Monday, July 4, 2022

ಗಂಭೀರ ಗಾಯಗೊಂಡಿದ್ದ ಛಾಯಗ್ರಾಹಕ ಸಾವು

ತುಮಕೂರು: ಇಲ್ಲಿನ ತಾವರೆಕೆರೆ ಹೆದ್ದಾರಿಯಲ್ಲಿ ಕಾರೊಂದು ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡಿದ್ದ ಕುಂದಾಪುರದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.

 

ಘಟನೆ ಹಿನ್ನೆಲೆ

ಕುಂದಾಪುರ ಛಾಯಾಗ್ರಾಹಕ ಮತ್ತು ಎಸ್.ಕೆ.ಪಿ.ಎ ಜಿಲ್ಲಾ ಸಲಹಾ ಸಮಿತಿಯ ಸಂಚಾಲಕರಾದ ಅಶೋಕ್ ಕುಮಾರ್ ಶೆಟ್ಟಿ ಅವರು ನಿನ್ನೆ ಸಮಾರಂಭ ಮುಗಿಸಿಕೊಂಡು ಬರುವಾಗ ದಾವಣಗೆರೆಯಲ್ಲಿ ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಅಶೋಕ್ ಕುಮಾರ್ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು.

ಈ ವೇಳೆ ಅಶೋಕ್ ಕುಮಾರ್ ಅವರ ಮಗ ಪನ್ನಗ ಶೆಟ್ಟಿ ಕಾರು ಚಲಾಯಿಸುತ್ತಿದ್ದರು. ಕಾರು ಹೊಡೆದ ರಭಸಕ್ಕೆ ಅಶೋಕ್ ಕುಮಾರ್ ಮತ್ತು ಮಗನಿಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ತುಮಕೂರಿನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ  ಅಶೋಕ್ ಕುಮಾರ್  ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಮಗ ಪನ್ನಗ ಶೆಟ್ಟಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ 518 ಅಕ್ರಮ ವಿದೇಶಿಗರು ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರು ಪೊಲೀಸರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಯೂರಿರುವ ವಿದೇಶಿಗರ ಪತ್ತೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.ಸರಿಯಾದ ದಾಖಲೆಗಳಿಲ್ಲದ 518 ವಿದೇಶಿ ವಲಸಿಗರೆಂದು ಹೇಳಲಾದವರ ವಿಚಾರಣೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಅಕ್ರಮವಾಗಿ ‌ನೆಲೆಸಿರುವ ವಿದೇಶಿಯರ...

ಪುತ್ತೂರಿನಲ್ಲಿ ಬೈಕ್‌ – ಕಾರು ಡಿಕ್ಕಿ: ಓರ್ವ ಜೀವಾಂತ್ಯ

ಪುತ್ತೂರು: ಬೈಕ್ ಮತ್ತು ಮಾರುತಿ ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರ ವಲಯದ ಕುಂಬ್ರದಲ್ಲಿ ನಡೆದಿದೆ.ಕು೦ಬ್ರ...

ಮಂಗಳೂರು: ಬೆಂಗ್ರೆ ವಾರ್ಡಿನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್

ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ...