ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ನೇರಳಕಟ್ಟೆಯ ಫ್ರೀಡಮ್ ಕಮ್ಯುನಿಟಿ ಹಾಲ್ ಅನ್ನು ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ.
ಪಿಎಫ್‌ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ದಕ್ಚಿಣ ಕನ್ನಡ ಜಿಲ್ಲಾಧಿಕಾರಿ ಸೂಚನೆಯ ಹಿನ್ನೆಲೆಯಲ್ಲಿ ಕಂದಾಯ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.
ಈ ಹಾಲ್‌ನಲ್ಲಿ ಪಿ.ಎಫ್.ಐ. ನೇತೃತ್ವದಲ್ಲಿ ಅಕ್ರಮ ಚಟುವಟಿಕೆಗಳಿಗೆ ತರಬೇತಿ ನೀಡಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಇದನ್ನು ಬಂದ್ ಮಾಡಲಾಗಿದೆ.
ಜಿಲ್ಲಾಧಿಕಾರಿ ಸೂಚನೆಯಂತೆ ವಿಟ್ಲ ನಾಡಕಚೇರಿಯ ಕಂದಾಯ ಅಧಿಕಾರಿಗಳು ನೇರಳಕಟ್ಟೆಗೆ ಭೇಟಿ ನೀಡಿ ಹಾಲ್ ಅನ್ನು ವಶಕ್ಕೆ ಪಡೆದು ಸೀಲ್ ಮಾಡಿದರು.
ಈ ಸಂದರ್ಭದಲ್ಲಿ ವಿಟ್ಲ ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.