Wednesday, October 5, 2022

ಸ್ವಾತಂತ್ರ್ಯ ದಿನಾಚರಣೆ ಸಂಧರ್ಭದಲ್ಲಿ ದೈಹಿಕ ಅಂತರ ಕಡ್ಡಾಯ: ದ.ಕ ಜಿಲ್ಲಾಧಿಕಾರಿ

ಸ್ವಾತಂತ್ರ್ಯ ದಿನಾಚರಣೆ ಸಂಧರ್ಭದಲ್ಲಿ ದೈಹಿಕ ಅಂತರ ಕಡ್ಡಾಯ: ದ.ಕ ಜಿಲ್ಲಾಧಿಕಾರಿ

ಮಂಗಳೂರು : ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಧರ್ಭದಲ್ಲಿ ದೈಹಿಕ ಅಂತರ, ಸಾಮಾಜಿಕ ಅಂತರ ಮತ್ತು ಮಾಸ್ಕ್‍ಗಳನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ,  ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಮಟ್ಟದ ಧ್ವಜಾರೋಹಣ ನಡೆಯಲಿದ್ದು ಈ ಸಂದರ್ಭದಲ್ಲಿ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ.

ಸ್ವಾತಂತ್ರ್ಯ ದಿನಾಚರಣೆಯನ್ನು ಸಾರ್ವಜನಿಕರ ವಿಕ್ಷಣೆಗಾಗಿ ಸಾಮಾಜಿಕ ಜಾಳತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ನಗರದ ಮುಖ್ಯ ವೃತ್ತದಲ್ಲಿ ಡಿಜಿಟಲ್ ಪರದೆಯನ್ನು ಅಳವಡಿಸಿ ಸಾರ್ವಜನಿಕರ ವಿಕ್ಷಣೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜನ ಸಾಮಾನ್ಯರು ತಮ್ಮ ದೇಶ ಭಕ್ತಿಯನ್ನು ಮನೆಯಲ್ಲಿ ಇದ್ದು ವ್ಯಕ್ತಪಡಿಸಬೇಕು ಎಂದು ಹೇಳಿದರು.
ಈ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಶೇಷವಾಗಿ ಕೊರೋನಾದ ಸಮಯದಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಪೌರ ಕಾರ್ಮಿಕರು, ಆಶಾ ಕಾರ್ಯಕತೆಯರು, ಸ್ವಚ್ಚತಾ ಕಾರ್ಮಿಕರು, ಪೊಲೀಸರು, ವೈದ್ಯರ ಸೇವೆಯನ್ನು ಗುರುತಿಸಿ ಅವರಿಗೆ ಸಮ್ಮಾನ  ಮಾಡುವ ಯೋಜನೆಯನ್ನು ಜಿಲ್ಲಾಡಳಿತ ರೂಪಿಸಿಕೊಂಡಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...