Tuesday, January 31, 2023

ಪಿಎಫ್ಐ ಮೇಲಿನ ನಿಷೇಧ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್..! ರಿಟ್ ಅರ್ಜಿ ವಜಾ..

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಹಾಗೂ ನಿಷೇಧಿತ ಸಂಘಟನೆಯ ರಾಜ್ಯಾಧ್ಯಕ್ಷ ನಾಸಿರ್ ಅಲಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.

ಈ ಮೂಲಕ ಹೈಕೋರ್ಟ್‌ ಕೇಂದ್ರ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ(ಯುಎಪಿಎ) 1967ರ ಸೆಕ್ಷನ್‌ 3, ಉಪ ನಿಯಮ 3ರ ಅಡಿ ಪಿಎಫ್‌ಐ ನಿಷೇಧಿಸಿರುವುದು ಕಾನೂನು ಬಾಹಿರ ಮತ್ತು ಪಿಎಫ್‌ಐ ಅನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿರುವುದು ಸಂವಿಧಾನ ವಿರೋಧಿ ಕ್ರಮ ಎಂದು ಪಿಎಫ್‌ಐ ಪರ ಹಿರಿಯ ವಕೀಲ ಜಯಕುಮಾರ್‌ ಪಾಟೀಲ್‌ ವಾದಿಸಿದ್ದರು.

ಇನ್ನು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪಿಎಫ್‌ಐ ದೇಶವಿರೋಧಿ ಕೃತ್ಯಗಳನ್ನು ನಡೆಸುತ್ತಿದ್ದು, ದೇಶದಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸುತ್ತಿರುವ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈಜೋಡಿಸಿ ಉಗ್ರ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ.

ಎಲ್ಲ ಆಧಾರಗಳನ್ನು ಸಂಗ್ರಹ ಮಾಡಿದ ಬಳಿಕವೇ ಪಿಎಫ್‌ಐ ನಿಷೇಧಿಸಲಾಗಿದೆ.

ಇದರಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

LEAVE A REPLY

Please enter your comment!
Please enter your name here

Hot Topics

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...