Friday, July 1, 2022

ಪ್ರಧಾನಿ ಸೇನಾ ಸಮವಸ್ತ್ರ ಧರಿಸಿದ್ದಕ್ಕೆ ನೋಟೀಸ್‌ ನೀಡಿದ ಯುಪಿ ಜಿಲ್ಲಾ ಕೋರ್ಟ್‌

ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೇನಾ ಸಮವಸ್ತ್ರ ಧರಿಸಿ ಯೋಧರ ಜೊತೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದರು.

ಇದೀಗ ಸೇನಾ ಸಮವಸ್ತ್ರ ಧರಿಸಿದ್ದಕ್ಕೆ ಪ್ರಧಾನಮಂತ್ರಿ ಕಚೇರಿಗೆ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.


ಸೇನಾ ಸಮವಸ್ತ್ರ ಧರಿಸಿದ್ದಕ್ಕಾಗಿ ಪ್ರಯಾಗ್‌ರಾಜ್ ಜಿಲ್ಲಾ ನ್ಯಾಯಾಲಯ ಪ್ರಧಾನಿ ಕಾರ್ಯಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಸೇನಾ ಸಮವಸ್ತ್ರದಲ್ಲಿರುವ ಮೋದಿ ಶಿಕ್ಷಾರ್ಹ ಅಪರಾಧ ಎಂದು ಕೋರ್ಟ್​ ಹೇಳಿದೆ.

ಸೇನಾ ಸಮವಸ್ತ್ರ ಧರಿಸುವುದು ಐಪಿಸಿ ಸೆಕ್ಷನ್ 140 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಪ್ರತಿಪಾದಿಸಿ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು.

ಭಾರತೀಯ ದಂಡ ಸಂಹಿತೆಯ 140ನೇ ವಿಧಿಯ ಪ್ರಕಾರ ಸೈನಿಕರು, ನಾವಿಕರು ಅಥವಾ ವಾಯುಸೇನಾ ಸಿಬ್ಬಂದಿ ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ.

ಹೀಗಾಗಿ ಕೋರ್ಟ್ ‌ನೋಟಿಸ್​ ನೀಡಿದ್ದು, ಈ ಸಂಬಂಧ ಮಾರ್ಚ್ 2ರಂದು ವಿಚಾರಣೆ ನಡೆಸಲಿದೆ. ವಕೀಲ ರಾಕೇಶ್ ಪಾಂಡೆ ಅನ್ನೋರು ಐಪಿಸಿ ಸೆಕ್ಷನ್ 153 (3) ಅಡಿಯಲ್ಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲಾಗಿದೆ.


ನವೆಂಬರ್ 4, 2021 ರಂದು ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಪ್ರಧಾನಿ ಸೇನಾ ಸಮವಸ್ತ್ರವನ್ನು ಧರಿಸಿದ್ದರು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಮೋದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಕನ್ಹಯ್ಯಾಲಾಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜೈಪುರ: ದೇಶಾದ್ಯಂತ ಸುದ್ದಿಯಾದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಖ್ತರ್ ಮತ್ತು ಮೊಹಮ್ಮದ್ ಗೌಸ್ ಉದಯಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...