Thursday, September 29, 2022

ಉಡುಪಿ: ಸಂಬಳಕ್ಕಾಗಿ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ: ಇಂದು ಡಿಸಿ ಸಭೆ

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳು ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ವೇತನಕ್ಕೆ ಬಳಸುವಂತೆ ಒತ್ತಾಯಿಸಿ ನಿನ್ನೆ  ಪ್ರತಿಭಟನೆ ನಡೆಯಿತು.


ಬಾಕಿ ಇರುವ ವೇತನ ಪಾವತಿಸುವ ನಿಟ್ಟಿನಲ್ಲಿ ಸುವರ್ಣ ಆರೋಗ್ಯ ಟ್ರಸ್ಟ್‌ನಿಂದ 50 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡಲಾಗಿದ್ದು,

ಈ ಪೂರ್ಣ ಹಣವನ್ನು ಸಂಬಳ ನೀಡಲು ಬಳಸಿಲ್ಲ ಎಂದು ಆರೋಪಿಸಿ ಸಿಬ್ಬಂದಿ ಆಸ್ಪತ್ರೆಯಲ್ಲಿ ಮುಷ್ಕರ ನಡೆಸಿದರು.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಆಸ್ಪತ್ರೆಗೆ ಬಂದು ಮಾಹಿತಿ ಪಡೆದುಕೊಂಡರು.
ಮೂರು ತಾಸು ಕಾದರೂ ಆಸ್ಪತ್ರೆಯ ಆಡಳಿತ ಮಂಡಳಿಯವರು ಬಾರದ ಹಿನ್ನೆಲೆಯಲ್ಲಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ದೂರವಾಣಿ ಮೂಲಕ ಜಿಲ್ಲಾಧಿಕಾರಿಯೊಂದಿಗೆ ಶಾಸಕರು ಮಾತುಕತೆ ನಡೆಸಿದರು.

ಈ ವೇಳೆ ಡಿಸಿ ಇಂದು ಸಭೆ ಕರೆದು ಚರ್ಚಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಪೂರ್ಣ ಸಂಬಳ ನೀಡುವವರೆಗೆ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ಮುಂದುವರೆಸುವುದಾಗಿ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ.

LEAVE A REPLY

Please enter your comment!
Please enter your name here

Hot Topics

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...