Home ಪ್ರಮುಖ ಸುದ್ದಿ ಬಂಟ್ವಾಳದಲ್ಲಿ ಪಿಕಪ್‌-ಅಟೋ ಮುಖಾಮುಖಿ ಡಿಕ್ಕಿ : ಐವರು ಗಂಭೀರ ಗಾಯ..!

ಬಂಟ್ವಾಳದಲ್ಲಿ ಪಿಕಪ್‌-ಅಟೋ ಮುಖಾಮುಖಿ ಡಿಕ್ಕಿ : ಐವರು ಗಂಭೀರ ಗಾಯ..!

ಬಂಟ್ವಾಳದಲ್ಲಿ ಪಿಕಪ್‌-ಅಟೋ ಮುಖಾಮುಖಿ ಡಿಕ್ಕಿ : ಐವರು ಗಂಭೀರ ಗಾಯ..!

ಬಂಟ್ವಾಳ : ಪಿಕಪ್ ವಾಹನ ಮತ್ತು ಅಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ, ಪಿಕಪ್ ಚಾಲಕ ಸೇರಿದಂತೆ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೆಳಗಿನ ಪೇಟೆಯಲ್ಲಿ ಸಂಭವಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಸಾಫ್ಟ್ ಡ್ರಿಂಕ್ಸ್ ಗಳನ್ನು ತುಂಬಿಸಿಕೊಮಡು ಹೋಗುತ್ತಿದ್ದ ಮಹೀಂದ್ರ ಪಿಕಪ್ ವಾಹನ ಬಂಟ್ವಾಳದಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸರ್ವೀಸ್ ಅಟೋ ರಿಕ್ಷಾಕ್ಕೆ ಢಿಕ್ಕಿಯಾಗಿ ಬಳಿಕ ವಿದ್ಯುತ್ ಕಂಬಕ್ಕೆ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾಗಿದೆ.

ಘಟನೆಯಲ್ಲಿ ರಿಕ್ಷಾ ಚಾಲಕ ಪರ್ಲ ನಿವಾಸಿ ಜೆರಾಲ್ಡ್ , ಪಿಕಪ್ ಚಾಲಕ ಗೌತಮ್ ಹಾಗೂ ಅಟೋದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆಯಲ್ಲಿ ಅಡ್ಡಲಾಗಿ ಪಿಕಪ್ ವಾಹನ ಬಿದ್ದ ಕಾರಣ ಸ್ವಲ್ಪ ಹೊತ್ತು ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ಸುಮಾರು ಒಂದು ಗಂಟೆಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡದೆ ಬಳಿಕ ವಾಹನ ತೆರವುಗೊಳಿಸಲಾಯಿತು.

ರಸ್ತೆಯಲ್ಲಿ ಸೋಡಾ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿತ್ತು. ಸ್ಥಳೀಯ ಯುವಕರು ಬಾಟಲಿಗಳನ್ನು ತೆರವುಗೊಳಿಸಿ ಸುಗಮ ಸಚಾರಕ್ಕೆ ಅನುವು ಮಾಡಿಕೊಟ್ಟರು.

ಸ್ಥಳಕ್ಕೆ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ವಿಡಿಯೋಗಾಗಿ..

- Advertisment -

RECENT NEWS

ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಜೂ 13 ರಿಂದ ಪ್ರಾರ್ಥನೆಗೆ ಅವಕಾಶ

ಚರ್ಚ್ ಗಳಲ್ಲಿ ನಡೆಯುತ್ತಿದೆ ಭರದ ಸಿದ್ದತೆ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್ ಗಳಲ್ಲಿ ಪ್ರಾರ್ಥನೆಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು...

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...