Connect with us

    ‘ಶೇ.100ರಷ್ಟು ಹಣ ಮರುಪಾವತಿಗೆ ಸಿದ್ಧ ದಯವಿಟ್ಟು ಸ್ವೀಕರಿಸಿ’ ಅಂತ ಮತ್ತೊಮ್ಮೆ ಪ್ರಸ್ತಾವನೆ ಮುಂದಿಟ್ಟ ಮಲ್ಯ.!

    Published

    on

    ‘ಶೇ.100ರಷ್ಟು ಹಣ ಮರುಪಾವತಿಗೆ ಸಿದ್ಧ ದಯವಿಟ್ಟು ಸ್ವೀಕರಿಸಿ’ ಅಂತ ಮತ್ತೊಮ್ಮೆ ಪ್ರಸ್ತಾವನೆ ಮುಂದಿಟ್ಟ ಮಲ್ಯ.!

    ಲಂಡನ್: “ಭಾರತದ ವಿವಿಧ ಬ್ಯಾಂಕುಗಳಲ್ಲಿ ನಾನು ಮಾಡಿರುವ ಶೇ.100 ರಷ್ಟು ಹಣವನ್ನು ಹಿಂದಿರುಗಿಸಲು ನಾನು ಸಿದ್ದನಿದ್ದೇನೆ ದಯವಿಟ್ಟು ಈ ಹಣವನ್ನು ಪಡೆದುಕೊಳ್ಳಿ ಹಾಗೂ ನನ್ನ ಮೇಲಿನ ಪ್ರಕರಣವನ್ನು ಕೈಬಿಡಿ”,

    ಎಂದು ಮದ್ಯದ ದೊರೆ ವಿಜಯ ಮಲ್ಯ ಮತ್ತೊಮ್ಮೆ ಭಾರತದ ಸರ್ಕಾರದ ಎದುರು ಮನವಿ ಸಲ್ಲಿಸಿದ್ದಾರೆ.

    ಸುದೀರ್ಘ ಲಾಕ್‌ ಡೌನ್‌ ನಿಂದಾಗಿ ವಿವಿಧ ಸ್ತರದ ಭಾರತೀಯ ಜನ ಸಮೂಹ ಸಾಕಷ್ಟು ತೊಂದರೆಗೆ ಒಳಗಾಗಿದೆ.

    ದೇಶದ ಆರ್ಥಿಕತೆ ಕುಸಿದಿದೆ. ಹೀಗಾಗಿ ಆರ್ಥಿಕತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತ ಸರ್ಕಾರ ನಿನ್ನೆ 20 ಲಕ್ಷ ಕೋಟಿ ರೂ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿತ್ತು.

    ಈ ಬಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಭಾರತ ಸರ್ಕಾರದ ನಡೆಯನ್ನು ಪ್ರಶಂಶಿಸಿರುವ ವಿಜಯ ಮಲ್ಯ, “ತಮ್ಮ ಬಾಕಿ ಹಣವನ್ನು ಮರುಪಾವತಿಸಲು ಪದೇಪದೇ ನಾನು ನೀಡುತ್ತಿರುವ ಕರೆಯನ್ನು ನಿರ್ಲಕ್ಷಿಸಲಾಗುತ್ತಿದೆ” ಎಂದು ವಿಷಾದಿಸಿದ್ದಾರೆ.

    ಕೋವಿಡ್ 19 ಪರಿಹಾರ ಪ್ಯಾಕೇಜ್‌ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಸರ್ಕಾರ ಬಯಸಿದಷ್ಟು ಕರೆನ್ಸಿಯನ್ನು ಮುದ್ರಿಸಬಹುದು.

    ಆದರೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ ಶೇ.100 ರಷ್ಟು ಮರು ಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೆ?” ಎಂದು ಅವರು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

    ಅಂದಾಜು 9,000 ಕೋಟಿ ರೂ.ಗಳ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಭಾರತದಿಂದ ಲಂಡನ್‌ಗೆ ಪಲಾಯನ ಮಾಡಿ ತಲೆ ಮರೆಸಿಕೊಂಡಿರುವ ಕಿಂಗ್‌ ಫಿಶರ್‌ ಏರ್‌ ಲೈನ್ಸ್‌ ಮಾಲೀಕ ವಿಜಯ ಮಲ್ಯ,

    “ದಯವಿಟ್ಟು ನನ್ನ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು ಹೋಗಿ” ಎಂದು ಈವರೆಗೆ ಹಲವಾರು ಬಾರಿ ಭಾರತ ಸರ್ಕಾರದ ಎದುರು ಮನವಿ ಮಾಡಿದ್ದಾರೆ.

    ಆದರೆ, ಸರ್ಕಾರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.ಬದಲಾಗಿ ಆರ್ಥಿಕ ಅಪರಾಧಿ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ.

    ವಿಜಯ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್‌‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

    ಈ ಕುರಿತು ವ್ಯಾಜ್ಯ ಲಂಡನ್‌ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ವ್ಯಾಜ್ಯ ಮುಗಿಯುವವರೆಗೆ ಮಲ್ಯ ಭಾರತಕ್ಕೆ ಬರುವುದು ದೂರದ ಮಾತಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ

    Published

    on

    ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.


    ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್‌ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್‌, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ‌. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್​​ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
    ಇತ್ತ ಸುಮಿತ್‌ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
    ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.

    Continue Reading

    LATEST NEWS

    ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ

    Published

    on

    ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ.  ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

    ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್‌ ಹೈ ಅಲರ್ಟ್‌:
    “ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.

    ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

    Continue Reading

    LATEST NEWS

    ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು

    Published

    on

    ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್‌ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ

    ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್‌ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

    Continue Reading

    LATEST NEWS

    Trending