BANTWAL
VIDEO: ಕೆಸರುಗದ್ದೆಯಲ್ಲಿ ಜಿಲ್ಲಾಧಿಕಾರಿಯ ಪಿಲಿ ನಲಿಕೆ
Published
2 months agoon
By
NEWS DESK3ಬಂಟ್ವಾಳ: ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ವಹಿಸಿದ್ದರು.
ಕಾರ್ಯಕ್ರಮದ ಧ್ವಜಾರೋಹಣವನ್ನು ಡಾ.ರೂಪಲತಾ ಕೊಂಗಲಾಯಿ ನೆರವೇರಿಸಿ , ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷ ರಾಮ್ ಕಿಶಾನ್ ರೈ ನೆರವೇರಿಸಿದರು. ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು.
ಕೆಸರು ಗದ್ದೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ ಹೆಣೆಯುವುದು, ಬುಟ್ಟಿ ಹೆಣೆಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ಹೆಣೆಯುವುದು, ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು.
ಕತ್ತಲು ಆವರಿಸಿದ ಬ್ರಹ್ಮಗಿರಿಯ ಪ್ರವಾಸಿತಾಣ..! ಮೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಕಡಿತ
ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರುಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.
ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ
ಈಗಾಗಲೇ ಶಾಲಾ ಮಕ್ಕಳಿಗೆ ರಜೆ ನೀಡುವ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಫೇವರೆಟ್ ಆಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅನಂತಾಡಿಯಲ್ಲಿ ಸಂಘಟನೆಯವರು ಆಯೋಜನೆ ಮಾಡಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ, ಮಕ್ಕಳೊಂದಿಗೆ ಮಕ್ಕಳಾಗಿ ಕೆಸರಿನಲ್ಲಿ ಆಟವಾಡಿದ್ದಾರೆ. ಅಲ್ಲದೇ ಕರಾವಳಿಯ ಪಿಲಿ ನಲಿಕೆಗೆ ಹೆಜ್ಜೆ ಹಾಕಿ ಎಲ್ಲರ ಹುಬ್ಬೆರಗಾಗುವಂತೆ ಮಾಡಿದ್ದಾರೆ. ಮಕ್ಕಳ ಜೊತೆ ತಾನೂ ಮಗುವಾಗಿ ಮೈಮರೆತು ಹಾಡಿನ ನೃತ್ಯ ಮಾಡಿದ ಜಿಲ್ಲಾಧಿಕಾರಿಗಳ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಇದರ ಜೊತೆಗೆ ಯುವಕರ ಜೊತೆ ವಾಲಿಬಾಲ್ ಆಡುವ ಮೂಲಕವೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರು ಎಲ್ಲರ ಗಮನ ಸೆಳೆದಿದ್ದಾರೆ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಶೀಘ್ರದಲ್ಲೇ ಉಬರ್ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ
ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*ವು: ಮೂವರ ಬಂಧನ
ಕಾಸರಗೋಡು: ಮಹಿಳಾ ಪೊಲೀಸ್ಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ