LATEST NEWS
ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದ 6ಮಂದಿಗೆ ಎದುರಾದ ಜವರಾಯ; !
Published
4 years agoon
By
Adminಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದ 6ಮಂದಿಗೆ ಎದುರಾದ ಜವರಾಯ;
people who were returning from crimination met an accident; 6of them died 11are serious..!
ಉತ್ತರಪ್ರದೇಶ: ವಾರಣಾಸಿಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದ 6ಮಂದಿ ಮಸಣಕ್ಕೆ ಸೇರಿದ ಘಟನೆ ಉತ್ತರಪ್ರದೇಶದ ಜಲಾಲ್ ಪುರದಲ್ಲಿ ನಡೆದಿದೆ.
ಮಂಗಳವಾರ ಬೆಳ್ಳಂಬೆಳಗ್ಗೆ ಟ್ರಕ್ ಮತ್ತು ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು 6ಮಂದಿ ದುರ್ಮರಣಕ್ಕೀಡಾಗಿದ್ದು 11ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಮರ್ ಬಹದ್ದೂರ್ ಯಾದವ್ (58), ರಾಮ್ ಸಿಂಗಾರ್ ಯಾದವ್ (38), ಮುನ್ನಿಲಾಲ್ (38), ಇಂದ್ರಜಿತ್ ಯಾದವ್ (48), ಕಮಲಾ ಪ್ರಸಾದ್ ಯಾದವ್ (60) ಮತ್ತು ರಾಮ್‌ಕುಮಾರ್ (65) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಜೀಪಿನಲ್ಲಿ 17ಮಂದಿಯಿದ್ದು ಇವರೆಲ್ಲರೂ ವಾರಣಾಸಿಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದ್ದು, ಮೃತ ದುರ್ದೈವಿಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
LATEST NEWS
ಲಿವ್ ಇನ್ ಗೆಳತಿಯ ಮೇಲೆ ರೇಪ್; 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ಕಿರಾತಕ
Published
7 minutes agoon
28/11/2024By
NEWS DESK2ರಾಂಚಿ: ಜಾರ್ಖಂಡ್‌ನ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 25 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯನ್ನು ಬರ್ಬರವಾಗಿ ಕೊಂದು ಆಕೆಯ ದೇಹವನ್ನು 40 ರಿಂದ 50 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ನರೇಶ್ ಭೆಂಗ್ರಾ ಎಂದು ಗುರುತಿಸಲಾಗಿದೆ. ನವೆಂಬರ್ 24 ರಂದು ಜರಿಯಾಗಢ ಪೊಲೀಸ್ ಠಾಣೆಯ ಜೋರ್ದಾಗ್ ಗ್ರಾಮದ ಬಳಿ ಬೀದಿ ನಾಯಿಯೊಂದು ಮಾನವ ದೇಹದ ಭಾಗಗಳೊಂದಿಗೆ ಪತ್ತೆಯಾದಾಗ ಹತ್ಯೆಯಾದ ಹದಿನೈದು ದಿನಗಳ ನಂತರ ವಿಷಯ ಬೆಳಕಿಗೆ ಬಂದಿದೆ.
ನವೆಂಬರ್ 8 ರಂದು ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದ ಆರೋಪಿಗಳು ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ಇಷ್ಟಪಡದ ಕಾರಣ ಅವರು ಖುಂಟಿಗೆ ತಲುಪಿದಾಗ ಕ್ರೂರ ಘಟನೆ ಸಂಭವಿಸಿದೆ. ಬದಲಿಗೆ, ಜರಿಯಾಗಢ್ ಪೊಲೀಸ್ ಠಾಣೆಯ ಜೋರ್ದಾಗ್ ಗ್ರಾಮದ ತನ್ನ ಮನೆಯ ಸಮೀಪವಿರುವ ಕಾಡಿಗೆ ಕರೆದೊಯ್ದು ಶವವನ್ನು ಕೊಯ್ದಿದ್ದಾನೆ. ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಖುಂಟಿ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ಅಶೋಕ್ ಸಿಂಗ್ ಅವರು ತಮಿಳುನಾಡಿನ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕೋಳಿಯನ್ನು ಕತ್ತರಿಸುವುದರಲ್ಲಿ ನಿಪುಣರಾಗಿದ್ದ. ಕಾಡಿನಲ್ಲಿ ಕಾಡು ಪ್ರಾಣಿಗಳನ್ನು ತಿನ್ನಲು ಬಿಡುವ ಮೊದಲು ಮಹಿಳೆಯ ದೇಹದ ಭಾಗಗಳನ್ನು 40 ರಿಂದ 50 ತುಂಡುಗಳಾಗಿ ಕತ್ತರಿಸಿದ್ದನ್ನು ಅವನು ಒಪ್ಪಿಕೊಂಡಿದ್ದಾನೆ. ನವೆಂಬರ್ 24 ರಂದು ಆ ಪ್ರದೇಶದಲ್ಲಿ ನಾಯಿಯೊಂದು ಕೈಯಿಂದ ಕಾಣಿಸಿಕೊಂಡ ನಂತರ ಪೊಲೀಸರು ಹಲವಾರು ಭಾಗಗಳನ್ನು ವಶಪಡಿಸಿಕೊಂಡರು” ಎಂದು ಸಿಂಗ್ ಹೇಳಿದರು.
LATEST NEWS
ಸಂಸತ್‌ನಲ್ಲಿ ಇಂದು ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ
Published
36 minutes agoon
28/11/2024By
NEWS DESK2ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸಂಸತ್ತಿನಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಹುಲ್ ಗಾಂಧಿ ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
BANTWAL
ಬಂಟ್ವಾಳ : ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು – ಅಂಗಾಂಗ ದಾನ
Published
45 minutes agoon
28/11/2024By
NEWS DESK2ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದ ಘಟನೆ ನಡೆದಿದೆ.
ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ (51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸ್ವತಃ ಕೃಷಿಕರಾಗಿರುವ ಇವರು ನ.3 ರಂದು ಅವರ ತೋಟದ ತೆಂಗಿನ ಮರದಿಂದ ಕಾಯಿ ಕೀಳಲು ಮರಕ್ಕೆ ಹತ್ತಿದ್ದರು. ಆದರೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸುಮಾರು 24 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಹಾಗೂ ಮೂರು ಗಂಡು ಮಕ್ಕಳನ್ನು ಅಗಲಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗಿರಿಯಪ್ಪ ಅವರನ್ನು ಬದುಕಿಸಲು ವೈದ್ಯಕೀಯ ತಂಡ ಪ್ರಯತ್ನ ಮಾಡಿದೆಯಾದರೂ ಪ್ರಯತ್ನ ಫಲಿಸಲಿಲ್ಲ. ಹಾಗಾಗಿ ಕೊನೆಘಳಿಗೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಗಿರಿಯಪ್ಪ ಅವರ ಅಂಗಾಂಗ ದಾನಕ್ಕೆ ಮುಂದಾದರು. ಗಿರಿಯಪ್ಪ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
LATEST NEWS
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು
ಮತ್ತೆ ತಾಯಿ ಮಡಿಲು ಸೇರಿದ ಅಪಹರಣಕ್ಕೊಳಗಾಗಿದ್ದ ನವಜಾತ ಶಿಶು; ಇಬ್ಬರು ಕಳ್ಳಿಯರು ಅರೆಸ್ಟ್
ನೀವು ಕೂಡ ಕ್ರಿಕೆಟ್ ಅಂಪೈರ್ ಆಗಬಹುದು; ಲಕ್ಷ ಲಕ್ಷ ಸಂಬಳ !
ಸರಕಾರಿ ಕೆಲಸದ ಹುಡುಗನೇ ಬೇಕೆಂದು ಮಂಟಪದಲ್ಲೇ ವರನನ್ನು ತಿರಸ್ಕರಿಸಿದ ವಧು !!
ನಂಬಿದವರ ಕೈ ಬಿಡದ ಪದಾಳ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ
ನಿಮ್ಮ ನಾಯಿಗಳನ್ನು ಪಾರ್ಕ್ಗೆ ಕೊಂಡೊಯ್ಯುತ್ತೀರಾ? ಹೈಕೋರ್ಟ್ ಹೊಸಮಾರ್ಗಸೂಚಿ ಗಮನಿಸಿ!
Trending
- Baindooru6 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION7 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS5 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
- Baindooru5 days ago
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ