Sunday, November 27, 2022

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.


ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು ಈ ಸಂದರ್ಭ ಅವರ ಮೆಡಿಕಲ್ ಕ್ಷೇತ್ರದಲ್ಲಿನ ನಿಸ್ವಾರ್ಥ ಜವಾಬ್ದಾರಿಯುತ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

ಉಡುಪಿ ಜಿಲ್ಲಾ assistent drug controler ಆಗಿರುವಂಥ ಶಂಕರ್ ನಾಯ್ಕ್ ಅವರು ಅತಿಥಿಯಾಗಿ ಪಾಲ್ಗೊಂಡಿದ್ದರು. ಇವರು ಫಾರ್ಮಸಿಸ್ಟ್‌ಗಳ ಪ್ರಾಮುಖ್ಯತೆ, ಅವರ ಜವಾಬ್ದಾರಿ, ಅವರ ಅವಿರತ ಸೇವೆಯ ಬಗ್ಗೆ ಮಾತನಾಡಿದರು.


ಅದೇ ರೀತಿ ಗಿರಿಜಾ ಸಂಸ್ಥೆ ಆರೋಗ್ಯ ಕ್ಷೇತ್ರದಲ್ಲಿ ಮಾಡುತ್ತಿರುವ ಸೇವೆಯ ಬಗ್ಗೆ ಶ್ಲಾಘಿಸಿದರು. ಅದೇ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅವರನ್ನೂ ಕೂಡ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನಗೊಂಡ ಹಿರಿಯ ಫಾರ್ಮಸಿಸ್ಟ್‌ಗಳು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಫಾರ್ಮಸಿಸ್ಟ್ ಗಳನ್ನು ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವ ಮೊದಲ ಸಂಸ್ಥೆ ಎಂದು ಭಾವುಕರಾಗಿ ನುಡಿದರು.


ಈ ಸಂದರ್ಭದಲ್ಲಿ ಆ ಭಾಗದ ನಗರ ಸಭೆಯ ಸದಸ್ಯರಾದ ಮಾನಸ ಪೈ. ಸಂಸ್ಥೆಯ ಪಾಲುದಾರರದ ರವೀಂದ್ರ ಕೆ ಶೆಟ್ಟಿ , ಹರೀಶ್ ಕುಮಾರ್ , ಸುರೇಖಾ ರವೀಂದ್ರ ಶೆಟ್ಟಿ ಉಡುಪಿ ಟೆಂಪಲ್ ಸಿಟಿ ಲೀಗನ್‌ನ ಅಧ್ಯಕ್ಷ ಜಗದೀಶ್ ಕೆಮ್ಮಣ್ಣು, ಪೂರ್ವಾಧ್ಯಕ್ಷ ವಿಜಯ ಕುಮಾರ್ ಉದ್ಯಾವರ, ಕಾರ್ಯದರ್ಶಿ ಸಂತೋಷ್ ಕುಮಾರ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

Hot Topics

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...