DAKSHINA KANNADA
‘ಗತಿ ಇಲ್ಲದವರು ನನ್ನನ್ನು ಸಾಕಬೇಡಿ’
ಕಡಬ: ‘ಗತಿ ಇಲ್ಲದವರು ನನ್ನನ್ನು ಸಾಕಬೇಡಿ, ದಯ ಮಾಡಿ ಬೈಕ್ ಸವಾರರ ಸಾವಿಗೆ ನನ್ನನ್ನು ಕಾರಣ ಮಾಡಬೇಡಿ’ ಎಂಬ ಒಕ್ಕಣೆ ಹೊಂದಿರುವ ಸೂಚನಾ ಫಲಕ ಹೊಂದಿರುವ ಆಡು ಒಂದು ಕಡಬ ಪೇಟೆಯಲ್ಲಿ ತಿರುಗಾಡುತ್ತಿದೆ.
ಸಾಕು ಪ್ರಾಣಿಗಳನ್ನು ಬೀದಿಗೆ ಬಿಟ್ಟರೆ ಮಾಲಕರ ವಿರುದ್ದ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ಪಟ್ಟಣ ಪಂಚಾಯತ್ ನೀಡಿತ್ತು.
ಆದರೂ ಕಡಬದ ಮುಖ್ಯ ಪೇಟೆಯಲ್ಲಿ ಮುಖ್ಯವಾಗಿ ಆಡುಗಳ ಹಾವಳಿ ತಪ್ಪಿಲ್ಲ.
ಬೀದಿಗೆ ಬರುವ ಸಾಕು ಪ್ರಾಣಿಗಳನ್ನು ನಿಯಂತ್ರಿಸಲು ಪ.ಪಂ ವಿಫಲಗೊಂಡಿದ್ದು ವಾಹನ ಸವಾರರು, ಸಾರ್ವಜನಿಕರು ಪ.ಪಂ ನ ಅವ್ಯವಸ್ಥೆಯ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ಇದೀಗ ಆಡೊಂದರ ಕುತ್ತಿಗೆಯಲ್ಲಿರುವ ಸೂಚನ ಫಲಕವೊಂದು ಸಾರ್ವಜನಿಕವಾಗಿ ಕಾಣಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಾಕು ಪ್ರಾಣಿಗಳ ಹಾವಳಿಯಿಂದ ರೋಸಿ ಹೋಗಿದ್ದ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ.ಪಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದರು, ಇದಾದ ಬಳಿಕ ಪ.ಪಂ ಧ್ವನಿ ವರ್ಧಕದ ಮೂಲಕ ಸಾಕು ಪ್ರಾಣಿಗಳನ್ನು ರಸ್ತೆಗೆ ಬಿಟ್ಟರೆ ಏಲಂ ಮಾಡುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.
ಆದರೂ ಪೇಟೆಯಲ್ಲಿ ದಿನವಿಡೀ ಆಡುಗಳ ಓಡಾಟಕ್ಕೆ ಕಡಿವಾಣ ಬಿದ್ದಿಲ್ಲ. ಇದೀಗ ಆಡೊಂದರ ಕುತ್ತಿಗೆಗೆ ನಾಮಫಲಕವನ್ನು ಯಾರು ಹಾಕಿದ್ದಾರೆಂಬ ಮಾಹಿತಿ ಇಲ್ಲ.
ಸಾರ್ವಜನಿಕರು ನಿರಂತರ ಧ್ವನಿ ಎತ್ತಿದರೂ ಯಾವುದೇ ಕ್ರಮ ಕೈಗೊಳ್ಳದಕ್ಕೆ ಇದೊಂದು ನಿದರ್ಶವಾಗಿರುವುದು ಮಾತ್ರ ಸುಳ್ಳಲ್ಲ.
ಈ ನಡುವೆ ಸಾರ್ವಜನಿಕರ ದೂರಿಗೆ ಸ್ವಂದಿಸದ ಪ.ಪಂ ವಿರುದ್ದ ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ಸಮಾನ ಮನಸ್ಕರ ತಂಡ ಸಿದ್ದತೆಯಲ್ಲಿರುವ ಬಗ್ಗೆ ಮಾಹಿತಿ ಲಭಿಸಿದೆ.
DAKSHINA KANNADA
ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!
ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿರುವ ಘಟನೆ ನಡೆದಿದೆ.
ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ. ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!
ಕೋಮಾಗೆ ಜಾರಿದ ಮಗು:
ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
DAKSHINA KANNADA
ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ
ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.
ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
DAKSHINA KANNADA
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.
ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್ ಕೈ..!! ವೀಡಿಯೋ ವೈರಲ್
- DAKSHINA KANNADA2 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- LATEST NEWS7 days ago
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
- FILM4 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- BELTHANGADY3 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು