ವಿಟ್ಲ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಅಮೈ ಮಹಾಲಿಂಗ ನಾಯ್ಕ, ಅವರ ಮನೆಗೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಭೇಟಿ ಮಾಡಿದ್ದಾರೆ ನೀಡಿದ್ದಾರೆ.
ಮೊದಲು ತಮ್ಮ ಮನೆಗೆ ಆಗಮಿಸಿದ ಶ್ರೀಗಳನ್ನು ಗೌರವದಿಂದ ಬರಮಾಡಿಕೊಂಡ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರು, ಶ್ರೀಗಳ ಜೊತೆ ಭಗೀರಥ ಯತ್ನದಿಂದ ಕೊರೆದ ಸುರಂಗದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಸುರಂಗದ ಒಳಹೊಕ್ಕ ಶ್ರೀಗಳು ಅದ್ಭುತ ಪ್ರಯತ್ನವನ್ನು ಕಂಡು ವಿಸ್ಮಯಗೊಂಡರು. ನಾಯ್ಕರು ಕುಟುಂಬ ಸಮೇತ ಗೌರವಾರ್ಪಣೆ ಸಲ್ಲಿಸಿದರು.
ನಂತರ ಮಹಾಲಿಂಗ ನಾಯ್ಕರಿಗೆ ಶಾಲು, ಶ್ರೀಕೃಷ್ಣನ ವಿಗ್ರವಿರುವ ಕಾಷ್ಠ ಮಂಟಪದ ಸ್ಮರಣಿಕೆ, ಫಲ ಮಂತ್ರಾಕ್ಷತೆ ನೀಡಿ ಶ್ರೀಗಳು ಆಶೀರ್ವದಿಸಿದರು.
ನಳಿನ್ ಕುಮಾರ್ ಕಟೀಲ್ ಭೇಟಿ
ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ನೀಡಿದರು. ಈ ಸಂದರ್ಭ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಪ್ರೀತಿ ಒಂದು ಮಾಯೆ. ಯುವಕ – ಯುವತಿಯ ನಡೆವಿನ ಅನ್ಯೋನ್ಯತೆ, ಹೊಂದಿಕೊಳ್ಳುವುದರ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತವೆ. ಪ್ರೀತಿ ಎಂದರೆ ಕೇವಲ ಆಕರ್ಷಣೆಯಲ್ಲ. ಅಥವಾ ಒಂದು ಹೆಣ್ಣಿನ ಅಂಗಾಂಗ ನೋಡಿ ಉಕ್ಕಿ ಬರುವ ಭಾವವೂ ಅಲ್ಲ. ಅದೊಂದು ಪವಿತ್ರ ಬಂಧ. ಎಲ್ಲಿ ಸರಿಯಾದ ಹೊಂದಾಣಿಕೆ ಇರುವುದಿಲ್ಲವೋ ಅಲ್ಲಿ ಬ್ರೇಕಪ್ ಆಗುತ್ತದೆ. ಅಷ್ಡು ಮಾತ್ರವಲ್ಲದೇ ಯಾವುದೋ ಒತ್ತಡ, ಕೌಟುಂಬಿಕ ಕಲಹಗಳಿಂದಲೂ ಪ್ರೇಮಿಗಳ ಸಂಬಂಧಕ್ಕೆ ಬಿರುಕು ಬೀಳುತ್ತದೆ.
ಪ್ರೇಮಿಗಳ ನಡುವೆ ಬ್ರೇಕಪ್ ಸರ್ವೇ ಸಾಮಾನ್ಯ. ಆದರೆ, ಆ ನೋವಿನಿಂದ ಹೊರಬರುವುದಂತೂ ತುಂಬಾ ಕಷ್ಟ. ಕೆಲವರು ಹಳೆಯ ಪ್ರೇಮಿಯ ನೆನಪಲ್ಲಿ ದಿನ ಕಳೆದರೆ, ಇನ್ನು ಕೆಲವರು ಕೈ ಕೊಟ್ಟ ಪ್ರಿಯತಮೆಗೆ ಬುದ್ಧಿ ಕಲಿಸಲು ಮುಂದಾಗುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಬ್ರೇಕಪ್ ಬಳಿಕ ಮಾಜಿ ಪ್ರಿಯತಮೆಗೆ ವಿಚಿತ್ರವಾಗಿ ಹಿಂಸೆ ನೀಡಿದ್ದಾನೆ ಎಂದು ಉಲ್ಲೇಖವಾಗಿದೆ. ಈ ಕುರಿತು ಸ್ವತಃ ಯುವತಿಯೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ.
ಬ್ರೇಕಪ್ ಬಳಿಕ ಯುವತಿಯು ಮಾಜಿ ಪ್ರಿಯಕರನ ನಂಬರನ್ನು ಎಲ್ಲ ಕಡೆಯೂ ಬ್ಲಾಕ್ ಮಾಡಿದ್ದಾಳೆ. ಆದರೆ ಅವನು ತನ್ನ ಪ್ರೇಯಸಿಯನ್ನು ಹಿಂಸಿಸಲು ಗೂಗಲ್ ಪೇ ಆಯ್ಕೆ ಮಾಡ್ಕೊಂಡಿದ್ದಾನೆ. ಬ್ರೇಕಪ್ ನಂತರ ಅವನು ಗೂಗಲ್ ಪೇ ನಲ್ಲಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡುತ್ತಿದ್ದಾನಂತೆ.
ಆಯುಷಿ ಎಂಬುವವರು ತಮ್ಮ ಎಕ್ಸ್ ಖಾತೆ @ShutupAyushiii ಯಲ್ಲಿ ಮಾಜಿ ಪ್ರಿಯಕರ ಬಗ್ಗೆ ಬರೆದುಕೊಂಡಿದ್ದಾಳೆ. ಪೋಸ್ಟ್ ನಲ್ಲಿ, ‘ಎಲ್ಲ ಕಡೆ ಆತನನ್ನು ಬ್ಲಾಕ್ ಮಾಡಿದ ಮೇಲೆ ಗೂಗಲ್ ಪೇನಲ್ಲಿ ಪ್ರತಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದು, ಅದರೊಂದಿಗೆ ಅಳುವ ಎಮೋಜಿ ಹಾಕಿದ್ದಾಳೆ. ಈ ಪೋಸ್ಟ್ ನೋಡಿದರೆ ಒಂದು ಕ್ಷಣ ಹೀಗೂ ಹಿಂಸೆ ಕೊಡುತ್ತಾರಾ ? ಎಂದೆನಿಸುತ್ತದೆ.
ಈ ಪೋಸ್ಟ್ ಒಂದು ಲಕ್ಷದವರೆಗೆ ವೀಕ್ಷಣೆ ಕಂಡಿದ್ದು, ನೆಟ್ಟಿಗರು ವಿಧವಿಧವಾಗಿ ಕಾಮೆಂಟ್ ಮಾಡಿದ್ದಾರೆ.ಒಬ್ಬರು, ‘ನಿಮ್ಮ ಮಾಜಿ ಇದೇ ಕೆಲಸ ಮುಂದುವರೆಸಿದ್ರೆ ತಿಂಗಳಿಗೆ ನೀವು 40 ಸಾವಿರಕ್ಕಿಂತ ಹೆಚ್ಚು ಸಂಪಾದನೆ ಮಾಡಬಹುದು. ಏನೂ ಕೆಲಸ ಮಾಡದೆ ಕುಳಿತಲ್ಲೇ ಹಣ ಬರುತ್ತೆ ಅಂದ್ರೆ ಟೆನ್ಷನ್ ಏಕೆ’ ಎಂದಿದ್ದಾರೆ. ಇನ್ನೊಬ್ಬರು, ‘ನಿಮಿಷದ ಲೆಕ್ಕದಲ್ಲಿ ನೋಡೋದಾದ್ರೆ ನೀವು ದಿನಕ್ಕೆ 1440 ರೂಪಾಯಿ ಪಡೆಯುತ್ತೀರಿ’ ಎಂದಿದ್ದಾರೆ. ಮತ್ತೊಬ್ಬರು, ‘ಎರಡು ದಿನ ಮಾಡ್ತಾನೆ, ಹಣ ಖಾಲಿ ಆದ್ಮೇಲೆ ಆತನೇ ಸುಮ್ಮನಾಗ್ತಾನೆ’ ಎಂದು ಕಾಮೆಂಟ್ ಮಾಡಿದ್ದಾರೆ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.