Wednesday, December 1, 2021

ಇಂದು ಡೀಸೆಲ್‌-ಪೆಟ್ರೋಲ್‌ ದರ ತಲಾ 35 ಪೈಸೆ ಏರಿಕೆ

ನವದೆಹಲಿ: ಇಂದೂ ಕೂಡ ದೇಶಾದ್ಯಂತ ಇಂಧನ ದರ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್​​ ಹಾಗೂ ಡೀಸೆಲ್​ ಮೇಲೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ.


ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳದೊಂದಿಗೆ ಲೀಟರ್ ಪೆಟ್ರೋಲ್ ದರ 106.54 ರೂಪಾಯಿ ಹಾಗೂ ಡೀಸೆಲ್​ ದರ 95.27 ರೂಪಾಯಿ ಇದೆ. ಅಷ್ಟೇ ಅಲ್ಲದೆ, ವಿಮಾನಗಳಿಗೆ ಬಳಸುವ ಟರ್ಬೈನ್ ಇಂಧನ (ಎಟಿಎಫ್ ಅಥವಾ ಜೆಟ್ ಇಂಧನ) ಬೆಲೆಗಿಂತ ಪೆಟ್ರೋಲ್ ಈಗ ಶೇಕಡಾ 35 ರಷ್ಟು ಹೆಚ್ಚಾಗಿದೆ.

ದೆಹಲಿಯಲ್ಲಿ ಎಟಿಎಫ್ ಬೆಲೆ ಪ್ರತಿ ಲೀಟರ್‌ಗೆ 79 ಇದೆ.ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 112.44 ಕ್ಕೆ ಹಾಗೂ ಲೀಟರ್ ಡೀಸೆಲ್ 103.26 ರೂ. ಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 107.12 ಕ್ಕೆ ಏರಿಕೆಯಾಗಿದ್ದು,

ಪ್ರತಿ ಲೀಟರ್ ಡೀಸೆಲ್ ದರ 98.38 ರೂ. ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ಗೆ ಪೆಟ್ರೋಲ್​ಗೆ 103.61 ರೂ. ಇದ್ದು, ಲೀಟರ್ ಡೀಸೆಲ್ 99.59 ಕ್ಕೆ ಲಭ್ಯವಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.05ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 101.12 ರೂ. ಗೆ ಏರಿಕೆಯಾಗಿದೆ.

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ. ಕಚ್ಚಾ ತೈಲ ದರವು ಸಹ ಬ್ಯಾರೆಲ್‌ಗೆ 0.21 % ಏರಿಕೆಯಾಗಿದ್ದು, ಸದ್ಯಕ್ಕೆ 86.04 ಡಾಲರ್‌ಗೆ ತಲುಪಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...