Connect with us

    BANTWAL

    ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಗೆ ಜಾಗ ಬಿಟ್ಟು ಕೊಟ್ಟವರಿಗೆ ಸಿಕ್ಕದ ಪರಿಹಾರ: ಹೋರಾಟಕ್ಕೆ ಸಿದ್ಧತೆ

    Published

    on

    ಬಂಟ್ವಾಳ: ದ.ಕ ಜಿಲ್ಲೆಯ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದರೂ ನಮಗೆ ಇಲಾಖೆಯಿಂದ ಪರಿಹಾರದ ಪತ್ರ ಬಂತೇ ವಿನಃ ಪರಿಹಾರ ಬಂದಿಲ್ಲ ಎಂದು ರಸ್ತೆಗಾಗಿ ಜಾಗ ಬಿಟ್ಟು ಕೊಟ್ಟ ಜನರು ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ.

    ಕೋವಿಡ್ ಕಾರಣದಿಂದ ಪರಿಹಾರ ವಿತರಣೆ ವಿಳಂಬವಾಗಿದ್ದು, ಶೀಘ್ರದಲ್ಲಿ ಅವರ ಜಾಗದ ಮೊತ್ತ ಜಮೆಯಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ಹೇಳುತ್ತಿದೆ. ಕಳೆದ ಎರಡು-ಮೂರು ವರ್ಷಗಳ ಹಿಂದೆ ಹೆದ್ದಾರಿಯ ಅಭಿವೃದ್ಧಿಗಾಗಿ ಬಂಟ್ವಾಳ ಪುರಸಭೆ ಸೇರಿದಂತೆ ತಾಲೂಕಿನ ನಾವೂರು, ಕಾವಳಮೂಡೂರು, ಕಾವಳಪಡೂರು ಹಾಗೂ ಪಿಲಾತಬೆಟ್ಟು ಗ್ರಾ.ಪಂ.ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧ್ವೀನಾಧಿಕಾರಿಯವರ ಮೂಲಕ ಹಲವಾರು ಮಂದಿಯ ಭೂಮಿಯನ್ನು ಸ್ವಾಧ್ವೀನ ಪಡಿಸಿಕೊಳ್ಳಲಾಗಿತ್ತು.

    ಭೂಮಿ ಕಳೆದುಕೊಂಡವರ ದಾಖಲೆಯನ್ನು ಪಡೆದು ಕಳೆದ ಡಿಸೆಂಬರ್‌ನಲ್ಲಿ ಪ್ರತಿ ಭೂ ಮಾಲಕರಿಗೂ ಕೂಡ ಅವರ ಭೂಮಿಗೆ ನಿಗದಿ ಪಡಿಸಿದ ಮೊತ್ತವನ್ನು ನಮೂದಿಸಿ ನೋಟಿಸ್‌ವೊಂದನ್ನು ನೀಡಲಾಗಿದ್ದು, ಆದರೆ ಈ ತನಕ ಪರಿಹಾರ ಸಿಕ್ಕಿಲ್ಲ ಎಂಬುದು ಭೂಮಾಲಕರು ಆರೋಪಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮೂಲಕ ಸ್ವಾಧ್ವೀನ ಪಡಿಸಿಕೊಂಡ ಭೂಮಿಗೆ ಬೆಂಗಳೂರಿನಿಂದಲೇ ವಿಶೇಷ ಭೂಸ್ವಾಧೀನಾಧಿಕಾರಿಗಳ ಮೂಲಕ ಪರಿಹಾರ ಮೊತ್ತ ನಿಗದಿಯಾಗುತ್ತಿದ್ದು, ಪಾವತಿಯ ಪ್ರಕ್ರಿಯೆಯನ್ನೂ ಅವರೇ ನೋಡಿಕೊಳ್ಳುತ್ತಾರೆ. ಆದರೆ ಕೋವಿಡ್ ಕಾರಣಕ್ಕೆ ವಿಳಂಬವಾಗಿದೆ. ನಿಗದಿ ಪಡಿಸಿದ ಮೊತ್ತ ಭೂಮಾಲಕರಿಗೆ ಸಿಕ್ಕೇ ಸಿಗುತ್ತದೆ. ಕಡಿಮೆಯಾಗಿದ್ದರೆ ಕಾನೂನು ಹೋರಾಟಕ್ಕೇ ಅವಕಾಶವಿದೆ ಎಂದು ಹೆದ್ದಾರಿ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

    Click to comment

    Leave a Reply

    Your email address will not be published. Required fields are marked *

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending