Saturday, October 1, 2022

ವಿಟ್ಲ: ಬೈಕ್‌ಗೆ ಪಿಕಪ್ ವಾಹನ ಢಿಕ್ಕಿ-ಸವಾರ ದಾರುಣ ಅಂತ್ಯ…

ವಿಟ್ಲ: ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಪುವಿನಲ್ಲಿ ನಡೆದಿದೆ.

ಬದಿಯಡ್ಕ ನಿವಾಸಿ ಸಂದೇಶ್ (33) ಮೃತ ದುರ್ದೈವಿ ಯುವಕ.


ಈತ ವೃತ್ತಿಯಲ್ಲಿ ಚಾಲಕನಾಗಿದ್ದು ಹವ್ಯಾಸಿ ಗಾಯಕನಾಗಿಯೂ ಕೂಡಾ ಗುರುತಿಸಿಕೊಂಡಿದ್ದ.
ವಿಟ್ಲ ಕಡೆಯಿಂದ ಬದಿಯಡ್ಕ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಅತ್ಯಂತ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ.

ಇದರ ಪರಿಣಾಮ ಆತ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್‌ಪೆಕ್ಟರ್ ಎಚ್‌ ನಾಗರಾಜ್, ಎಸ್‌.ಐ ಸಂದೀಪ್, ಎಚ್‌.ಸಿ ಜಯರಾಮ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಬಸ್ & ಸ್ಕೂಟರ್ ಢಿಕ್ಕಿ-ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್...

ಮಂಗಳೂರು: ನೂತನ ಮೇಯರ್ ಪ್ರಥಮ ಸಭೆ-ತ್ಯಾಜ್ಯ ವಿಲೇವಾರಿ ಗುತ್ತಿಗೆ ಮತ್ತು LED ಲೈಟ್‌ ಬಗ್ಗೆ ಗಂಭೀರ ಚರ್ಚೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಸಿಕ ಸಭೆ ಇಂದು ಲಾಲ್‌ಬಾಗ್‌ನಲ್ಲಿರುವ ಪಾಲಿಕೆ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಮೇಯರ್‌ ಜಯಾನಂದ ಅಂಚನ್‌ ಆಧ್ಯಕ್ಷತೆಯ ಈ ಪ್ರಥಮ ಸಭೆಯಲ್ಲಿ ನಗರದ ತ್ಯಾಜ್ಯ ವಿಲೆವಾರಿ ಗುತ್ತಿಗೆ ಮತ್ತು...

ಕಡಬದಲ್ಲಿ 14 ವರ್ಷದ ಬಾಲಕಿಯ ಮೇಲೆ ಪೈಶಾಚಿಕ ಕೃತ್ಯ ಮಹಿಳೆ ಸೇರಿ 14 ಮಂದಿ ವಿರುದ್ಧ FIR

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸುಬ್ರಹ್ಮಣ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರದ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ...