Connect with us

DAKSHINA KANNADA

Good news: ಬಹುನಿರೀಕ್ಷಿತ ಮಂಗಳೂರು – ಕೊಚ್ಚಿ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಇಂದು ಪ್ರಧಾನಿಯಿಂದ ದೇಶಕ್ಕೆ ಸಮರ್ಪಣೆ…

Published

on

Good news: ಬಹುನಿರೀಕ್ಷಿತ ಮಂಗಳೂರು – ಕೊಚ್ಚಿ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಇಂದು ಪ್ರಧಾನಿಯಿಂದ ದೇಶಕ್ಕೆ ಸಮರ್ಪಣೆ…

ಮಂಗಳೂರು : ಕಳೆದ ಆನೇಕ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಹು ನಿರೀಕ್ಷಿತ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಇಂದು ( ಜನವರಿ 5 ರಂದು ) ಲೋಕಾರ್ಪಣೆಗೊಳ್ಳಲಿದೆ.

ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.

ಈ ಯೋಜನೆ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿರುತ್ತಾರೆ.

450 ಕಿ.ಮೀ. ಉದ್ದದ ಈ ಕೊಳವೆ ಮಾರ್ಗವನ್ನು ಗೇಲ್ ಇಂಡಿಯಾ ಲಿ ನಿರ್ಮಾಣಮಾಡಿದೆ.

ಇದು ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯುಬಿಕ್ ಮೀಟರ್ ಅನಿಲ ಸಾಗಿಸುವ ಸಾಮರ್ಥ್ಯವನ್ನು ಹೊಂದಿದ್ದು, ಕೇರಳದ ಕೊಚ್ಚಿಯ ಧ್ರವೀಕೃತ ನೈಸರ್ಗಿಕ ಅನಿಲ (ಎನ್.ಎನ್.ಜಿ) ಮರುಹೊಂದಾಣಿಕೆ ಟರ್ಮಿನಲ್ ನಿಂದ ಎರ್ನಾಕುಲಂ, ತ್ರಿಸ್ಸೂರ್, ಪಾಲಕ್ಕಾಡ್, ಮಲ್ಲಪುರಂ, ಕೋಳಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಮೂಲಕ ಹಾದೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸುತ್ತದೆ.

ಯೋಜನೆಯ ಒಟ್ಟು ವೆಚ್ಚ ಸುಮಾರು 3000 ಕೋಟಿ ರೂ.ಗಳಾಗಿದ್ದು, ಅದರ ನಿರ್ಮಾಣವು 12 ಲಕ್ಷ ಮಾನವ-ದಿನಗಳ ಉದ್ಯೋಗವನ್ನು ಸೃಷ್ಟಿಸಿತ್ತು.

ಕೊಳವೆ ಮಾರ್ಗ ಅಳವಡಿಕೆಯು ಎಂಜಿನಿಯರಿಂಗ್ ಸವಾಲಾಗಿತ್ತು, ಏಕೆಂದರೆ ಕೊಳವೆ ಮಾರ್ಗವು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಲಮೂಲಗಳನ್ನು ದಾಟುವುದು ಅನಿವಾರ್ಯವಾಗಿತ್ತು.

ಇದನ್ನು ಅಡ್ಡಡ್ಡ ಕೊರೆಯುವ ವಿಧಾನದ ವಿಶೇಷ ತಂತ್ರಜ್ಞಾನದ ಮೂಲಕ ಮಾಡಲಾಗಿದೆ. ಈ ಕೊಳವೆ ಮಾರ್ಗ ಪರಿಸರ ಸ್ನೇಹಿ ಮತ್ತು ಕೈಗೆಟಕುವ ದರದ ಇಂಧನವನ್ನು ಕೊಳವೆ ಮಾರ್ಗದ ನೈಸರ್ಗಿಕ ಅನಿಲ ಮನೆಗಳಿಗೆ ಪೂರೈಸಲಿದೆ ಮತ್ತು ಸಿ.ಎನ್.ಜಿ ಯನ್ನು ಸಾರಿಗೆ ವಲಯಕ್ಕೆ ಸರಬರಾಜು ಮಾಡಲಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳಿಗೆ ಕೊಳವೆ ಮಾರ್ಗದಲ್ಲಿ ಪೂರೈಸಲಿದೆ. ಈ ಶುದ್ಧ ಇಂಧನದ ಬಳಕೆಯು ವಾಯು ಮಾಲಿನ್ಯವನ್ನು ನಿಗ್ರಹಿಸಿಸುವ ಮೂಲಕ ವಾಯು ಗುಣಮಟ್ಟವನ್ನು ಸುಧಾರಿಸುತ್ತದೆ.

ನೇರಾ ಪ್ರಸಾರ..Live

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending