ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರತ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಇಂದು ಏಳು ವರ್ಷಗಳನ್ನು ಪೂರೈಸಿದೆ.
ಈ ಹಿನ್ನೆಲೆಯಲ್ಲಿ ಸೇವೆಯೇ ಸಂಘಟನೆ ಕಾರ್ಯಕ್ರಮದ ಪ್ರಯುಕ್ತ ಮಂಗಳೂರು ನಗರದ ಮಣ್ಣಗುಡ್ಡೆಯ ಗಾಂಧಿ ಪಾರ್ಕ್ ನಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ಲೇಡಿಹಿಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಿಜೆಪಿ ರಾಜ್ಯಾಧ್ಯಕ್ಷರು,ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ವೇದವ್ಯಾಸ ಕಾಮತ್ , ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆಯ ಇತರ ಸದಸ್ಯರು ಮತ್ತಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.