ಓಡಿಶಾ ಪೆಟ್ರೋಲ್ ಬಂಕ್ನಲ್ಲಿ ಭಾರಿ ಅಗ್ನಿ ದುರಂತ..! ಇಬ್ಬರು ಗಂಭೀರ..
ಭುವನೇಶ್ವರ : ಒಡಿಶಾದ ರಾಜಧಾನಿಯಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಇಲ್ಲಿನ ರಾಜಭವನದ ಬಳಿಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಗೆ ಸೇರಿದ ಪೆಟ್ರೋಲ್ ಬಂಕ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೂರು ಅಗ್ನಿಶಾಮಕ ದಳಗಳು ಕಾರ್ಯಾಚರಣೆ ನಡೆಸಿ ಪಂಪ್ ನಲ್ಲಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ಟ್ಯಾಂಕರ್ ಗಳಿಂದ ಇಂಧನವನ್ನು ಹೊರಹಾಕಲು ತಕ್ಷಣ ಕ್ರಮ ಕೈಗೊಳ್ಳುವಂತೆ ಐಒಸಿಎಲ್ ಗೆ ಸೂಚಿಸಿದ್ದು, ಬೆಂಕಿ ಅವಘಡಕ್ಕೆ ಕಾರಣವೇನು ಇನ್ನೂ ತಿಳಿದುಬಂದಿಲ್ಲ .
ಇದೇ ವೇಳೆ, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
#Bhubaneshwar #Petrolpump caught fire today Near governor house #Bhubaneshwar odisha. @TimesNow @Kalingatv @theargus_in @kanak_news @otvnews @News18Odia @Naveen_Odisha @PMOIndia
Such a painful incident. pic.twitter.com/GceQcoywwv— SUMANT KUMAR BEHERA (@SUMANTKUMARBE11) October 7, 2020