Sunday, November 27, 2022

ಇಸ್ಲಾಂ ಅವಹೇಳನಗೈದ ಸಂಘಪರಿವಾರದ ಮುಖಂಡನ ಬಂಧಿಸದ ಪೊಲೀಸರ ತಾರತಮ್ಯಕ್ಕೆ PFI ಗರಂ

ಮಂಗಳೂರು: ಹಿಂದೂ ಸಮಾವೇಶದ ಹೆಸರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಸ್ಲಾಮ್ ಧರ್ಮವನ್ನು ಅತ್ಯಂತ ಹೀನಾಯವಾಗಿ ಅವಹೇಳನ ನಡೆಸಿದ ಸಂಘಪರಿವಾರದ ನಾಯಕ ರಾಧಾಕೃಷ್ಣ ಅಡ್ಯಂತಾಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ, ಪೊಲೀಸ್ ಇಲಾಖೆಯ ತಾರತಮ್ಯ ನೀತಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಧಾಕೃಷ್ಣ ಅಡ್ಯಂತಾಯ ಅದೇ ದಿನ ಭಾಗವಹಿಸಿದ ಮತ್ತೊಂದು ಕಾರ್ಯಕ್ರಮದಲ್ಲೂ ಧರ್ಮ ನಿಂದನೆ ಮಾಡಿ ತನ್ನ ವಿಕೃತಿಯನ್ನು ಪ್ರದರ್ಶಿಸಿದ್ದಾರೆ.

ಆದಾಗ್ಯೂ, ಧಾರ್ಮಿಕ ಭಾವನೆಗೆ ಧಕ್ಕೆ ತಂದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಕೊಂಡು ಆತನ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕಾದ ಜಿಲ್ಲೆಯ ಪೊಲೀಸ್ ಇಲಾಖೆ ಯಾರದೋ ಅಪ್ಪಣೆಗೆ ಕಾಯುತ್ತಿರುವಂತೆ ತೋರುತ್ತಿದೆ.

ಈ ಹಿಂದೆ ಜಿಲ್ಲೆಯ ಗೌರವಾನ್ವಿತ ಜಿಲ್ಲಾಧಿಕಾರಿಯವರಿಗೆ ಬೆದರಿಕೆಯೊಡ್ಡಿದಾಗಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ನಂತರ ಜಿಲ್ಲಾಧಿಕಾರಿಯವರೇ ಈ ಬಗ್ಗೆ ಸ್ವತಃ ದೂರು ದಾಖಲಿಸಿದರೂ ಪೊಲೀಸರಿಗೆ ಆತನನ್ನು ಬಂಧಿಸಲು ಸಾಧ್ಯವಾಗಿಲ್ಲ.

ಇತ್ತೀಚಿಗೆ ಇಬ್ಬರು ಮುಸ್ಲಿಮ್ ಯುವಕರು ಪೊಲೀಸರ ವಿರುದ್ಧ ಘೋಷಣೆ ಕೂಗಿದರು ಎಂಬ ಕಾರಣಕ್ಕಾಗಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸರಣಿ ಬಂಧನ ನಡೆಸಿ ಹಲವಾರು ಮುಸ್ಲಿಮ್ ಯುವಕರ ಬೇಟೆಯಲ್ಲಿ ತೊಡಗಿದ್ದರು.

ಇದೀಗ ಸಂಘಪರಿವಾರದ ನಾಯಕನೊಬ್ಬ ಕಾರ್ಯಕ್ರಮದ ವೇದಿಕೆಯಲ್ಲಿ ನಿಂತು ಇಸ್ಲಾಂ ಧರ್ಮವನ್ನು ಸಾರ್ವಜನಿಕವಾಗಿ ಅವಹೇಳನ ಮಾಡಿದಾಗ ಪೊಲೀಸರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿರುವುದು ತಮ್ಮ ವೃತ್ತಿ ಧರ್ಮಕ್ಕೆ ಮಾಡುತ್ತಿರುವ ಅಪಚಾರವಾಗಿದೆ.

ಮಾತೆತ್ತಿದರೆ ಸದಾ ದ್ವೇಷ ಉಗುಳುವ, ಸರಕಾರಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡುವ ಇಂತಹ ವ್ಯಕ್ತಿಗಳ ವಿರುದ್ಧ ಮೃದು ಧೋರಣೆ ತಾಳುತ್ತಿರುವುದು ಪೊಲೀಸ್ ಇಲಾಖೆಯ ಮೇಲಿನ ನಂಬಿಕೆಯನ್ನೇ ಪ್ರಶ್ನಾರ್ಹವಾಗಿಸಿದೆ.

ಧರ್ಮ ನಿಂದನೆ ಹಾಗೂ ಕೋಮು ದ್ವೇಷ ಹರಡಿದ ಗಂಭೀರ ಆರೋಪದಡಿಯಲ್ಲಿ ಕಠಿಣ ಸೆಕ್ಷನ್ ಗಳನ್ನು ಹಾಕಿ ರಾಧಾಕೃಷ್ಣ ಅಡ್ಯಂತಾಯರನ್ನು ಕೂಡಲೇ ಬಂಧಿಸಬೇಕು.

ಕಾರ್ಯಕ್ರಮ ಸಂಘಟಿಸಿದ ವಿಶ್ವ ಹಿಂದೂ ಪರಿಷತ್ ಹಾಗು ಬಜರಂಗದಳದ ನಾಯಕರ ಮೇಲೆಯೂ ಪ್ರಕರಣ ದಾಖಲಿಸಬೇಕು. ಸಂಘಪರಿವಾರದ ವಿಕೃತಿ ಹಾಗೂ ಪೊಲೀಸರ ತಾರತಮ್ಯ ಧೋರಣೆ ಇದೇ ರೀತಿ ಮುಂದುವರಿದರೆ ಜಿಲ್ಲೆಯ ಜನತೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಇಜಾಝ್ ಅಹ್ಮದ್ ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...