DAKSHINA KANNADA
ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಚಾರಿ ಮೃತ್ಯು ಪ್ರಕರಣ-ಚಾಲಕನಿಗೆ 1 ವರ್ಷ 6 ತಿಂಗಳ ಸಜೆ
ಮಂಗಳೂರು: ನಗರದ ಹೊರವಲಯದ ನೀರುಮಾರ್ಗದಲ್ಲಿ ಬಸ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಪ್ರಕರಣ ಮಂಗಳೂರಿನ ಏಳನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಾಬೀತಾಗಿದೆ. ನ್ಯಾಯಾಲಯ ಅಪರಾಧಿ ಬಸ್ ಚಾಲಕನಿಗೆ 1 ವರ್ಷ 6 ತಿಂಗಳ ಸಜೆ ವಿಧಿಸಿ ತೀರ್ಪು ನೀಡಿದೆ.
ಧನರಾಜ್ ಶಿಕ್ಷೆಗೊಳಗಾದ ಅಪರಾಧಿ. 2019ರ ಮಾ. 27ರಂದು ಸಂಜೆ 4.30ಕ್ಕೆ ನೀರುಮಾರ್ಗ ಬ್ಯಾಂಕ್ ಎಟಿಎಂ ಬಳಿ ರೋಶನಿ ಟ್ರಾವೆಲ್ಸ್ ಬಸ್ ಪಾದಚಾರಿ ಮಾಧವ ಮೊಯಿಲಿ ಎಂಬವರಿಗೆ ಢಿಕ್ಕಿಯಾಗಿತ್ತು.
ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆಡ ಚಿಕಿತ್ಸೆ ಫಲಿಸದೆ ಮಾ.29ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಹಾಯ ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಭಾಗಶಃ ತನಿಖೆ ಮುಗಿಸಿದ್ದರು.
ಪೊಲೀಸ್ ನಿರೀಕ್ಷಕ ಕೃಷ್ಣಾನಂದ ಜಿ. ನಾಯಕ್ ಹೆಚ್ಚಿನ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. 7ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಪದ್ಮ ಎಂ ಅವರು ಪ್ರಕರಣ ಸಮಗ್ರ ವಿಚಾರಣೆ ನಡೆಸಿ ಧನರಾಜ್ ತಪ್ಪಿತಸ್ಥರೆಂದು ನಿರ್ಣಯಿಸಿದ್ದಾರೆ.
ಅಪರಾಧಿಗೆ 1 ಸಾವಿರ ದಂಡ, ತಪ್ಪಿದ್ದಲ್ಲಿ 15 ದಿನಗಳ ಸದಾ ಕಾರಾಗೃಹ ವಾಸ ಹಾಗೂ ಐಪಿಸಿ 304 ರಡಿ 1 ವರ್ಷ 6 ತಿಂಗಳು ಸಾಮಾನ್ಯ ಸಜೆ ಜೊತೆಗೆ 5 ಸಾವಿರ ರೂ ದಂಡ, ತಪ್ಪಿದ್ದಲ್ಲಿ 1 ತಿಂಗಳ ಸದಾ ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ.
ಪ್ರಭಾರ ಹಿರಿಯ ಸರ್ಕಾರಿ ಅಭಿಯೋಜಕ ಮೋಹನ್ ಕುಮಾರ್ ವಾದ ಮಂಡಿಸಿದ್ದರು.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!