Connect with us

    MANGALORE

    ಮಂಗಳೂರು ವಿವಿಯಿಂದ ಪ್ರೊ. ಹರೀಶ್ ಕಲಾಯಿಗೆ ಪಿಎಚ್‌ಡಿ ಪದವಿ

    Published

    on

    ಮಂಗಳೂರು: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಹರೀಶ್ ಕಲಾಯಿ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ದೊರಕಿದೆ.


    ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಪೌಲ್.ಜಿ ಅಕ್ವಿನಸ್ ಮಾರ್ಗದರ್ಶನದಲ್ಲಿ ಮಂಡಿಸಿದ

    ‘ಅ ಸ್ಟಡಿ ಆನ್ ಪ್ಯಾಕ್ಟರ್ಸ್ ಇನ್‌ಪ್ಲೋಯೆನ್ಸಿಂಗ್ ಕ್ವಾಲಿಟಿ ಆಫ್ ಲೈಫ್‌ ಎಮಂಗ್ ಸಿಂಗಲ್ ಮದರ್ಸ್ ಇನ್ ಕರ್ನಾಟಕ ಸ್ಟೇಟ್’ ಎಂಬ ಸಂಶೋಧನಾ ಮಹಾಪ್ರಂಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ.

    ಇವರು ಕಲಾಯಿ ಬೊಮ್ಮಣ್ಣಗೌಡ ಮತ್ತು ದೇವಕಿ ಬಿ ದಂಪತಿ ಪುತ್ರರಾಗಿದ್ದಾರೆ. ಪ್ರಸ್ತುತ ಡಾ. ಹರೀಶ್ ಕಲಾಯಿ, ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    DAKSHINA KANNADA

    ಖ್ಯಾತ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ ಲವ್ ಸ್ಟೋರಿ ಗೊತ್ತಾ ??

    Published

    on

    ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಪತ್ನಿ ದೇವಿಶಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ದಂಪತಿಗಳಿಗೆ ಗೌರವಾರ್ಪಣೆ ಮಾಡಲಾಯಿತು.

    ಸೂರ್ಯಕುಮಾರ್ ಯಾದವ್ ಮತ್ತು ದೇವಿಶಾ ಶೆಟ್ಟಿ  ಈಗ ಮತ್ತೆ ಸುದ್ದಿಯಲ್ಲಿದ್ದು, ಈ ಬಾರಿ ಸುದ್ದಿಯಾಗಲು ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿರುವುದು. ಟಿ20 ವಿಶ್ವಕಪ್​ಗೂ ಮುನ್ನ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಅದಕ್ಕಾಗಿ, ಟೀಮ್ ಇಂಡಿಯಾ ವಿಶ್ವಕಪ್​ ಗೆದ್ದ ಬಳಿಕ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಸೂರ್ಯಕುಮಾರ್ ಯಾದವ್​ಗೆ ವಿಶೇಷ ನಂಟು ಬೆಳೆಯಲು ಮುಖ್ಯ ಕಾರಣ ಪತ್ನಿ ದೇವಿಶಾ ಶೆಟ್ಟಿ.

    ದೇವಿಶಾ ಶೆಟ್ಟಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಮುಂಬೈನಲ್ಲಿ ಹುಟ್ಟಿ ಬೆಳೆದ ದೇವಿಶಾ ಪೊದ್ದಾರ್ ಪದವಿ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಪೂರೈಸಿದ್ದು, ಸೂರ್ಯಕುಮಾರ್ ಯಾದವ್ ಕೂಡ ಅಲ್ಲಿಯೇ ಓದಿದ್ದರು. 2012 ರಲ್ಲಿ ಕಾಲೇಜ್​ನಲ್ಲಿ ನಡೆದ ನೃತ್ಯ ಕಾರ್ಯಕ್ರಮದಲ್ಲಿ ಸೂರ್ಯಕುಮಾರ್ ಯಾದವ್, ದೇವಿಶಾ ಶೆಟ್ಟಿ ಅವರನ್ನು ಮೊದಲು ನೋಡಿದ್ದಾರೆ. ಇದೇ ವೇಳೆ ದೇವಿಶಾ ಮಾಡಿದ ನೃತ್ಯಕ್ಕೆ ಫಿದಾ ಆಗಿದ್ದರು. ಸೂರ್ಯಕುಮಾರ್ ಸೀನಿಯರ್ ಆಗಿದ್ದು, ದೇವಿಶಾ ಜೂನಿಯರ್ ವಿದ್ಯಾರ್ಥಿನಿ.

    ನಿಧಾನವಾಗಿ ಆವರಿಬ್ಬರ ಸ್ನೇಹ ಬೆಳೆದಿದ್ದು, ಬಳಿಕ ಪ್ರೇಮವಾಗಿ ಬದಲಾಗಿದೆ. ಸೂರ್ಯನ ಪ್ರೇಮ ನಿವೇದನೆಯನ್ನು ದೇವಿಶಾ ಶೆಟ್ಟಿ ಒಪ್ಪಿಕೊಂಡಿದ್ದರು. ಅಲ್ಲದೆ 2012 ರಿಂದ 2016 ರವರೆಗೆ ಇಬ್ಬರು ಪ್ರೇಮಪಕ್ಷಿಗಳಾಗಿ ತಿರುಗಾಡಿದ್ದು, 2016 ರಲ್ಲಿ ತಮ್ಮ ಪ್ರೇಮ ವಿಚಾರವನ್ನು ಮನೆಯವರಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ, ಅದಾಗಲೇ ಐಪಿಎಲ್​ ಮೂಲಕ ಸದ್ದು ಮಾಡಿದ್ದ ಸೂರ್ಯನನ್ನು ದೇವಿಶಾ ಕುಟುಂಬದವರು ಒಪ್ಪಿದ್ದು, ಇತ್ತ ಸೂರ್ಯಕುಮಾರ್ ಯಾದವ್ ಅವರ ಕುಟುಂಬದವರಿಗೂ ದೇವಿಶಾ ಇಷ್ಟವಾಗಿದ್ದರು.

    ಮೇ 29, 2016 ರಲ್ಲಿ ಇಬ್ಬರ ನಿಶ್ಚಿತಾರ್ಥ ನೆರವೇರಿದ್ದು, ದಕ್ಷಿಣ ಭಾರತದ ಸಂಪ್ರದಾಯದಂತೆ ಜುಲೈ 7, 2016 ರಂದು ವಿವಾಹವಾದಗಿದ್ದು. ಇದೀಗ ಇಬ್ಬರು ಮಾದರಿ ದಂಪತಿಗಳಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಮುಂಬೈನಲ್ಲೇ ಬೆಳೆದರೂ ತವರಿನ ನಂಟು ಬಿಟ್ಟುಕೊಳ್ಳದ ದೇವಿಶಾ ಶೆಟ್ಟಿ ಪತಿಯ ಜೊತೆ ಆಗಾಗ ತುಳುನಾಡಿಗೆ ಬರುವ ಮೂಲಕ ಸುದ್ದಿಯಾಗುತ್ತಿದ್ದಾರೆ.

    Continue Reading

    LATEST NEWS

    ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಮೃ*ತ್ಯು

    Published

    on

    ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃ*ತಪಟ್ಟಿದ್ದಾರೆ.

    ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌(23) ಮೃ*ತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.

    ಅನಾಫಿಲ್ಯಾಕ್ಟಿಕ್‌ ರಿಯಾಕ್ಷನ್‌ ಗ್ಲೋರಿಯಾ ಅವರಿಗೆ ಫ‌ುಡ್‌ ಅಲರ್ಜಿ(ಅನಾಫಿಲ್ಯಾಕ್ಟಿಕ್‌ ರಿಯಾಕ್ಷನ್‌) ಸಮಸ್ಯೆ ಇತ್ತು. ಇದರಿಂದಾಗಿ ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ನಿಧನರಾದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ಅವರ ಅಂಗಾಂಗಳನ್ನು ಆಸ್ಪತ್ರೆಯಲ್ಲಿ ವಿವಿಧ ಸ್ವೀಕೃತದಾರರಿಗೆ ರವಾನಿಸಲಾಗಿದೆ. ಮೃ*ತರ ಕುಟುಂಬದ ಒಪ್ಪಿಗೆಯಂತೆ ಅಂಗಾಂಗ ದಾನ ಮಾಡಲಾಯಿತು.

    Continue Reading

    DAKSHINA KANNADA

    ಅ*ಪ್ರಾಪ್ತ ವಯಸ್ಕನ ಮೇಲೆ ಅ*ಸ್ವಾಭವಿಕ ಲೈಂ*ಗಿಕ ಕ್ರಿಯೆ ಆರೋಪ; ಶಿಕ್ಷಕ ದೋಷಮುಕ್ತ

    Published

    on

    ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮೇಲೆ ಕಾಲೇಜಿನಲ್ಲಿ ಅ*ಸ್ವಾಭಾವಿಕ ಲೈಂ*ಗಿಕ ಕ್ರಿಯೆ ನಡೆಸಿದ ಆರೋಪ ಎದುರಿಸುತ್ತಿದ್ದ ಕಾಲೇಜಿನ ಉಪನ್ಯಾಸಕರೊಬ್ಬರನ್ನು ದೋಷ ಮುಕ್ತಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ದೀರ್ಘ ತನಿಖೆಯ ಬಳಿಕ ನೈಜ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ಶಿಕ್ಷನನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ತ್ವರಿತ ಗತಿ ವಿಶೇಷ ನ್ಯಾಯಾಲಯ (ಪೊಕ್ಸೊ) ದೋಷಮುಕ್ತ ಗೊಳಿಸಿದೆ.

    ಏನಿದು ಪ್ರಕರಣ ? 

    ‘ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ನೃತ್ಯ ಅಭ್ಯಾಸ ಮಾಡುತ್ತಿದ್ದಾಗ ಉಪನ್ಯಾಸಕ ಕಾರ್ತಿಕ್, ನೋಟ್ಸ್‌ ನೋಡುವ ನೆಪದಲ್ಲಿ ಅ*ಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಕರೆಸಿಕೊಂಡಿದ್ದರು. ನಂತರ ದೈಹಿಕ ಶಿಕ್ಷಕರ ಕೊಠಡಿಗೆ ಕರೆದೊಯ್ದು ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡುವುದಾಗಿ ಆಮಿಷವೊಡ್ಡಿ ಬಟ್ಟೆ ಕ*ಳಚಿ ಅ*ಸ್ವಾಭಾವಿಕ ಲೈಂ*ಗಿಕ ಕ್ರಿಯೆ ನಡೆಸಿದ್ದರು. ನಂತರವೂ ಹಲವು ಬಾರಿ ಅ*ಸ್ವಾಭಾವಿಕ ಲೈಂ*ಗಿಕ ಕ್ರಿಯೆ ನಡೆಸಿದ್ದರು’ ಎಂದು ಆ*ರೋಪಿಸಿ ಅ*ಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ದೂರು ನೀಡಿದ್ದ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ್ದ ಸಹಾಯಕ ಪೊಲೀಸ್ ಆಯುಕ್ತ ಪಿ. ಎ. ಹೆಗಡೆ ಮತ್ತು ಎಸ್.ಮಹೇಶ್ ಕುಮಾರ್ ದೋಷರೋಪಣ ಪಟ್ಟಿ ಸಲ್ಲಿಸಿದ್ದರು.

     

    ಇದನ್ನೂ ಓದಿ : ಉಜಿರೆ: ಕಬಡ್ಡಿ ಕ್ರೀಡಾಪಟುವಾಗಿದ್ದ ಕಾಲೇಜು ವಿದ್ಯಾರ್ಥಿ ಅಸೌಖ್ಯದಿಂದ ಮೃ*ತ್ಯು

     

    ‘ಪರೀಕ್ಷೆಗಳಲ್ಲಿ ಅತ್ಯಂತ ಕಡಿಮೆ ಅಂಕಗಳಿಸಿದ್ದನ್ನು ಹಾಗೂ ಈ ಸಲುವಾಗಿ ಆರೋಪಿ ಉಪನ್ಯಾಸಕರು ಪೋಷಕರನ್ನು ಕಾಲೇಜಿಗೆ ಹಲವು ಬಾರಿ ಕರೆಸಿದ್ದನ್ನು ವಿದ್ಯಾರ್ಥಿಯು ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣಾ ಸಮಯದಲ್ಲಿ ಒಪ್ಪಿಕೊಂಡಿದ್ದ. ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿದ ಪ್ರಕರಣ ಸಂಬಂಧ ಪೋಷಕರನ್ನು ಕಾಲೇಜಿಗೆ ಕರೆಸಿದ್ದನ್ನೂ ಒಪ್ಪಿಕೊಂಡಿದ್ದ. ವಿದ್ಯಾರ್ಥಿಯನ್ನು ಪೊಲೀಸರು ಡ್ರ*ಗ್ಸ್ ಸೇವನೆ ವಿಚಾರವಾಗಿ ವಿಚಾರಣೆ ಮಾಡಿ, ಎಚ್ಚರ ನೀಡಿದ ಕುರಿತು ಕಾಲೇಜಿನ ಪ್ರಾಂಶುಪಾಲರು ನ್ಯಾಯಾಲದಲ್ಲಿ ಹೇಳಿಕೆ ನೀಡಿದ್ದರು. ವಿದ್ಯಾರ್ಥಿ ಡ್ರ*ಗ್ಸ್ ಸೇವನೆ ಮಾಡಿದ ಬಗ್ಗೆ ಆರೋಪಿ ಉಪನ್ಯಾಸಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಹಗೆಯಿಂದ ವಿದ್ಯಾರ್ಥಿಯು ಕತೆ ಕಟ್ಟಿ ಉಪನ್ಯಾಸಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದ’ ಎಂದು ಆರೋಪಿ ಪರ ವಕೀಲರಾದ ರಾಜೇಶ್ ಕುಮಾರ್ ಅಮ್ಟಾಡಿ ವಾದಿಸಿ ಸಾಬೀತುಪಡಿಸಿದ್ದರು.

    Continue Reading

    LATEST NEWS

    Trending