ಬೆಳ್ತಂಗಡಿ: ಪಿಕಪ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಅನುಗ್ರಹ ಶಾಲೆಯ ಬಳಿ ನಿನ್ನೆ ನಡೆದಿದೆ.
ಪಿಕಪ್ ವಾಹನ ಉಜಿರೆ ಕಡೆಯಿಂದ ನೆರಿಯ ಕಡೆ ಸಾಗುತ್ತಿದ್ದ ವೇಳೆ ಚಾಲಕನ ಕಂಟ್ರೋಲ್ ಕೈತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ.
ಈ ವಾಹನದಲ್ಲಿ ಇದ್ದ ಮೂವರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.