Saturday, November 27, 2021

ಬೆಲೆ ಏರಿಕೆಯನ್ನು ಜನ ಒಪ್ಪಿಕೊಂಡಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌

ಪುತ್ತೂರು: ದೇಶದಲ್ಲಿ ಬೆಲೆ ಏರಿಕೆಯ ಬಿಸಿಯನ್ನು ಜನ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ನಡೆಸಿದ ಕಾರ್ಯ ಮಾದರಿಯಾಗಿದೆ.
ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ ಎನ್ನುವ ನಂಬಿಕೆ ಜನರಲ್ಲಿದ್ದು,

ಕೊರೊನಾ ಸಂದರ್ಭದಲ್ಲಿ ವೆಂಟಿಲೇಟರ್, ಆಕ್ಸಿಜನ್ ಪ್ಲಾಂಟ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡುವ ಮೂಲಕ ಜನರ ಜೀವ ಉಳಿಸುವ ಕೆಲಸ ಮಾಡಿದ್ದಾರೆ.

ದೇಶದ ಎಲ್ಲಾ ಜನರಿಗೂ ಉಚಿತವಾಗಿ ಲಸಿಕೆ ಸಿಗುವಂತೆ ಮಾಡಿದ್ದು, ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದು ನಿಜವಾಗಿದ್ದು, ಈ ಬೆಲೆ ಏರಿಕೆ ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ತಟ್ಟಿದೆ. ಈ ಬೆಲೆ ಏರಿಕೆಯ ಪರಿಣಾಮ ದೇಶದ ಮೇಲೂ ಆಗಿದೆ ಎಂದರು.

ಈ ಎಲ್ಲಾ ಕಾರಣಕ್ಕಾಗಿ ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮಾಡಿದ ಸೇವೆಗೆ ಜನ ಬೆಲೆ ಏರಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದರು.

ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ.
ಪುತ್ತೂರಿನ ಎಪಿಎಂಸಿ ರಸ್ತೆಗೆ ಮೇಲ್ಸೇತುವೆ ನಿರ್ಮಿಸುವ ಕಾರ್ಯ ಒಪ್ಪಿಗೆಯ ಹಂತದಲ್ಲಿದೆ. ಈಗಾಗಲೇ ಕೇಂದ್ರ ರೈಲ್ವೆ ಸಚಿವರ ಮುಂದೆ ಈ ಕುರಿತ ಪ್ರಸ್ತಾವನೆಯಿದೆ ಎಂದರು.

ರಾಜ್ಯ ಸರಕಾರ ಹಾಗು ರೈಲ್ಚೇ ಇಲಾಖೆ ಜಂಟಿಯಾಗಿ ಈ‌ ಮೇಲ್ಸೇತುವೆ ನಿರ್ಮಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಅಡಿಕೆಯ ಬೇರುಹುಳ ಹಾಗೂ ಹಳದಿ ರೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಎನ್.ಆರ್.ಸಿ.ಸಿ ವಿಜ್ಞಾನಿಗಳು ಸಂಶೋಧನೆ ನಡೆಸಿದ್ದು, ಈ ಸಂಶೋಧನೆಯನ್ನು ಕೇವಲ ತೀರ್ಥಹಳ್ಳಿ ಭಾಗದಲ್ಲಿ ಮಾತ್ರ ಮಾಡಲಾಗಿದ್ದು,

ಈ ಸಂಶೋಧನೆಯನ್ನು ಸಂಪಾಜೆ ಸೇರಿದಂತೆ ಉಳಿದ ಪ್ರದೇಶಗಳಲ್ಲಿ ಮತ್ತೊಮ್ಮೆ ಮಾಡುವಂತೆ ಸೂಚುಸುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...