Sunday, March 26, 2023

ಜನ ಸಾಮಾನ್ಯರ ಕೈ ಸುಡುತ್ತಿರುವ ಇಂಧನ: ಪೆಟ್ರೋಲ್‌ ನಂತರ ಶತಕದತ್ತ ಡೀಸೆಲ್‌ ಬೆಲೆ

ನವದೆಹಲಿ: ದೇಶದಲ್ಲಿ ಸತತ 6ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲೇ ಸಾಗಿದೆ. ಪ್ರತಿ ಲೀಟರ್ ಪೆಟ್ರೋಲ್​​ ಮೇಲೆ 30 ಪೈಸೆ ಹಾಗೂ ಡೀಸೆಲ್​ ಮೇಲೆ 35 ಪೈಸೆಯಷ್ಟು ತೈಲ ಕಂಪನಿಗಳು ಹೆಚ್ಚಿಸಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 30 ಪೈಸೆ ಏರಿಕೆಯೊಂದಿಗೆ ಲೀಟರ್ ಪೆಟ್ರೋಲ್ ದರ 104.14 ರೂಪಾಯಿ ಹಾಗೂ 35 ಪೈಸೆ ಹೆಚ್ಚಳದೊಂದಿಗೆ ಡೀಸೆಲ್​ ದರ 92.82 ರೂಪಾಯಿ ಇದೆ.

ಮುಂಬೈನಲ್ಲಿ 29 ಪೈಸೆ ಪೆಟ್ರೋಲ್ ದರ ಹೆಚ್ಚಳ ಮಾಡಿದ್ದು ಲೀಟರ್ ಪೆಟ್ರೋಲ್​ಗೆ 110.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.66 ರೂಪಾಯಿಗೆ ಏರಿಕೆಯಾಗಿದೆ.

ಡೀಸೆಲ್ ಬೆಲೆ ನೂರರ ಗಡಿ ದಾಟಿದ್ದು, ಇಂದು 37 ಪೈಸೆ ಡೀಸೆಲ್ ದರ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.77 ರೂಪಾಯಿ ಇದ್ದು ಡೀಸೆಲ್‌ 98.52 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.80 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.93 ರೂಪಾಯಿಗೆ ಏರಿಕೆ ಆಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.53 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.26 ರೂಪಾಯಿಗೆ ಏರಿಕೆಯಾಗಿದೆ.

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ.

ಎಲ್ಲಾ ರಾಜ್ಯಗಳಲ್ಲೂ ಈಗಾಗಲೇ ಪೆಟ್ರೋಲ್​ ಬೆಲೆ ಶತಕದ ಗಡಿ ದಾಟಿದ್ದು, ಇಂದಿನಿಂದ ಮುಂಬೈನಲ್ಲಿ ಡೀಸೆಲ್​ ಬೆಲೆ ಸಹ ನೂರರ ಗಡಿ ದಾಟಿದೆ.

LEAVE A REPLY

Please enter your comment!
Please enter your name here

Hot Topics

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ: ಖಾದರ್, ರೈ ಸೇರಿದಂತೆ ದ.ಕ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರು ಘೋಷಣೆ..!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.ಬೆಂಗಳೂರು :ರಾಜ್ಯ...

ಸುಳ್ಯ : ಮನೆ ಕೊಟ್ಟಿಗೆ ಕಾಮಗಾರಿಯ ವೇಳೆ ಘೋರ ದುರಂತ – ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತ್ಯು..!

ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ ನಡೆದು ಮೂವರು ಕಾರ್ಮಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.ಸುಳ್ಯ : ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ...

ಉಡುಪಿ ಪಡುಬಿದ್ರೆಯಲ್ಲಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ಶನಿವಾರ ಸಂಜೆ ನಡೆದಿದೆ.ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30)...