Connect with us

    LATEST NEWS

    ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

    Published

    on

    ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

    ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ.

    ರಾಜ್ಯದಿಂದ ಹೊರ ಹೋಗುವ ಮತ್ತು ರಾಜ್ಯವನ್ನು ಪ್ರವೇಶಿಸುವ ಪ್ರತಿಯೊಬ್ಬರಿಗೂ ನವೆಂಬರ್.25ರಿಂದ ಈ ಮಾರ್ಗಸೂಚಿ ಅನ್ವಯವಾಗಲಿದೆ.

    ನವದೆಹಲಿ, ಎನ್‌ಆರ್ ಸಿ, ರಾಜಸ್ಥಾನ, ಗೋವಾ ಮತ್ತು ಗುಜರಾತ್ ರಾಜ್ಯಗಳಿಗೆ ತೆರಳುವ ಮತ್ತು ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಕೊರೊನಾವೈರಸ್ ತಪಾಸಣೆ ಕಡ್ಡಾಯಗೊಳಿಸಲಾಗಿದೆ.

    ಕೊವಿಡ್-19 ಸೋಂಕಿನ ಲಕ್ಷಣಗಳು ಇಲ್ಲದ ಪ್ರಯಾಣಿಕರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

    ಆದರೆ, ಕೊರೊನಾವೈರಸ್ ಸೋಂಕಿನ ಲಕ್ಷಣಗಳನ್ನು ಹೊಂದಿರುವವರಿಗೆ ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿ ಇರುವುದಿಲ್ಲ ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಕೊವಿಡ್-19 ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ:

    ನವದೆಹಲಿ, ಎನ್‌ಆರ್ ಸಿ, ರಾಜಸ್ಥಾನ, ಗೋವಾ ಮತ್ತು ಗುಜರಾತ್ ನಿಂದ ವಾಯುಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಕೊವಿಡ್-19 ಸೋಂಕು ತಗುಲಿಲ್ಲ ಎಂಬ ಬಗ್ಗೆ ವರದಿ ತೋರುವುದನ್ನು ಕಡ್ಡಾಯಗೊಳಿಸಲಾಗಿದೆ.

    ಮಹಾರಾಷ್ಟ್ರದಲ್ಲಿ ವಿಮಾನವು ಲ್ಯಾಂಡಿಂಗ್ ಆಗುವುದಕ್ಕೂ 72 ಗಂಟೆಗೂ ಮೊದಲು ನಡೆಸಿದ RT-PCR ತಪಾಸಣೆಯ ವರದಿಯನ್ನು ಪ್ರಯಾಣ ಆರಂಭಿಸುವುದಕ್ಕೂ ಮೊದಲು ಸಲ್ಲಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    LATEST NEWS

    ನಕಲಿ ವೈದ್ಯನಿಂದ ಭ್ರೂಣ ಹ*ತ್ಯೆ ..! ತನಿಖೆ ವೇಳೆ ವೈದ್ಯನ ಕರಾಳ ಮುಖ ಬಯಲು..!!

    Published

    on

    ಬೆಳಗಾವಿ/ಮಂಗಳೂರು: ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ನಕಲಿ ವೈದ್ಯನೊಬ್ಬ ಸಿಕ್ಕಿಬಿದ್ದಿದ್ದಾನೆ. ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ನಕಲಿ ವೈದ್ಯನ ಮತ್ತೊಂದು ಕರಾಳ ಮುಖ ಬಯಲಿಗೆ ಬಂದಿದೆ.

    ನಕಲಿ ವೈದ್ಯ ಡಾ.ಅಬ್ದುಲ್ ಗಫಾತ್ ಸೇರಿ ಐವರನ್ನು ಜೂ. 10 ರಂದು ಮಾಳಮಾರುತಿ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದರು. ತನಿಖೆ ವೇಳೆ ಇವನ ಮತ್ತೊಂದು ಕರಾಳ ಮುಖ ಬಯಲಿಗೆ ಬಂದಿದೆ. ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಬೆನ್ನು ಹತ್ತಿದ್ದ ಬೆಳಗಾವಿ ಪೊಲೀಸರಿಗೆ ವೈದ್ಯನ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ. ಈ ವೈದ್ಯ ಮಕ್ಕಳ ಮಾರಾಟ ಸೇರಿದಂತೆ ಭ್ರೂಣಗಳ ಹತ್ಯೆ ಮಾಡಿದ್ದಾನೆ. ಭ್ರೂಣ ಹತ್ಯೆಗೈದು ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ ಹೌಸ್‌ನಲ್ಲಿ ಅಂತ್ಯಕ್ರಿಯೆ ಮಾಡಿದ್ದಾನೆ. ಪೊಲೀಸರ ತನಿಖೆ ವೇಳೆ ಅಬ್ದುಲ್ ಭ್ರೂಣ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಫಾರ್ಮ್‌ ಹೌಸ್‌ನಲ್ಲಿ ಶೋಧಕಾರ್ಯ ನಡೆಸಿದಾಗ ಮೂರು ಭ್ರೂಣಗಳ ಅವಶೇಷ ಪತ್ತೆಯಾಗಿದೆ. ಕಿತ್ತೂರಿನಲ್ಲಿದ್ದ ತನ್ನ ಫಾರ್ಮ್‌ ಹೌಸ್‌ನಲ್ಲಿ ಭ್ರೂಣ ಹತ್ಯೆ ಮಾಡಿ, ಫಾರ್ಮ್‌ಹೌಸ್‌ನಲ್ಲಿ ಹೂತುಹಾಕುತ್ತಿದ್ದ ಎಂದು ತನಿಖೆ ವೇಳೆ ಗೊತ್ತಾಗಿದೆ.

    Read More..; ‘ನನ್ನಿಂದ ಹೀಗೆ ಆಗೋಯ್ತಲ್ಲ’ ತಂದೆ ಶವದ ಮುಂದೆ ಕಣ್ಣೀರಿಟ್ಟ ದರ್ಶನ್ ಕೇಸ್‌ ಆರೋಪಿ..!

    ಡಿಸಿ ನಿತೇಶ ಪಾಟೀಲ್ ಸೂಚನೆ ಮೇರೆಗೆ ಪರಿಶೀಲನೆಗೆ ತಂಡ ರಚನೆ ಮಾಡಲಾಗಿದ್ದು, ಪೊಲೀಸರು, ಆರೋಗ್ಯ ಇಲಾಖೆ, ಎಫ್ ಎಸ್ ಎಲ್ ತಂಡದಿಂದ ಶೋಧ ಕಾರ್ಯ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಮೂರು ಭ್ರೂಣಗಳ ಅವಶೇಷಗಳು ಪತ್ತೆಯಾಗಿದ್ದು, ಅವಶೇಷಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

    Continue Reading

    LATEST NEWS

    ಗಂಗಾ ನದಿಯಲ್ಲಿ ದೋಣಿ ಮಗುಚಿ 6 ಮಂದಿ ನಾಪತ್ತೆ

    Published

    on

    ಪಾಟ್ನಾ: ದೋಣಿಯೊಂದು ಗಂಗಾ ನದಿಯಲ್ಲಿ ಮಗುಚಿ ಬಿದ್ದು, 6 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಿಹಾರದ ರಾಜಧಾನಿ ಪಾಟ್ನಾದ ಬಾರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 17 ಮಂದಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. 11 ಮಂದಿ ಈಜಿ ದಡ ಸೇರಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ.


    ನದಿ ಮಧ್ಯದಲ್ಲಿ ದೋಣಿ ಮುಳುಗಿದೆ. ತಕ್ಷಣ ಎಲ್ಲರೂ ನದಿಯಲ್ಲಿ ಮುಳುಗಲು ಪ್ರಾರಂಭಿಸಿದರು. ಈ ವೇಳೆ 11 ಜನ ಈಜಿ ದಡ ಸೇರಿದ್ದರೆ, ಇನ್ನೂ ಆರು ಮಂದಿ ನಾಪತ್ತೆಯಾಗಿದ್ದಾರೆ.

    ಇದನ್ನೂ ಓದಿ : ಐಸ್‌ಕ್ರೀಂ ಪ್ರಿಯರೇ ಎಚ್ಚರ! ಆನ್‌ಲೈನ್‌ನಲ್ಲಿ ತರಿಸಿದ ಐಸ್‌ಕ್ರೀಂನಲ್ಲಿ ಸತ್ತ ಹುಳಗಳು ಪತ್ತೆ!

    ಗಂಗಾ ದಸರಾ ನಿಮಿತ್ತ ಕೆಲವರು ಸ್ನಾನ ಮಾಡಲು ನದಿಗೆ ಅಡ್ಡಲಾಗಿ ದೋಣಿಯಲ್ಲಿ ಹೋಗುತ್ತಿದ್ದರು ಎಂದು ವರದಿಯಾಗಿದೆ. ಈ ವೇಳೆ ಉಮಾ ಘಾಟ್ ಬಳಿ ದೋಣಿ ಪಲ್ಟಿಯಾಗಿದೆ. ದುರಂತದಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃ*ತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುವ ಬಗ್ಗೆ ವರದಿಯಾಗಿದೆ.

    Continue Reading

    DAKSHINA KANNADA

    ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿ..!

    Published

    on

    ಮಂಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ(ಜೂ.16) ಕಮ್ಮಾಜೆ-ಕಾಗುಡ್ಡೆ ಬಳಿ ನಡೆದಿದೆ.

    Read More..; ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾ*ವು

    ಬಿಸಿರೋಡು-ಪೊಳಲಿ ಮಂಗಳೂರು ಸಂಚರಿಸುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರವಿವಾರವಾದ ಕಾರಣ ಬಸ್ಸಿನಲ್ಲಿ ಕೇವಲ ಇಬ್ಬರೇ ಪ್ರಯಾಣಿಕರಿದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಬಸ್‌ ಬಿಸಿ ರೋಡಿನಿಂದ ಕೊಳತ್ತಮಜಲಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending