Thursday, September 29, 2022

ಕೇರಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪಿಎಫ್​ಐ ಹರತಾಳ, ಕಲ್ಲು ತೂರಾಟಕ್ಕೆ ಬಸ್ – ವಾಹನಗಳು ಪುಡಿ ಪುಡಿ..!

ಕೇರಳ: NIA ದಾಳಿ ಖಂಡಿಸಿ ಕೇರಳದದಲ್ಲಿ ಪಿಎಫ್​ಐ ಹರತಾಳಕ್ಕೆ ಇಂದು ಕರೆ ನೀಡಿದ್ದು,ಕೊಲ್ಲಂನಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ.

ಸರ್ಕಾರಿ ಬಸ್ ಹಾಗೂ ಇತರ ವಾಹನಗಳ ​ ಮೇಲೆ PFI ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಕೇರಳದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. 100 ಕ್ಕೂ ಅಧಿಕ ಜನರನ್ನುಪೊಲೀಸರು ಬಂಧಿಸಿದ್ದಾರೆ.

ಕೋಝಿಕ್ಕೋಡ್, ಕೊಚ್ಚಿ, ಆಲಪ್ಪುಳ, ಕೊಲ್ಲಂ ಮತ್ತು ವಯನಾಡಿನಲ್ಲಿ ಕೇರಳ ರಸ್ತೆ ಸಾರಿಗೆ ಬಸ್‌ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.. ಕೋಝಿಕ್ಕೋಡ್‌ನಲ್ಲಿ ಲಾರಿಯೊಂದರ ಮೇಲೂ ದಾಳಿ ಮಾಡಲಾಗಿದೆ.

ಕೊಚ್ಚಿಯಲ್ಲಿ ಆಲುವಾ-ಪೆರುಂಬವೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೂ ಪಿಎಫ್‌ಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಕೇರಳ ಪೊಲೀಸರು ರಾಜ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ

ಪೊಲೀಸರು ಪಿಎಫ್ ಐ ಮುಖಂಡರಿಗೆ ನೋಟಿಸ್ ಕಳುಹಿಸಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ...

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...