Thursday, August 11, 2022

ದೇಶಾದ್ಯಂತ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ

ನವದೆಹಲಿ: ದೇಶದಲ್ಲಿ ಇಂದು ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.

ಪ್ರತಿ ಲೀಟರ್ ಪೆಟ್ರೋಲ್​​ ಮೇಲೆ 30 ಪೈಸೆ ಹಾಗೂ ಡೀಸೆಲ್​ ಮೇಲೆ 35 ಪೈಸೆಯಷ್ಟು ತೈಲ ಕಂಪನಿಗಳು ಹೆಚ್ಚಿಸಿವೆ.


ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 30 ಪೈಸೆ ಏರಿಕೆಯೊಂದಿಗೆ ಲೀಟರ್ ಪೆಟ್ರೋಲ್ ದರ 103.24 ರೂ. ಇಂದ 103.54 ಹಾಗೂ 35 ಪೈಸೆ ಹೆಚ್ಚಳದೊಂದಿಗೆ ಡೀಸೆಲ್​ ದರ 91.77 ರೂ. ಇಂದ 92.12 ರೂ ಏರಿಕೆಯಾಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಸದ್ಯಕ್ಕೆ ಪ್ರತಿ ಲೀಟರ್‌ಗೆ 109.54 ರೂ. ರಷ್ಟಿದ್ದು, ಡೀಸೆಲ್ ದರ 99.22 ರೂ. ಇದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್ ಬೆಲೆ 107.14 ಯಿದ್ದು, ಡೀಸೆಲ್​ ದರ 97.77 ರೂ. ಇದೆ.

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ. ಎಲ್ಲಾ ರಾಜ್ಯಗಳಲ್ಲೂ ಈಗಾಗಲೇ ಪೆಟ್ರೋಲ್​ ಬೆಲೆ ಶತಕದ ಗಡಿ ದಾಟಿದ್ದು, ಡೀಸೆಲ್​ ಬೆಲೆಯೂ ನೂರರ ಗಡಿ ತಲುಪಲಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...