Wednesday, October 5, 2022

ಇಂದು ಮತ್ತೆ ಪೆಟ್ರೋಲ್‌ ಶಾಕ್‌: 4 ದಿನದಲ್ಲಿ 3ನೇ ಬಾರಿ ಇಂಧನ ದರ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶುಕ್ರವಾರ ಲೀಟರ್‌ಗೆ ತಲಾ 80 ಪೈಸೆ ಏರಿಕೆಯಾಗಿದ್ದು, ಕಳೆದ ನಾಲ್ಕು ದಿನಗಳಲ್ಲಿ ನಡೆದ ಮೂರನೇ ದರ ಏರಿಕೆ ಇದಾಗಿದೆ. ಈ ಮೂಲಕ ಒಟ್ಟಾರೆ ನಾಲ್ಕು ದಿನಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ಲೀಟರ್‌ಗೆ ತಲಾ 2.4 ರೂ. ಏರಿಕೆಯಾದಂತಾಗಿದೆ.


ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 112.51 ರೂ. ಮುಟ್ಟಿದ್ದು, ಡೀಸೆಲ್ ಲೀಟರ್‌ಗೆ 96.70 ರೂ.ಗೆ ತಲುಪಿದೆ.
ಬರೋಬ್ಬರಿ 137 ದಿನಗಳವರೆಗೆ ತಟಸ್ಥವಾಗಿದ್ದ ಇಂಧನ ದರ ಇದೀಗ ಏರುಗತಿಯಲ್ಲಿದೆ. ನಾಲ್ಕೇ ದಿನದಲ್ಲಿ ಮೂರನೇ ಬಾರಿ ಏರಿಕೆಯಾಗಿದೆ.

ಪಂಚ ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಇಂಧರ ದರದಲ್ಲಿ ಯಾವುದೇ ಬದಲಾವಣೆ ಕಂಡಿರಲಿಲ್ಲ. ಇದೀಗ ಚುನಾವಣೆ ಮುಗಿದ್ದಿದ್ದು, ಮತ್ತೆ ದರ ಏರಿಕೆ ಬಿಸಿ ಗ್ರಾಹಕರಿಗೆ ತಟ್ಟಲಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು ಗ್ರಾಹಕವಾಗಿದೆ. ಭಾರತ ತನ್ನ ತೈಲ ಅಗತ್ಯದ ಸುಮಾರು 85% ನಷ್ಟು ಭಾಗವನ್ನು ಸಾಗರೋತ್ತರ ಮಾರುಕಟ್ಟೆಗಳಿಂದ ತರಿಸಿಕೊಳ್ಳುತ್ತಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...