Thursday, December 2, 2021

ಹಂಸಲೇಖ ಅವರಿಗೆ ಇಂತಹ ಪ್ರಚಾರ ಬೇಕಾಗಿರಲಿಲ್ಲ: ದಲಿತ ಕೇರಿ ಭೇಟಿ ಬಗ್ಗೆ ಟೀಕಿಸಿದ್ದಕ್ಕೆ ಪೇಜಾವರ ಶ್ರೀ ಪ್ರತಿಕ್ರಿಯೆ

ಉಡುಪಿ: ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ. ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ.

ಶ್ರೀ ಕೃಷ್ಣನಿಗೆ ಅಗ್ರಪೂಜೆ ನೀಡುವಾಗ ಶಿಶುಪಾಲನೂ ಇದೇ ರೀತಿ ವಿರೋಧಿಸಿದ್ದ. ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ ಎಂದು ಪೇಜಾವರ ಶ್ರೀಗಳ ದಲಿತ ಕೇರಿಗೆ ಭೇಟಿಯನ್ನು ಟೀಕಿಸಿದ್ದ ಹಂಸಲೇಖ ಅವರ ಹೇಳಿಕೆಗೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.


ಇಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು. ಸಮಾಜದಲ್ಲಿ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ.

ನನ್ನ ಗುರುಗಳು ಸಮಾಜದ ಎಲ್ಲರ ಹೃದಯದಲ್ಲಿ ಕೃಷ್ಣನನ್ನು ಕಂಡವರು. ಆದ್ದರಿಂದಲೇ ಅವರು ದಲಿತರ ಕೇರಿಗೂ ಹೋಗುತ್ತಿದ್ದರು.

ನೆರೆ ಹಾವಳಿ ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು. ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು.

ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದರು.
ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ. ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ.

ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ದಲಿತರ ಜೊತೆ ನಾವು ಇದ್ದೇವೆ, ದಲಿತರು ನಮ್ಮಿಂದ ಹೊರತಲ್ಲ.

ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಗುರುಗಳ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ. ನಾವಂತೂ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ.

ಹಂಸಲೇಖ ಏನು ಹೇಳಿದ್ದರು?

ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ,

ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ? ಲಿವರ್ ಫ್ರೈ ತಿಂತಾರಾ, ಆಗುತ್ತಾ?

ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ ಎಂದು ಹಂಸಲೇಖ ಹೇಳಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...