Monday, July 4, 2022

ಪದ್ಮಶ್ರೀ ಮಹಾಲಿಂಗ ನಾಯ್ಕ ಮನೆಗೆ ಪೇಜಾವರ ಶ್ರೀ-ಸಂಸದ ನಳಿನ್‌ ಭೇಟಿ-ಸನ್ಮಾನ

ವಿಟ್ಲ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಅಮೈ ಮಹಾಲಿಂಗ ನಾಯ್ಕ, ಅವರ ಮನೆಗೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ ಭೇಟಿ ಮಾಡಿದ್ದಾರೆ ನೀಡಿದ್ದಾರೆ.


ಮೊದಲು ತಮ್ಮ ಮನೆಗೆ ಆಗಮಿಸಿದ ಶ್ರೀಗಳನ್ನು ಗೌರವದಿಂದ ಬರಮಾಡಿಕೊಂಡ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರು, ಶ್ರೀಗಳ ಜೊತೆ ಭಗೀರಥ ಯತ್ನದಿಂದ ಕೊರೆದ ಸುರಂಗದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಸುರಂಗದ ಒಳಹೊಕ್ಕ ಶ್ರೀಗಳು ಅದ್ಭುತ ಪ್ರಯತ್ನವನ್ನು ಕಂಡು ವಿಸ್ಮಯಗೊಂಡರು. ನಾಯ್ಕರು ಕುಟುಂಬ ಸಮೇತ ಗೌರವಾರ್ಪಣೆ ಸಲ್ಲಿಸಿದರು.

ನಂತರ ಮಹಾಲಿಂಗ ನಾಯ್ಕರಿಗೆ ಶಾಲು, ಶ್ರೀಕೃಷ್ಣನ ವಿಗ್ರವಿರುವ ಕಾಷ್ಠ ಮಂಟಪದ ಸ್ಮರಣಿಕೆ, ಫಲ ಮಂತ್ರಾಕ್ಷತೆ ನೀಡಿ ಶ್ರೀಗಳು ಆಶೀರ್ವದಿಸಿದರು.

ನಳಿನ್ ಕುಮಾರ್ ಕಟೀಲ್ ಭೇಟಿ
ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ನೀಡಿದರು. ಈ ಸಂದರ್ಭ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಮುಂದಿನ 30-40 ವರ್ಷಗಳು ಬಿಜೆಪಿ ಯುಗ: ಅಮಿತ್‌ ಶಾ

ಹೈದರಾಬಾದ್‌: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದಾರೆ.ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, ಬಿಜೆಪಿಯ ಅಭಿವೃದ್ಧಿ...

ಮಹಾ ಪಾಲಿಟಿಕ್ಸ್‌: ಮಹಾರಾಷ್ಟ್ರದ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ಆಯ್ಕೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ನರ್ವೇಕರ್‌ ಆಯ್ಕೆಯಾಗಿದ್ದಾರೆ.ಬಿಜೆಪಿಯ ಅಭ್ಯರ್ಥಿ ರಾಹುಲ್‌ 164 ಮತಗಳನ್ನು ಪಡೆದು ಸ್ಪೀಕರ್‌ ಆಗಿ ಆಯ್ಕೆಯಾದರು.ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಶಿವಸೇನಾದ ಶಾಸಕ ರಾಜನ್‌...

ಸೌದಿ ಅರೇಬಿಯಾ: ಹಜ್‌ ಯಾತ್ರಿಗಳ ಸೇವೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ(I.F.F.)

ರಿಯಾದ್‌: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್‌ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ.2022 ರ ಹಜ್‌ಗೆ ಈಗಾಗಲೇ ಭಾರತದಿಂದ ಎಪ್ಪತ್ತು...