Connect with us

    BELTHANGADY

    ಕಳೆಂಜ ಮನೆಯಿಂದ ಹೊರಹೋಗಿದ್ದ ಪೆರ್ನು ಗೌಡರು ಹಿಂದಿರುಗಿದ್ದು ಮಾತ್ರ ಶವವಾಗಿ..!

    Published

    on

    ಕಡಬ : ಮನೆಯಿಂದ ಹೊರ ಹೋದ ವ್ಯಕ್ತಿ ಮನೆ ಸಮೀಪದ ಕರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳೆಂಜದಲ್ಲಿ ಸಂಭವಿಸಿದೆ.

    ಇಲ್ಲಿನ ಬುಡಾರ ಮನೆ ನಿವಾಸಿ ಪೆರ್ನು ಗೌಡ ಅವರು ನಿನ್ನೆ ಸಂಜೆ (ಜೂ.6) ಮನೆಯಿಂದ ಹೊರಹೋದವರು, ಇಂದು ಮಧ್ಯಾಹ್ನ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನೆರೆ ಮನೆಗೆ ಹೋದ ಗೌಡರು ನಂತರ ಮನಗೆ ಹಿಂದಿರುಗಿರಲಿಲ್ಲ.

    ಹೀಗಾಗಿ ಇಂದು ಬೆಳಿಗ್ಗೆ ಮೃತರ ತಂದೆ ಬೂಚ ಗೌಡ ಅವರು ವಿಚಾರಿಸಿದ್ದು ಈ ವೇಳೆ ಮರಳಿ ಅಲ್ಲಿಂದ ಮನೆಗೆ ಹೋಗಿರುವ ವಿಚಾರ ತಿಳಿಸಿದ್ದರು. ಹೀಗಾಗಿ ನಾಪತ್ತೆಯಾದ ವಿಷಯ ಬೆಳಕಿಗೆ ಬಂದಿತ್ತು.

    ಕೂಡಲೇ ಸುತ್ತಮುತ್ತಲಿನ ಪ್ರದೇಶದಲ್ಲಿ ಪೆರ್ನು ಗೌಡ ಅವರಿಗಾಗಿ ಹುಡುಕಾಟ ನಡೆಸಿದ್ದು, ಎಲ್ಲಿಯೂ ಸುಳಿವು ಸಿಕ್ಕಿರಲಿಲ್ಲ.

    ಆದರೆ ಮಧ್ಯಾಹ್ನ 3ಗಂಟೆ ವೇಳೆಗೆ ಸಮೀಪದ ಕೆರೆಯಲ್ಲಿ ಪೆರ್ನು ಗೌಡ ಅವರ ಶವರ ತೇಲುತ್ತಿದ್ದ ದೃಶ್ಯ ಕಂಡು ಬಂದಿದ್ದು, ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಅಪಘಾತವೋ ತಿಳಿದಿಲ್ಲ.

    ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು, ಘಟನೆ ಕುರಿತು ತನಿಖೆ ಮುಂದುವರೆಸಿದ್ದಾರೆ.

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    BELTHANGADY

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಕಾರು

    Published

    on

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ನಡೆದಿದೆ.

    ಉಡುಪಿಯಿಂದ ಮೂವರು ಯುವಕರು ಅರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಸುಮಾರು ಬೆಳಗ್ಗೆ 4.45 ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಶಿಬೆಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದಿದೆ.

    ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದೆ.

    Continue Reading

    BELTHANGADY

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ

    Published

    on

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬುಧವಾರ ನಿಡಿಗಲ್ ಸಮೀಪ ಸಂಭವಿಸಿದೆ.

    ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ.

    ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Continue Reading

    LATEST NEWS

    Trending