Connect with us

DAKSHINA KANNADA

ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ – ಶಾಸಕ‌ ಕಾಮತ್

Published

on

ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಹಿನ್ನಲೆ ಮಂಗಳೂರಿನಲ್ಲಿ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆಗೆ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಈಗಾಗಲೇ ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಕೋವಿಡ್ ಸೋಂಕಿತರು ಗುಣಮುಖರಾದ ಮೇಲೆ ಅವರ ರಕ್ತದ ದ್ರವ ಭಾಗವನ್ನು ಶೇಖರಿಸಿ ಚಿಕಿತ್ಸೆ ನೀಡುವ ವಿಧಾನವನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಸೋಂಕಿತ ವ್ಯಕ್ತಿಯು ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ದೇಹದಿಂದ ಪ್ಲಾಸ್ಮಾ ಸಂಗ್ರಹಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯನ್ನು ಮಂಗಳೂರಿನಲ್ಲಿ ಅಳವಡಿಸಬೇಕು.

ಒಬ್ಬ ವ್ಯಕ್ತಿಯಿಂದ ಸಂಗ್ರಹಿಸುವ ಪ್ಲಾಸ್ಮಾದಿಂದ ಗರಿಷ್ಠ 5 ಜನರಿಗೆ ಚಿಕಿತ್ಸೆ ನೀಡಬಹುದು ಎನ್ನುವುದನ್ನು ಈಗಾಗಲೇ ಅದ್ಯಯನದ ಮೂಲಕ ಕಂಡು ಹಿಡಿಯಲಾಗಿದೆ. ಹಾಗಾಗಿ ಸೋಂಕಿತರನ್ನು ಗುಣಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending