ಮುಲ್ಕಿ: ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಜಂಕ್ಷನ್ ಬಳಿ ನಿನ್ನೆ ನಡೆದಿದೆ.
ಮೃತ ವ್ಯಕ್ತಿಯನ್ನು ಪಾವಂಜೆ ದಾರೆ ತೋಟ ಬಳಿಯ ನಿವಾಸಿ ವಿಜಯ್ ದೇವಾಡಿಗ (42) ಎಂದು ಗುರುತಿಸಲಾಗಿದೆ. ವಿಜಯ್ ಅವರು ಬಸ್ಸಿನಿಂದ ಇಳಿದು ಹೆದ್ದಾರಿ ದಾಟುತ್ತಿದ್ದಾಗ ಮಂಗಳೂರು ಕಡೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿರುವ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ವಿಜಯ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.