LATEST NEWS
ವಿಮಾನ ದುರಂತ- ಅಮೆಜಾನ್ ಕಾಡಿನಲ್ಲಿ 40 ದಿನಗಳ ಕಾಲ ಬದುಕುಳಿದಿದ್ದ 4 ಮಕ್ಕಳು..!
ಕೊಲಂಬಿಯಾದಿಂದ ತಾಯಿಯೊಬ್ಬರು ಸಣ್ಣ ವಿಮಾನದಲ್ಲಿ ಜಾಲಿ ರೈಡ್ ಗೆಂದು ತನ್ನ ನಾಲ್ಕು ಮಕ್ಕಳ ಜೊತೆಗೆ ಹೋಗಿದ್ದರು. ವಿಮಾನ ದುರಂತದಿಂದ ತಾಯಿ ಸಾವನ್ನಪ್ಪಿದ್ದು, ಜೊತೆಗಿದ್ದ ನಾಲ್ಕು ಮಕ್ಕಳು ಅಮೆಜಾನ್ ಕಾಡಿನಲ್ಲಿ ಸಿಕ್ಕಿದ್ದಾರೆ.
ಕೊಲಂಬಿಯಾ: ಕೊಲಂಬಿಯಾದಿಂದ ತಾಯಿಯೊಬ್ಬರು ಸಣ್ಣ ವಿಮಾನದಲ್ಲಿ ಜಾಲಿ ರೈಡ್ ಗೆಂದು ತನ್ನ ನಾಲ್ಕು ಮಕ್ಕಳ ಜೊತೆಗೆ ಹೋಗಿದ್ದರು.
ವಿಮಾನದ ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿತ್ತು. ಸ್ಥಳಕ್ಕೆ ಬಂದ ರಕ್ಷಣಾ ಅಧಿಕಾರಿಗಳಿಗೆ ತಾಯಿಯ ಶವ ದೊರೆತಿತ್ತು.
ಮಕ್ಕಳನ್ನು ಹುಡುಕುತ್ತಿರುವ ಸಂದರ್ಭ ಅರ್ಧ ತಿಂದ ಹಣ್ಣು, ಮಗುವಿನ ಹಾಲಿನ ಬಾಟಲಿ, ಚಪ್ಪಲಿಗಳು ಸಿಕ್ಕಿದ್ದವು.
ಹಾಗಾಗಿ ಮಕ್ಕಳು ಬದುಕುಳಿದಿರಬಹುದು ಎಂಬ ನಂಬಿಕೆಯಿಂದ ಹುಡುಕಾಟ ನಡೆಸಲಾಗಿದೆ.
ಒಬ್ಬ ದೊಡ್ಡ ಮಗನಿಗೆ 13 ವರ್ಷ, ಎರಡನೇದಕ್ಕೆ 9 ವರ್ಷ, ಮೂರನೇ ಮಗುವಿಗೆ 4 ವರ್ಷವಾಗಿದ್ದು, ಇನ್ನೋಂದು ಒಂದು ವರ್ಷದ ಮಗು ಎಂದು ತಿಳಿದು ಬಂದಿದೆ.
ಈ ಮಕ್ಕಳು ಹುಟಿಟೋ ಕಮ್ಯುನಿಟಿಯವರು. ಹುಟಿಟೋ ಜನರಿಗೆ ಕಾಡೆಂದರೆ ಭಯನೇ ಇಲ್ಲ.
ಹೀಗಾಗಿ ಮಕ್ಕಳು ಕಾಡಿಗೆ, ಅದರ ಸವಾಲಿಗೆ ಜಗ್ಗುವುದಿಲ್ಲ ಎಂಬುದು ಮಿಲಿಟರಿಯ ವಿಶ್ವಾಸ ಎನ್ನಲಾಗಿದೆ.
ಮಕ್ಕಳ ಅಜ್ಜಿಯ ಧ್ವನಿ ದಾಖಲಿಸಿ, ಮಕ್ಳೇ ಎಲ್ಲೂ ಹೋಗ್ಬೇಡಿ, ಅಲ್ಲೇ ಇರಿ ಎನ್ನುವ ಕೂಗನ್ನು ದೊಡ್ಡದಾಗಿ ಕಾಡೊಳಗೆ ಹರಿಯಬಿಡುತ್ತಾರೆ.
ನಲುವತ್ತು ದಿನಗಳ ಬಳಿಕ ಆ ನಾಲ್ಕೂ ಮಕ್ಕಳು ಅಮೆಜಾನ್ ಎಂಬ ದಟ್ಟಡವಿಯೊಳಗೆ ಪತ್ತೆಯಾಗಿದ್ದಾರೆ.
ಮಕ್ಕಳ ಜೊತೆ ಇರುವ ಫೋಟೋಗಳನ್ನು ಮಿಲಿಟರಿ ತಂಡ ಪ್ರಕಟಿಸಿದೆ.
ಈ ಮಕ್ಕಳು ವಿಮಾನ ಕ್ರಾಶ್ ಆಗಿಯೂ ಬದುಕಿದ್ದಾರೆ, ಅಮೆಜಾನ್ ಕಾಡೊಳಗೆ ನಲುವತ್ತು ದಿನ ಕಳೆದು ಬದುಕಿದ್ದಾರೆ.
ಮಕ್ಕಳು ಏನು ತಿಂದಿದ್ದಾರೆ, ಏನು ಕುಡಿದಿದ್ದಾರೆ ಅನ್ನೋದೆ ಅಚ್ಚರಿ.
ಆ ಅಡವಿಯ ಮೃಗಗಳೂ ಮಕ್ಕಳತ್ತ ಸುಳಿದಾಡಲಿಲ್ಲ. ಆ ಮೂವರು ಮಕ್ಕಳು ತನ್ನ ಪುಟಾಣಿ ಸಹೋದರನನ್ನು ಕ್ಷೇಮವಾಗಿ ನೋಡಿಕೊಂಡಿದ್ದಾರೆ.
ಬೀಜಗಳು, ಹಣ್ಣುಗಳು, ಬೇರುಗಳು ಮತ್ತು ಸಸ್ಯಗಳನ್ನು ಸಹ ಸೇವಿಸಿದ್ದು, ಬಳಲಿಕೆ, ದೈಹಿ ನೋವು, ಕೀಟಗಳಿಂದ ಕಚ್ಚಿಸಿಕೊಂಡಿದ್ದರು, ಇದೆಲ್ಲಕ್ಕೂ ಚಿಕಿತ್ಸೆ ನೀಡಲಾಗಿದೆ.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ