗ್ಗೆ ಕಾಲೇಜಿಗೆ ಹೋಗಲೆಂದು ರಸ್ತೆ ದಾಟುತ್ತಿದ್ದಾಗ  ಸರ್ವಿಸ್  ಬಸ್ಸೊಂದು  ಡಿಕ್ಕಿ ಹೊಡೆದು ಮೃತ ಪಟ್ಟ ಹೃದಯ ವಿದ್ರಾವಕ ಘಟನೆ  ಮರಕಡ  ಜ್ಯೋತಿ ನಗರದಲ್ಲಿ  ಇಂದು ಬೆಳಗ್ಗೆ ನಡೆದಿದೆ. ಕಾಲೇಜ್ ವಿದ್ಯಾರ್ಥಿನಿಯನ್ನು 21 ರ ಹರೆಯದ ಪವಿತ್ರಾ ಜ್ಯೋತಿನಗರ ನಿವಾಸಿ ಎಂದು ಗುರುತಿಸಲಾಗಿದೆ.  ಗಡಿಬಿಡಿಯಲ್ಲಿ ರಸ್ತೆ  ದಾಟುತ್ತಿದ್ದಾಗ ನವದುರ್ಗಾ ಎಂಬ  ಸರ್ವಿಸ್    ಬಸ್ಸೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹತ್ತಿರದಲ್ಲೇ ಆಕೆಯ ಮನೆಯಿದ್ದು ಆಕೆಯ ತಾಯಿ ಸೇರಿದಂತೆ ಕುಟುಂಬಿಕರು ಸ್ಥಳದಲ್ಲಿ ಸೇರಿದ್ದರು.  ತಾಯಿಯ ರೋಧನ ಮುಗಿಲು ಮಟ್ಟುವಂತಿತ್ತು. ಬಸ್ಸಿನ ಚಾಲಕ ಅಪಘಾತವಾದ ತಕ್ಷಣ  ತಪ್ಪಿಲ್ಲದಿದ್ದರೂ ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಸ್ಥಳದ ಮಹಜರು ನಡೆಸಿದ್ದಾರೆ. ಮೃತದೇಹವನ್ನು  ಮರಣೋತ್ತರ ಪರೀಕ್ಷೆಗೆ  ಸರಕಾರಿ  ಆಸ್ಪತ್ರೆಗೆ ರವಾನಿಸಲಾಗಿದ್ದು ತನಿಖೆ ಮುಂದುವರಿದಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...