Friday, May 27, 2022

ಕೊಲೆಗೆ ಸ್ಕೆಚ್‌ ಹಾಕುತ್ತಿದ್ದ ಕುಖ್ಯಾತ ರೌಡಿ ಆಕಾಶಭವನ ಶರಣ್ ಸೇರಿ ಐವರ ಬಂಧನ

ಮಂಗಳೂರು: ಸಹಚರರ ಮೂಲಕ ವಿರೋಧಿ ತಂಡದ ವ್ಯಕ್ತಿಯನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ ಆಕಾಶಭವನ ಶರಣ್ ಹಾಗೂ ಇತರ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಕುಖ್ಯಾತ ರೌಡಿ ಶರಣ್ ಆಕಾಶಭವನ ಅಲಿಯಾಸ್‌ ರೋಹಿದಾಸ್ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ, ಪ್ರಾಯ(22), ಪ್ರಸಾದ್ (39), ಚೇತನ್ ಕೊಟ್ಟಾರಿ(35) ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ
ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ ಡಿ.8 ರಂದು ರಾತ್ರಿ ಸುಮಾರು 11-30 ರ ಸುಮಾರಿಗೆ ಹಳೆಯಂಗಡಿ ನಿವಾಸಿಯೊಬ್ಬರು ದ್ವಿ ಚಕ್ರ ವಾಹನದಲ್ಲಿ ತೆರಳುತ್ತಿದ್ದರು.

ಈ ವೇಳೆ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಮೊಬೈಲ್ ಫೋನ್, 3000 ರೂಪಾಯಿ ನಗದು ಹಾಗೂ ಟಿವಿಎಸ್ ದ್ವಿಚಕ್ರವನ್ನು ಸುಲಿಗೆ ಮಾಡಿದ್ದರು.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ವೇಳೆ ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡಿದ್ದ ಆಕಾಶಭವನ ಶರಣ್ ಮತ್ತಿತರರು ಈ ಕೃತ್ಯ ಎಸಗಿದ್ದರು ಎಂಬ ಅಂಶ ಬಯಲಾಗಿದೆ.


ಆರೋಪಿಗಳ ಪೈಕಿ ಆಕಾಶಭವನ ಶರಣ್ ಎಂಬಾತನು ಈ ಪ್ರಕರಣದ ಪ್ರಮುಖ ಸೂತ್ರದಾರಿಯಾಗಿದ್ದು,

ಈತನು ಇತ್ತೀಚೆಗೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡವನು ತನ್ನ ಸಹಚರರೊಂದಿಗೆ ಸೇರಿ ಈ ಕೃತ್ಯವನ್ನು ಎಸಗಿರುವುದಾಗಿದೆ.

ಈ ಪ್ರಕರಣದಲ್ಲಿ ಈ ಕೃತ್ಯಕ್ಕೆ ಉಪಯೋಗಿಸಿದ ಮಹೇಂದ್ರ ಎಕ್ಸ್ ಯುವಿ ಕಾರು, 3 ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದರ ಜೊತೆಗೆ ಪ್ರಮುಖ ಆರೋಪಿ ಆಕಾಶಭವನ ಶರಣ್ ಸುಲಿಗೆ ಮಾಡಿದ್ದ ಮೊಬೈಲ್ ಫೋನ್ ಮೂಲಕ ತನ್ನ ಸಹಚರರ ಮೂಲಕ ವಿರೋಧಿ ತಂಡದವನೊಬ್ಬನ ಕೊಲೆಗೆ ಸ್ಕೆಚ್‌ ಹಾಕಿದ್ದ ಎಂಬ ಅಂಶ ವಿಚಾರಣೆ ವೇಳೆ ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Hot Topics