DAKSHINA KANNADA
ಬಂಗ್ರಕೂಳೂರು ಪಡ್ಡೋಡಿಗೆ ಶಾಶ್ವತ ಕಾಂಕ್ರಿಟ್ ರಸ್ತೆ: ಡಾ.ಭರತ್ ಶೆಟ್ಟಿ ವೈ ಭರವಸೆ..!
ಬಂಗ್ರಕೂಳೂರು ಪಡ್ಡೋಡಿಗೆ ಶಾಶ್ವತ ಕಾಂಕ್ರಿಟ್ ರಸ್ತೆ: ಡಾ.ಭರತ್ ಶೆಟ್ಟಿ ವೈ ಭರವಸೆ..!
Permanent Concrete Road to Bangra kuloor -Paddodi: Dr Bharat Shetty
ಮಂಗಳೂರು: ಕೂಳೂರು, ಫೆ.6: ಕನರ್ಾಟಕ ಸರಕಾರದ ಲೋಕೋಪಯೋಗಿ ಇಲಾಖೆಯ ಅನುದಾನದಡಿ 20 ಲಕ್ಷ ರೂ.ವೆಚ್ಚದಲ್ಲಿ ಬಂಗ್ರಕೂಳೂರು 16ನೇ ವಾಡರ್್ ಪಡ್ಡೋಡಿ ರಸ್ತೆಯನ್ನು ಕಾಂಕ್ರಟೀಕರಣ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು.
ಅವರು ಶನಿವಾರ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಭಾಗದಲ್ಲಿ ತಗ್ಗು ಪ್ರದೇಶವಿರುವುದರಿಂದ ಡಾಮರೀಕರಣ ಮಾಡಿದರೆ ರಸ್ತೆ ಉಳಿಯಲಾರದು.
ಜನರ ಬಹುದಿನಗಳ ಬೇಡಿಕೆಯನ್ನು ಆದ್ಯತೆಯ ಮೇರೆಗೆ ಈಡೇರಿಸುತ್ತಿದೇವೆ ಎಂದರು.ಕಾಂಕ್ರಟೀಕರಣದ ಮೂಲಕ ಶಾಶ್ವತ ರಸ್ತೆ ನಿರ್ಮಿಸಲಾಗುವುದು ಎಂದರು.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕೆಲಸಗಳಿಗೆ4 ಕೋಟಿ ರೂ.ಬಿಡುಗಡೆಯಾಗಿದ್ದು ತುರ್ತಾಗಿ ನಡೆಯಬೇಕಾಗಿರುವ ಕಾಮಗಾರಿಗಳನ್ನು ಗುರುತಿಸಲಾಗುವುದು.
ಈ ಬಗ್ಗೆ ಅಧಿಕಾರಿಗಳಿಗೆ ಸಮರ್ಪಕ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.ಸ್ಥಳೀಯವಾಗಿ ಇರುವ ಕೈಗಾರಿಕೆ ನಮ್ಮದೇ ಯುವಕರಿಗೆ ಉದ್ಯೋಗ ನೀಡುವಲ್ಲಿ ಸರೋಜಿನಿ ಮಹಿಷಿ ಅವರ ವರದಿ ಪ್ರಮುಖ ಅಸ್ತ್ರವಾಗಿದೆ.
ಇದು ಕಟ್ಟು ನಿಟ್ಟಾಗಿ ಜಿಲ್ಲಾಮಟ್ಟದಲ್ಲಿ ಜಾರಿಯಾಗಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಟ್ಟು ನಿಟ್ಟಾಗಿ ಅನುಷ್ಟಾನಗೊಳಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದೇನೆ.
50ಕ್ಕಿಂತ ಅಧಿಕ ಉದ್ಯೋಗಿಗಳು ಇದ್ದಲ್ಲಿ ಸ್ಥಳೀಯರಿಗೆ ಆದ್ಯತೆ ಸಿಗುತ್ತದೆ. ಸಿ ಮತ್ತು ಡಿ ಗ್ರೂಪ್ ಗಳಲ್ಲಿ ಶೇ 100, ಬಿ ಗ್ರೂಪ್ ಗೆ ಶೇ 85, ಎ ಗ್ರೂಪ್ ಗೆ ಶೇ 65, ಉದ್ಯೋಗವನ್ನು ನೀಡಬೇಕೆಂಬ ನಿಯಮವಿದೆ. ಇಲ್ಲಿನ ಬೃಹತ್ ಕಂಪನಿಗಳಲ್ಲಿ ಪ್ರತಿಭಾವಂತರಿಗೆ ಉದ್ಯೋಗ ದೊರಕಿದರೆ ಉದ್ಯೋಗ ಕೊರತೆಯನ್ನು ದೂರೀಕರಿಸಬಹುದು ಎಂದರು.
ಸ್ಥಳೀಯ ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಮುಖಂಡರಾದ ಉಮೇಶ್ ಮಲರಾಯ ಸಾನ, ಹರಿಪ್ರಸಾದ್ ಶೆಟ್ಟಿ, ಅಶೋಕ್ ಕುಲಾಲ್,ಕಿರಣ್ ಕೋಟಿಯನ್,ರಾಜೇಶ್ ಸಂಕದ ಮನೆ,ರಮೇಶ್ ಶೆಟ್ಟಿ, ಚಂದ್ರಿಕಾ ಪ್ರಭಾಕರ್,ವಾಣಿ ಭಂಡಾರಿ,ಗಂಗಾಧರ್ ಕಿರೋಡಿಯನ್,ರಘುಪಾತ್ರಿ,ಜಯಾನಂದ್ ಅಮೀನ್,ಯಶವಂತ್ ದೊಡ್ಡಮನೆ, ಉಮೇಶ್ ಪದ್ದೋಡಿ, ಬಿ.ಕೆ ರಾಮ,ಉಮೇಶ್ ಅಮೀನ್,ವೆಂಕಪ್ಪ ದೊಡ್ಡಮನೆ, ಸುರೇಶ್ ಭಂಡಾರಿ,ಸುಧೀರ್ ಭಂಡಾರಿ, ನವನೀತ್ ಕೋಟಿಯನ್, ಗುತ್ತಿಗೆದಾರ ಸುಧಾಕರ ಪೂಂಜಾ,ಬಿಜೆಪಿ ಕಾರ್ಯಕರ್ತರು,ಸ್ಥಳೀಯರು ಉಪಸ್ಥಿತರಿದ್ದರು.
ಇದೇ ಸಂದರ್ಭ ಬಂಗ್ರಕೂಳೂರು ಬಳಿ ಬಸ್ ನಿಲ್ದಾಣ ನಿರ್ಮಾಣ ಹಾಗೂ ಬಸ್ ನಿಲುಗಡೆಗೆ ಸ್ಥಳೀಯರು ಮನವಿ ಸಲ್ಲಿಸಿದರು.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.