Connect with us

    DAKSHINA KANNADA

    ನಡೆಯದ ಕಂಬಳ ನಿಲ್ಲಿಸಲು ಹೈಕೋರ್ಟ್‌ ಮೊರೆ ಹೋದ ಪೆಟಾ..!

    Published

    on

    ಮಂಗಳೂರು : ಕಳೆದ ವರ್ಷ ಬೆಂಗಳೂರಿನಲ್ಲಿ ಅದ್ಧೂರಿ ಕಂಬಳ ನಡೆದಿತ್ತಾದರೂ ಈ ವರ್ಷ ಕಂಬಳ ನಡೆಸೋ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕಂಬಳ ಸಮಿತಿ ಬಿಡುಗಡೆ ಮಾಡಿರುವ ಈ ವರ್ಷದ ಕಂಬಳ ಲಿಸ್ಟ್‌ನಲ್ಲೂ ಕೂಡ ಬೆಂಗಳೂರು ಕಂಬಳದ ಹೆಸರು ಇಲ್ಲ. ಆದ್ರೆ, ಕಂಬಳದ ಬೆನ್ನು ಬಿದ್ದಿರುವ ಪೆಟಾ ಬೆಂಗಳೂರು ಕಂಬಳಕ್ಕೆ ಅವಕಾಶ ನೀಡಬಾರದು ಹಾಗೂ ಅಕ್ಟೋಬರ್ 26 ರಂದು ನಡೆಯುವ ಕಂಬಳ ನಿಲ್ಲಿಸಲು ಆಯೋಜಕರಿಗೆ ಸೂಚಿಸುವಂತೆ ಹೈಕೋರ್ಟ್ ಮೊರೆ ಹೋಗಿದೆ.


    ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರ ಪೀಠದ ಮುಂದೆ ಸೋಮವಾರ(ಅ.21) ಅರ್ಜಿಯನ್ನು ತುರ್ತು ವಿಚಾರಣೆ ಮಾಡಬೇಕೆಂದು ಮನವಿ ಮಾಡಿದರು.

    ಈ ವರ್ಷದ ಜುಲೈನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಆದರೆ, ಇಲ್ಲಿಯವರೆಗೆ ಅದನ್ನು ಪಟ್ಟಿ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ತುರ್ತು ವಿಚಾರಣೆ ಕೋರಿ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ವಿಚಾರಣೆ ಕೈಗೆತ್ತಿಕೊಂಡಿದೆ.

    ವಾದ ಏನು?

    ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ನಡೆಯುವ ಕಂಬಳವನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಕೋಣಗಳನ್ನು ಕರೆತರಲಾಗುತ್ತದೆ. ಕಂಬಳ ಒಂದು ಪ್ರಾಣಿ ಹಿಂ*ಸಾ ಕೃ*ತ್ಯವಾಗಿದೆ ಎಂಬುದು ಪೇಟಾ ವಾದವಾಗಿದೆ. ಇದಕ್ಕೆ ಪೀಠವು, ಅಕ್ಟೋಬರ್ 26ಕ್ಕೆ ಕಂಬಳ ಸ್ಪರ್ಧೆ ಆಯೋಜಿಸಲಾಗಿದೆ ಎನ್ನುತ್ತಿದ್ದೀರಿ. ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮುಂದೆ ಬಂದಿರುವುದೇಕೆ? ಎಂದು ಪ್ರಶ್ನಿಸಿದೆ.

    ಇದನ್ನೂ ಓದಿ : ತೀರ್ಥವನ್ನು ಮೂರು ಬಾರಿ ಸ್ವೀಕರಿಸುವುದು ಯಾಕೆ ಗೊತ್ತಾ?

    ಈ ಸಂಬಂಧ ಜುಲೈನಲ್ಲಿಯೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದನ್ನು ಇನ್ನೂ ವಿಚಾರಣೆಗೆ ನಿಗದಿಪಡಿಸಲಾಗಿಲ್ಲ. ಇದೀಗ ಅಕ್ಟೋಬರ್ 26ಕ್ಕೆ ಕಂಬಳ ಸ್ಪರ್ಧೆ ಆಯೋಜನೆಯಾಗಿದ್ದು, ತುರ್ತು ವಿಚಾರಣೆಗೆ ಪರಿಗಣಿಸಬೇಕಿದೆ ಎಂದು ವಕೀಲರು ತಿಳಿಸಿದರು. ವಾದ ಆಲಿಸಿದ ಪೀಠ ವಿಚಾರಣೆಯನ್ನು ನಾಳೆಗೆ(ಅ.22) ಮೂಂದೂಡಿದೆ.

    ತಮಿಳುನಾಡಿನ ಜಲ್ಲಿಕಟ್ಟು, ಮಹಾರಾಷ್ಟ್ರದ ಎತ್ತಿನಗಾಡಿ ಓಟ ಮತ್ತು ಕರ್ನಾಟಕದ ಕಂಬಳಕ್ಕೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಕಳೆದ ವರ್ಷದ ಮೇನಲ್ಲಿ ಎತ್ತಿಹಿಡಿದಿತ್ತು.

    DAKSHINA KANNADA

    ಕಡಬ: ಅಲಂಕಾರಿನಲ್ಲಿ ಹುಲಿ ಹೆಜ್ಜೆ

    Published

    on

    ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪರಿಸರದಲ್ಲಿ ಮಂಗಳವಾರ (ಅ.22) ಬೆಳಗ್ಗೆ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.

    ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ ಸಮೀಪ ಹುಲಿ ಕಂಡುಬಂದಿದೆ ಎನ್ನಲಾಗಿದೆ.

    ಕೂಡಲೇ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಜಯಕುಮಾರ್, ಗಸ್ತು ಅರಣ್ಯ ಪಾಲಕ ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಸ್ಥಳ ಪರಿಶೀಲನೆ ವೇಳೆ ಸ್ಥಳದಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತು ಕಂಡುಬಂದಿದ್ದು ಅದು ಚಿರತೆಯದ್ದೋ ಅಥವಾ ಹುಲಿಯದ್ದೋ ಅನ್ನುವುದು ಪರಿಶೀಲನೆಯ ಬಳಿಕ ತಿಳಿದು ಬರಬೇಕಿದೆ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Continue Reading

    DAKSHINA KANNADA

    ಪಟ್ಲ ಯಕ್ಷಾಶ್ರಯ ಯೋಜನೆ : ಫಲಾನುಭವಿಗಳಿಗೆ ಚೆಕ್ ವಿತರಣೆ

    Published

    on

    ಮಂಗಳೂರು : ಪಟ್ಲ ಸತೀಶ್ ಶೆಟ್ಟಿ ಅವರು ‘ಪಟ್ಲ ಯಕ್ಷಾಶ್ರಯ’ ಯೋಜನೆಯ ಅಡಿಯಲ್ಲಿ ಆಯ್ಕೆ ಮಾಡಿದ ಯಕ್ಷಗಾನ ಕಲಾವಿದರು ಹಾಗೂ ದೈವಾರಾಧನೆ ಕ್ಷೇತ್ರದ ದೈವ ನರ್ತಕರಿಗಾಗಿ ಗೃಹ ನಿರ್ಮಾಣ  ಕಾರ್ಯವನ್ನು ಈಗಾಗಲೇ ಮಾಡುತ್ತಿದ್ದಾರೆ.

    ಈ ನಿರ್ಮಾಣಕ್ಕಾಗಿ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು, ದಾನಿಗಳು ನೀಡಿದ ಸುಮಾರು 15 ಲಕ್ಷ ಮೊತ್ತವನ್ನು ಫಲಾನುಭವಿಗಳಿಗೆ ಸೋಮವಾರ(ಅ.21) ಸಂಜೆ ಫೌಂಡೇಶನ್ ನ ಆಫೀಸಿನಲ್ಲಿ ವಿತರಿಸಲಾಯಿತು.

    Continue Reading

    BANTWAL

    ಬಂಟ್ವಾಳ: ಜಯರಾಮ ಆಚಾರ್ಯರ ಅಂತಿಮ ದರ್ಶನ

    Published

    on

    ಬಂಟ್ವಾಳ:  ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಯಕ್ಷಗಾನದ ಖ್ಯಾತ ಹಿರಿಯ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಅವರ ಪಾರ್ಥಿವ ಶರೀರ ಬಂಟ್ವಾಳದ ನಿವಾಸಕ್ಕೆ ತರಲಾಗಿದೆ.

    ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ನಡೆಯಲಿದ್ದ ಯಕ್ಷಗಾನ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಹೃದಯಾಘಾತವಾಗಿತ್ತು.

    67 ವರ್ಷದ ಜಯರಾಮ ಆಚಾರ್ಯ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದರಾಗಿ ವಿವಿಧ ಮೇಳಗಳಲ್ಲೂ ಸೇವೆ ಸಲ್ಲಿಸಿದ್ದರು. ಅವರ ಪಾರ್ಥಿವ ಶರೀರ ಬಂಟ್ವಾಳ ನಿವಾಸಕ್ಕೆ ಆಗಮಿಸಿದ ವೇಳೆ ನೂರಾರು ಅಭಿಮಾನಿಗಳು ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

    ಯಕ್ಷಗಾನ ಕಲಾವಿದರು, ಯಕ್ಷಗಾನ ಅಭಿಮಾನಿಗಳು ಹಾಗೂ ಊರ ಗಣ್ಯರು ಆಗಮಿಸಿ ಮೃತರಿಗೆ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದ್ದಾರೆ. ನಮ್ಮಕುಡ್ಲ ವಾಹಿನಿ ಯಕ್ಷ ತೆಲಿಕೆ ತಂಡದ ದಿನೇಶ್ ಕೊಡಪದವು ತಂಡ ಕೂಡಾ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡದುಕೊಂಡಿದ್ದಾರೆ. ಒಬ್ಬ ಮೇರು ಮಟ್ಟದ ಯಕ್ಷಗಾನದ ಕಲಾವಿದನನ್ನು ಕಳೆದುಕೊಂಡಿರುವುದಕ್ಕೆ ದಿನೇಶ್ ಕೊಡಪದವು ಅವರು ಸಂತಾಪ ಸೂಚಿಸಿದ್ದಾರೆ

    Continue Reading

    LATEST NEWS

    Trending