ಕೊಲ್ಲಾಪುರ: ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ಕೇವಲ 2 ಗಂಟೆ ಮಾತ್ರ ನಿದ್ರೆ ಮಾಡುತ್ತಿದ್ದು, 24 ಗಂಟೆಯೂ ನಿದ್ರೆಯಿಲ್ಲದೇ ದೇಶಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
ಕೊಲ್ಲಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ಕೇವಲ 2 ಗಂಟೆ ನಿದ್ರೆ ಮಾಡುತ್ತಿದ್ದು,
ದೇಶಕ್ಕಾಗಿ 22 ಗಂಟೆ ಕೆಲಸ ಮಾಡುತ್ತಿದ್ದಾರೆ. ಅದಲ್ಲದೇ ಅವರು ನಿದ್ರೆಯೇ ಮಾಡದೇ ಪ್ರತಿ ನಿಮಿಷವೂ ದೇಶ ಸೇವೆ ಮಾಡುವ ಬಗ್ಗೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಅವರು ಒಂದು ಕ್ಷಣವನ್ನೂ ಸಹ ಹಾಳು ಮಾಡಲು ಇಷ್ಟಪಡುವುದಿಲ್ಲ. ಅದಕ್ಕಾಗಿ ಅವರು ಸಂಪೂರ್ಣ ನಿದ್ರೆಯನ್ನು ತ್ಯಜಿಸಿ 24 ಗಂಟೆಯೂ ದೇಶಕ್ಕಾಗಿ ಕೆಲಸ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
ಅದಲ್ಲದೇ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದು, ದೇಶದ ಯಾವುದೇ ಭಾಗದಲ್ಲಿ ಉಂಟಾಗುವ ಘಟನೆಗಳ ಬಗ್ಗೆ ಸ್ಪಷ್ಟ ಮಾಹಿತಿ ಹೊಂದಿರುತ್ತಾರೆ ಎಂದಿದ್ದಾರೆ.