BANTWAL
ಪಿಕ್ ಅಪ್ ವಾಹನ ಕಳವು ಪ್ರಕರಣ: 8 ಮಂದಿ ಆರೋಪಿಗಳ ಬಂಧನ
ಬಂಟ್ವಾಳ: ತಾಲೂಕಿನ ವಿಟ್ಲ ಸಮೀಪದ ಕುಡ್ತಮುಗೇರು ಎಂ. ಎಚ್. ಶಾಮಿಯಾನ ಮಾಲಕರಿಗೆ ಸೇರಿದ ಪಿಕ್ ಅಪ್ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಎಂಬುವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೆ. 23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರಲ್ಲಿ ಶಾಮಿಯಾನ ಸಾಮಾಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನ ವನ್ನು ಕಳವು ಮಾಡಲಾಗಿತ್ತು.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೆಬಲ್ ಗಣೇಶ್ ಪ್ರಸಾದ್ ಮತ್ತು ಕಾನ್ ಸ್ಟೆಬಲ್ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
BANTWAL
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸದ ವಿದ್ಯಾರ್ಥಿನಿಗೆ ಪ್ರಶಸ್ತಿ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪೆರಾಜೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಮಂಗಳೂರಿನ ರಾಮಕೃಷ್ಣ ಹೈ ಸ್ಕೂಲ್ ಬಂಟ್ಸ್ ಹಾಸ್ಟೆಲ್ ಇದರ ಜಂಟಿ ಆಶ್ರಯದಲ್ಲಿ ಡಿ.1ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ನಡೆದಿತ್ತು.
ಈ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೇವಿಕಾ ಕೆ ಭಾಗವಹಿಸಿ ಪ್ರೌಢ ಶಾಲಾ ವಿಭಾಗದ ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಇವರನ್ನು ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್