Thursday, August 11, 2022

ನೆಲ್ಯಾಡಿಯ ಪಿಗ್ಮಿ ಸಂಗ್ರಾಹಕ ನಾಪತ್ತೆ: ‘ಛೋಟಾ ರಾಜನ್ ಗ್ಯಾಂಗ್‌ ಕಿಡ್ನಾಪ್‌ ಮಾಡಿದ್ದಾರಂತೆ’

ನೆಲ್ಯಾಡಿ: ಪಿಗ್ಮಿ ಸಂಗ್ರಾಹಕರಾಗಿದ್ದ ವ್ಯಕ್ತಿಯೋರ್ವ 15 ದಿನಗಳಿಂದ ಏಕಾಏಕಿ ನಾಪತ್ತೆಯಾಗಿದ್ದಾನೆ. ಇದೀಗ ತಾನು ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿರುವುದಾಗಿ ಹೇಳಿಕೊಂಡಿದ್ದಾನೆ. ಈತ ಹಲವರಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.


ನಾಪತ್ತೆಯಾದವರನ್ನು ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26) ಎಂದು ಗುರುತಿಸಲಾಗಿದೆ.
ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಪ್ರವೀಣ್ ಕುಮಾರ್ ಜ.3ರಿಂದ ನಾಪತ್ತೆಯಾಗಿದ್ದರು.
ಈ ಮಧ್ಯೆ ಜ.18ರಂದು ಮಧ್ಯಾಹ್ನದ ವೇಳೆಗೆ ಪತ್ರಿಕಾ ವರದಿಗಾರರೊಬ್ಬರಿಗೆ ವಾಟ್ಸಫ್ ಕರೆ ಮಾಡಿ, ‘ನಾನು ಬಿಹಾರದಲ್ಲಿದ್ದು ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿದ್ದೇನೆ’ ಎಂದು ತಿಳಿಸಿದ್ದಾರೆ.
ಇವರು ನೆಲ್ಯಾಡಿಯಲ್ಲಿ ಕಳೆದ 10 ಕ್ಕೂ ಹೆಚ್ಚು ವರ್ಷಗಳಿಂದ ಪಿಗ್ಮಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದು, ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು, ಸಾಲ ಹಿಂತಿರುಗಿಸಲು ಸಾಧ್ಯವಾಗದೆ ನಾಪತ್ತೆಯಾಗಿದ್ದಾಗಿ ಹೇಳಲಾಗುತ್ತಿದೆ.

ಇಲ್ಲಿನ ಅಡಿಕೆ ವ್ಯಾಪಾರಿಗಳು, ಪ್ರತಿಷ್ಠಿತ ಉದ್ಯಮಿಗಳು ಸೇರಿದಂತೆ ಹಲವು ಮಂದಿಯ ವಿಶ್ವಾಸಗಳಿಸಿಕೊಂಡಿದ್ದ ಅವರು ಕೆಲವರಿಂದ ಲಕ್ಷಕ್ಕೂ ಮಿಕ್ಕಿ ಕೈ ಸಾಲ ಪಡೆದುಕೊಂಡು ಹಿಂತಿರುಗಿಸಲಾಗದೆ ಈಗ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಅಲ್ಲದೇ ಚಿಟ್‌ಫಂಡ್‌ನಲ್ಲೂ ಇವರಿಂದ ಕೆಲವರಿಗೆ ಮೋಸ ಆಗಿದೆ ಎಂಬ ದೂರುಗಳು ಕೇಳಿಬಂದಿವೆ. ಇವರು ಹಲವು ಮಂದಿಯಿಂದ ರೂ.55ಲಕ್ಷಕ್ಕೂ ಹೆಚ್ಚು ಕೈ ಸಾಲ ಮಾಡಿದ್ದರು ಎಂದು ಹೇಳಲಾಗಿದೆ.
ಮೊಬೈಲ್ ಈಗ ಸ್ವಿಚ್ಡ್ ಆಫ್ ಆಗಿದೆ.
ಪ್ರವೀಣ್ ನೆಲ್ಯಾಡಿ ವರ್ತಕ ಸಂಘದ ಕಾರ್ಯದರ್ಶಿಯೂ ಆಗಿದ್ದರು. ಮನೆಯವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

ಅಮೃತ ಮಹೋತ್ಸವ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯಬೇಕು-ಶಾಸಕ ಪೂಂಜಾ

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ಗುರುವಾಯನಕೆರೆ ನವಶಕ್ತಿ ಸಭಾಭವನದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದರು.ಈ ವೇಳೆ ಮಾಧ್ಯಗಳನ್ನು ಉದ್ದೇಶಿಸಿ ಮಾತನಾಡಿದ...