ಕಾಸರಗೋಡು: ಇಲ್ಲಿನ ಕುಂಬಳೆ ಹಾಗೂ ಪರಿಸರ ಪ್ರದೇಶಗಳಲ್ಲಿ ಅಸಲಿ ನೋಟುಗಳ ಹಾವಳಿ ಹೆಚ್ಚಾಗಿದ್ದು, ವ್ಯಾಪಾರಿಗಳು ಇದರಿಂದ ಆತಂಕಕ್ಕೊಳಗಾಗಿದ್ದಾರೆ. ವಾರದ ಹಿಂದೆ ಕಳತ್ತೂರು ಹಾಗೂ ಬಂಬ್ರಾಣ ಪ್ರದೇಶಗಳಲ್ಲಿ ಯಾರೋ 200, 500ರೂ. ನೋಟುಗಳನ್ನು ಅಂಗಡಿಯವರಿಗೆ ನೀಡಿ ಯಾಮಾರಿಸಿದ್ದಾರೆ. ಅಂಗಡಿಗಳಲ್ಲಿ ಗ್ರಾಹಕರು ಹೆಚ್ಚಿದ್ದ ಕಾರಣ ಇದು ಗಮನಕ್ಕೆ ಬಂದಿರಲಿಲ್ಲ. ನೋಟು ಪರಿಶೀಲನೆ ಮಾಡುವಾಗ ಇದು ನಕಲಿ ಎಂದು ತಿಳಿದು ಬಂದಿದೆ.
ಅಸಲಿ ನೋಟುಗಳಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ಬರೆಯಲಾಗುತ್ತದೆ. ಆದರೆ ಈ ನಕಲಿ ನೋಟಿನಲ್ಲಿ ಆ ಜಾಗದಲ್ಲಿ ಫುಲ್ ಆಪ್ ಫನ್ ಎಂದು ಬರೆದಿದ್ದು ಬೇರೆ ಎಲ್ಲವೂ ಕೂಡಾ ಒರಿಜಿನಲ್ ನೋಟನ್ನು ಹೋಲುತ್ತಿದೆ. ಇನ್ನು ಗಾಂಧೀಜಿಯವರ ಭಾವಚಿತ್ರ ಅಸಲಿ ನೋಟಿನಲ್ಲಿದ್ದ ಹಾಗೆ ಇದ್ದು, ಅಸಲಿ ನೋಟಿನಷ್ಟೇ ಗಾತ್ರವನ್ನು ಹೊಂದಿದೆ. ಇಂತಹ ನೋಟುಗಳು ಚೈನೀಸ್ ಮಿಠಾಯಿಗಳ ಜೊತೆ ಲಭಿಸುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ. ಈ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಮಂಗಳೂರು/ಶಬರಿಮಲೆ: ಕಾಲ್ನಡಿಗೆಯಲ್ಲಿ ಅರ್ಣ್ಯ ಮಾರ್ಗವಾಗಿ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ನೀಡಲಗಿದ್ದ ವಿಶೇಷ ಪಾಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ತಿರುವಾಂಕೂರು ದೇವಸ್ವಂ ಮಂಡಳಿ (TDB) ಪ್ರಕಟಿಸಿದೆ.
ದೇವಸ್ವಂ ಮಂಡಳಿ ಸದಸ್ಯ ಎ.ಅಜಿಕುಮಾರ್ “ವರ್ಚುವಲ್ ಸರತಿ ವ್ಯವಸ್ಥೆ ಮತ್ತು ಸ್ಪಾಟ್ ಬುಕ್ಕಿಂಗ್ ಮಾಡಿ ಪಂಪಾ ಮೂಲಕ ಆಗಮಿಸುವ ಭಕ್ತರು ದರ್ಶನಕ್ಕಾಗಿ ದೀರ್ಘಾವಧಿ ಕಾಯುವ ಸಮಯವನ್ನು ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಅರಣ್ಯ ಮಾರ್ಗದಲ್ಲಿ ಸಂಚರಿಸುವ 5,000 ಭಕ್ತರಿಗೆ ವಿಶೇಷ ಪಾಸ್ ನೀಡುವ ವ್ಯವಸ್ಥೆ ಮಾಡಲಾಗಿತ್ತು.ಆದರೆ, ಅರಣ್ಯ ಮಾರ್ಗವಾಗಿ ಆಗಮಿಸುವ ಭಕ್ತರ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪಾಸ್ ನೀಡುವುದಕ್ಕೆ ನಿರ್ಬಂಧ ಹೇರಲಾಗಿದೆ. ಮುಂದಿನ ಸೂಚನೆ ಬರುವವರೆಗೂ ವಿಶೇಷ ಪಾಸ್‌ಗಳನ್ನು ನೀಡದಿರಲು ಮಂಡಳಿ ನಿರ್ಧರಿಸಿದೆ .ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಪಾದಯಾತ್ರೆ ಮಾಡುವ ಯಾತ್ರಾರ್ಥಿಗಳಿಗೆ ವಿಶೇಷ ದರ್ಶನ ವ್ಯವಸ್ಥೆಗಳನ್ನು ಕಳೆದ ತಿಂಗಳು ಪರಿಚಯಿಸಲಾಗಿತ್ತು. ಅಂತಹ ಯಾತ್ರಾರ್ಥಿಗಳಿಗೆ ಅರಣ್ಯ ಇಲಾಖೆಯಿಂದ ವಿಶೇಷ ಟ್ಯಾಗ್‌ಗಳನ್ನು ನೀಡಲಾಗಿದ್ದು, ದರ್ಶನಕ್ಕೆ ಪ್ರತ್ಯೇಕ ಸರತಿ ಸಾಲು ಸೇರಿದಂತೆ ಸವಲತ್ತುಗಳನ್ನು ನೀಡಲಾಗುತ್ತಿತ್ತು.
ಮಂಗಳೂರು/ಲಂಡನ್: ಡಿಸೆಂಬರ್ 6 ರಿಂದ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿಯ ಶ*ವ ಸ್ಕಾಟ್ಲೆಂಡಿನ ನದಿಯೊಂದರಲ್ಲಿ ಪತ್ತೆಯಾಗಿದೆ.
ಕೇರಳದ ಕೋಲೆಂಚೇರಿಯ ಮೂಲದ ಸಂತ್ರಾ ಸಾಜು ಅವರು ಸ್ಕಾಟಿಷ್ ನ ಎಡಿನ್ ಬರ್ಗ್ ನಲ್ಲಿರುವ ಹೆರಿಯಟ್-ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಡಿಸೆಂಬರ್ 6ರ ಸಂಜೆ ಲಿವಿಂಗ್ ಸ್ಟನ್ ನ ಆಲ್ಮಂಡ್ ವೇಲ್ ನಲ್ಲಿರುವ ಅಸ್ಡಾ ಸೂಪರ್ ಮಾರ್ಕೆಟ್ ನಲ್ಲಿ ಕೊನೆಯದಾಗಿ ಸಂತ್ರಾ ಕಾಣಿಸಿಕೊಂಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
‘ಡಿಸೆಂಬರ್ 27ರ ಬೆಳಿಗ್ಗೆ 11:55ರ ವೇಳೆ ಎಡಿನ್ ಬರ್ಗ್ ನ ನ್ಯೂಬ್ರಿಡ್ಜ್ ಬಳಿ ನದಿಯಲ್ಲಿ ಯುವತಿಯೊಬ್ಬಳ ಶ*ವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಸಂತ್ರಾ ಅವರ ಮೃ*ತದೇಹವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮೃ*ತದೇಹದ ಗುರುತು ಖಚಿತಪಡಿಸಿಕೊಳ್ಳಲು ಸಂತ್ರಾ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ’ ಎಂದು ಸ್ಕಾಟ್ಲೆಂಡ್ ಪೊಲೀಸರು ತಿಳಿಸಿದ್ದಾರೆ.
ಸಂತ್ರಾ ಅವರ ಸಾವಿನ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು/ಕೋಝಿಕ್ಕೋಡ್: ಮಲಯಾಳಂನ ಹಿರಿಯ ಸಾಹಿತಿ, ಗೀತರಚನೆಕಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ (91) ಬುಧವಾರ(ಡಿ.25) ತಡರಾತ್ರಿ ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ಎಂಟಿ ಯನ್ಕೆನುಲ ದಿನಗಳ ಹಿಂದೆಯಷ್ಟೇ ಬೇಬಿ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾ*ವನ್ನಪ್ಪಿದ್ದಾರೆ. ಅಗಲಿದ ಎಂಟಿ ವಾಸುದೇವನ್ ನಾಯರ್ ಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಡಿ. 26 ಮತ್ತು 27 ರಂದು ಅಧಿಕೃತ ಶೋ*ಕಾಚರಣೆ ಘೋಷಿಸಿದೆ. ಡಿಸೆಂಬರ್ 26ಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ. ಇಂದು (ಡಿ. 26)ರಂದು ಸಂಜೆ 5 ಗಂಟೆಗೆ ಮಾವೂರು ಸಾರ್ವಜನಿಕ ಚಿತಾಗಾರದಲ್ಲಿ ಅಂ*ತ್ಯಕ್ರಿಯೆ ನಡೆಯಲಿದೆ.
‘ನಿರ್ಮಾಲ್ಯಂ’ ಸೇರಿದಂತೆ 6 ಚಲನಚಿತ್ರಗಳು ಮತ್ತು ಎರಡು ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ, ಇದು ಮಲಯಾಳಂ ಚಿತ್ರರಂಗದ ಶ್ರೇಷ್ಠತೆಗಳಲ್ಲಿ ಒಂದಾಗಿದೆ. ಕಾದಂಬರಿ, ಸಣ್ಣ ಕಥೆ, ಚಿತ್ರಕಥೆ, ನಾಟಕ, ಮಕ್ಕಳ ಸಾಹಿತ್ಯ, ಪ್ರವಾಸ ಕಥನ, ಲೇಖನ ಹೀಗೆ ಬರವಣಿಗೆಯ ಎಲ್ಲ ಪ್ರಕಾರಗಳಲ್ಲೂ ತಮ್ಮ ಛಾಪು ಮೂಡಿಸಿರುವ ಎಂ.ಟಿ.ಯವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಮೆಚ್ಚಿ ಸರ್ಕಾರ 2005ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತು. ಅಷ್ಟು ಮಾತ್ರವಲ್ಲದೆ ಜ್ಞಾನಪೀಠ, ಎಜುತಚ್ಚನ್ ಪ್ರಶಸ್ತಿ, ವಯಲಾರ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವಲ್ಲತ್ತೋಳ್ ಪ್ರಶಸ್ತಿ, ಜೆ.ಸಿ. ಅವರು ಡೇನಿಯಲ್ ಪ್ರಶಸ್ತಿ ಸೇರಿದಂತೆ ಲೆಕ್ಕವಿಲ್ಲದಷ್ಟು ಗೌರವಗಳನ್ನು ಇವರು ಪಡೆದುಕೊಂಡಿದ್ದಾರೆ. ಅವರು ನಾಲ್ಕು ಬಾರಿ ಚಿತ್ರಕಥೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು 11 ಬಾರಿ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದರು. ಮೂರು ಬಾರಿ ಅತ್ಯುತ್ತಮ ನಿರ್ದೇಶಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದರು
ಮೃತರು ಪತ್ನಿ ಕಲಾಮಂಡಲಂ ಸರಸ್ವತಿ ಹಾಗೂ ಮಕ್ಕಳಾದ ಸಿತಾರಾ ಮತ್ತು ಅಶ್ವತಿಯನ್ನು ಅ*ಗಲಿದ್ದಾರೆ. ಎಂಟಿ ನಿ*ಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಗಣ್ಯಾತಿ ಗಣ್ಯರು ಸಂ*ತಾಪ ವ್ಯಕ್ತಪಡಿಸಿದ್ದಾರೆ.